AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Char Dham Yatra: ಚಾರ್​ಧಾಮ್ ಯಾತ್ರೆಗೆ ಭೂಕುಸಿತದ ಆತಂಕ; ಬದರಿನಾಥದ ಹೆದ್ದಾರಿಯಲ್ಲಿ ಬಿರುಕು

ಜೋಶಿಮಠದಲ್ಲಿ ಇತ್ತೀಚೆಗೆ ಸಂಭವಿಸಿದ್ದ ಬಿರುಕಿಗೂ ಇದಕ್ಕೂ ಸಂಬಂಧವಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕಿದೆ ಎಂದು ಹಿರಿಯ ಭೂವಿಜ್ಞಾನಿಯೊಬ್ಬರು ತಿಳಿಸಿದ್ದಾರೆ.

Char Dham Yatra: ಚಾರ್​ಧಾಮ್ ಯಾತ್ರೆಗೆ ಭೂಕುಸಿತದ ಆತಂಕ; ಬದರಿನಾಥದ ಹೆದ್ದಾರಿಯಲ್ಲಿ ಬಿರುಕು
ಜೋಶಿಮಠದಲ್ಲಿ ರಸ್ತೆಯೊಂದು ಬಿರುಕು ಬಿಟ್ಟಿರುವುದರ ಸಂಗ್ರಹ ಚಿತ್ರ (ಪಿಟಿಐ ಸಂಗ್ರಹ ಚಿತ್ರ)Image Credit source: PTI
Follow us
Ganapathi Sharma
|

Updated on: Feb 20, 2023 | 8:13 AM

ಡೆಹ್ರಾಡೂನ್: ಚಾರ್​ಧಾಮ್ ಯಾತ್ರೆ (Char Dham Yatra) ದಿನಾಂಕವನ್ನು ಉತ್ತರಾಖಂಡ ಸರ್ಕಾರ ಘೋಷಿಸಿದ ಬೆನ್ನಲ್ಲೇ ಬದರಿನಾಥದ (Badrinath) ಹೆದ್ದಾರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ಭೂಕುಸಿತದ ಆತಂಕ ಎದುರಾಗಿದೆ. ಇದೀಗ ಜೋಶಿಮಠ (Joshimath) ಸಮೀಪ ಬದರಿನಾಥದ ಹೆದ್ದಾರಿಯಲ್ಲಿ 10 ಕಡೆ ದೊಡ್ಡ ಮಟ್ಟದ ಬಿರುಕು ಕಾಣಿಸಿಕೊಂಡಿದೆ. ಜೋಶಿಮಠ ಮತ್ತು ಮರ್​ವಾರಿ ಮಾರ್ಗ ಮಧ್ಯೆ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಹೆದ್ದಾರಿಯು ದೇಗುಲ ಪಟ್ಟಣವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ. 10 ಕಡೆ ಹೊಸ ಬಿರುಕುಗಳು ಕಾಣಿಸಿಕೊಂಡಿವೆ. ಈ ಮೊದಲು ಕಾಣಿಸಿದ್ದ ಬಿರುಕುಗಳು ದೊಡ್ಡದಾಗುತ್ತಿವೆ ಎಂದು ‘ಜೋಶಿಮಠ ಉಳಿಸಿ ಸಂಘರ್ಷ ಸಮಿತಿ’ಯ ಕಾರ್ಯಕರ್ತ ಸಂಜಯ್ ಉನಿಯಾಲ್ ತಿಳಿಸಿದ್ದಾರೆ. ಈ ಹಿಂದೆ ಕಾಣಿಸಿಕೊಂಡಿದ್ದ ಬಿರುಕುಗಳನ್ನು ಮುಚ್ಚುವ ಕೆಲಸವನ್ನು ಆಡಳಿತ ಮಾಡಿತ್ತು. ಆದರೆ, ಅವುಗಳು ಮತ್ತೆ ಬಿರುಕುಬಿಟ್ಟಿದ್ದು, ದೊಡ್ಡದಾಗುತ್ತಿವೆ ಎಂದು ಉನಿಯಾಲ್ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಜೋಶಿಮಠದಲ್ಲಿ ಇತ್ತೀಚೆಗೆ ಸಂಭವಿಸಿದ್ದ ಬಿರುಕಿಗೂ ಇದಕ್ಕೂ ಸಂಬಂಧವಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕಿದೆ ಎಂದು ಹಿರಿಯ ಭೂವಿಜ್ಞಾನಿಯೊಬ್ಬರು ತಿಳಿಸಿದ್ದಾರೆ. ಬಿರುಕಿಗೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: Kedarnath Temple: ಶಿವನ ದರ್ಶನಕ್ಕೆ ಶುಭ ಮುಹೂರ್ತ ಫೀಕ್ಸ್, ಕೇದಾರನಾಥ ದೇವಾಲಯದ ಬಾಗಿಲು ಏಪ್ರಿಲ್ 25ಕ್ಕೆ ಓಪನ್

ಜೋಶಿಮಠ ಪಟ್ಟಣದ ಹಲವೆಡೆಗಳಲ್ಲಿ ಇತ್ತೀಚೆಗೆ ಭೂಕುಸಿತ ಕಂಡುಬಂದಿದ್ದು ಸುಮಾರು 500 ಕುಟುಂಬಗಳನ್ನು ಸ್ಥಳಾಂತರಗೊಳಿಸಲಾಗಿತ್ತು.

ಫೆಬ್ರವರಿ 25ರಿಂದ ಕೇದಾರನಾಥನ ದರ್ಶನ

ಕೇದಾರನಾಥ ಧಾಮದ ಬಾಗಿಲು ಏಪ್ರಿಲ್ 25ಕ್ಕೆ ತೆರೆಯಲಾಗುತ್ತದೆ ಎಂದು ಉತ್ತರಾಖಂಡ ಸರ್ಕಾರ ಶನಿವಾರ ಘೋಷಿಸಿತ್ತು. ಈ ವರ್ಷ ಮೇಘ ಲಗ್ನದಲ್ಲಿ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲಿದೆ. ಏಪ್ರಿಲ್ 25ರಂದು ಬೆಳಗ್ಗೆ 6.20ಕ್ಕೆ ದೇವಸ್ಥಾನದ ಬಾಗಿಲು ತೆರೆಯಲಿದೆ ಎಂದು ಉತ್ತರಾಖಂಡ ಸರ್ಕಾರ ಶನಿವಾರ ತಿಳಿಸಿತ್ತು. ಕೇದಾರನಾಥ ದೇಗುಲದ ಬಾಗಿಲು ತೆರೆಯುವುದರೊಂದಿಗೆ ಚಾರ್​​ಧಾಮ್ ಯಾತ್ರೆ ಆರಂಭವಾಗಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್