Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಮಾಜಿ ಶಾಸಕ ಸೇರಿದಂತೆ ಮೂವರ ಬಂಧನ: ಸಿಎಂ ಬಿರೇನ್ ಸಿಂಗ್

ಕುಕಿ, ಮೈತಿ ಮತ್ತು ಇತರ ಜನಾಂಗೀಯ ಗುಂಪುಗಳು ಜತೆಯಾಗಿರುವ ನ್ಯೂ ಚೆಕ್‌ಕಾನ್‌ನ ಮುಖ್ಯ ಮಾರುಕಟ್ಟೆಗೆ ಬೆಂಕಿ ಹಚ್ಚಲಾಗಿದೆ,. ಸೋಮವಾರ ಬೆಳಗ್ಗೆ ಕರ್ಫ್ಯೂ ಸಡಿಲಿಕೆ ಸಮಯದಲ್ಲಿ, ಮಾಜಿ ಶಾಸಕರ ನೇತೃತ್ವದಲ್ಲಿ ಬಂದೂಕುಗಳನ್ನು ಹಿಡಿದ ಜನರ ಗುಂಪು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ವ್ಯಾಪಾರಿಗಳಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಬೆದರಿಕೆಯೊಡ್ಡಿದ್ದರು.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಮಾಜಿ ಶಾಸಕ ಸೇರಿದಂತೆ ಮೂವರ ಬಂಧನ: ಸಿಎಂ ಬಿರೇನ್ ಸಿಂಗ್
ಮಣಿಪುರ ಸಿಎಂ ಬಿರೇನ್ ಸಿಂಗ್
Follow us
ರಶ್ಮಿ ಕಲ್ಲಕಟ್ಟ
|

Updated on:May 22, 2023 | 8:58 PM

ಮಣಿಪುರದ (Manipur Violence) ರಾಜಧಾನಿ ಇಂಫಾಲ್​​ದಲ್ಲಿ (Imphal) ಸೋಮವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ಜನರ ಗುಂಪು ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಭಾನುವಾರ ರಾತ್ರಿ, ಇಂಫಾಲ್ ಪಶ್ಚಿಮ ಜಿಲ್ಲೆಯ ಒಂದು ಪ್ರದೇಶದಲ್ಲಿ ಹಿಂಸಾಚಾರ ನಡೆದಿದ್ದು, ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದರಿಂದ ಮೂವರು ಗಾಯಗೊಂಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (N Biren Singh)ಬೆಳವಣಿಗೆಗಳನ್ನು ದೃಢಪಡಿಸಿದ್ದು, ಸಂಬಂಧಪಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಹಿಂಸಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ ಮಾಜಿ ಶಾಸಕ ಸೇರಿದಂತೆ ಮೂವರನ್ನು ಸೋಮವಾರ ಬಂಧಿಸಲಾಗಿದೆ. ಮಾಜಿ ಶಾಸಕರನ್ನು ಚುರಾಚಂದಪುರ ಜಿಲ್ಲೆಯ ಹೆಂಗ್ಲೆಪ್ ಕ್ಷೇತ್ರದ ಟಿ ತಂಗಜಲಂ ಹಾಕಿಪ್ ಎಂದು ಗುರುತಿಸಲಾಗಿದೆ.

ಭಾನುವಾರ ರಾತ್ರಿ, ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಳಸಿದ ಡಬಲ್ ಬ್ಯಾರೆಲ್ ಗನ್‌ಗಳೊಂದಿಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸಿಂಗ್ ಹೇಳಿದರು.

ಸೋಮವಾರ ಇಂಫಾಲ್ ನಗರದ ನ್ಯೂ ಲಂಬುಲೇನ್ ಭಾಗದಲ್ಲಿ ಮತ್ತೊಂದು ಸಣ್ಣ ಘಟನೆ ನಡೆದಿದೆ. ಮಾಜಿ ಶಾಸಕರೊಬ್ಬರು ಈ ಷಡ್ಯಂತ್ರದಲ್ಲಿ ಭಾಗಿಯಾಗಿರುವುದು ಅತ್ಯಂತ ದುರದೃಷ್ಟಕರ. ಸಿಂಗಲ್ ಬ್ಯಾರೆಲ್ ಬಂದೂಕುಗಳನ್ನು ಹೊತ್ತ ಇಬ್ಬರು ಶಸ್ತ್ರಸಜ್ಜಿತ ಸಿಬ್ಬಂದಿ, ಮಾರಾಟಗಾರರನ್ನು ಬೆದರಿಸಿ ಪ್ರದೇಶವನ್ನು ಖಾಲಿ ಮಾಡುವಂತೆ ಕೇಳಿಕೊಂಡರು. ಮಾಜಿ ಶಾಸಕರ ಜೊತೆಗೆ ಈ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ,.

ಕಳೆದ 10 ದಿನಗಳಿಂದ ಮಣಿಪುರದಲ್ಲಿ ಪರಿಸ್ಥಿತಿಯು ಶಾಂತಿಯುತವಾಗಿತ್ತು. ರಾಜ್ಯದ ಜನರು ಶಾಂತವಾಗಿರಿ. ಶೀಘ್ರದಲ್ಲೇ ಶಾಂತಿ ಮತ್ತು ಸಹಜತೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡಿ ಎಂದು ಸಿಎಂ ಸಿಂಗ್ ಮನವಿ ಮಾಡಿದ್ದಾರೆ.

ಅಧಿಕಾರಿಗಳ ಪ್ರಕಾರ ಸೋಮವಾರದ ಘಟನೆಯು ಇಂಫಾಲ್ ಪೂರ್ವ ಜಿಲ್ಲೆಯ ನ್ಯೂ ಲಂಬುಲೇನ್‌ನ ನ್ಯೂ ಚೆಕ್‌ಕಾನ್ ಮಾರುಕಟ್ಟೆ ಪ್ರದೇಶದಲ್ಲಿ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ನಡೆದಿದೆ.

ಕುಕಿ, ಮೈತಿ ಮತ್ತು ಇತರ ಜನಾಂಗೀಯ ಗುಂಪುಗಳು ಜತೆಯಾಗಿರುವ ನ್ಯೂ ಚೆಕ್‌ಕಾನ್‌ನ ಮುಖ್ಯ ಮಾರುಕಟ್ಟೆಗೆ ಬೆಂಕಿ ಹಚ್ಚಲಾಗಿದೆ,. ಸೋಮವಾರ ಬೆಳಗ್ಗೆ ಕರ್ಫ್ಯೂ ಸಡಿಲಿಕೆ ಸಮಯದಲ್ಲಿ, ಮಾಜಿ ಶಾಸಕರ ನೇತೃತ್ವದಲ್ಲಿ ಬಂದೂಕುಗಳನ್ನು ಹಿಡಿದ ಜನರ ಗುಂಪು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ವ್ಯಾಪಾರಿಗಳಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಬೆದರಿಕೆಯೊಡ್ಡಿದ್ದರು.

ಹಿಂಸಾಚಾರದ ನಂತರ ರಾಜಧಾನಿ ಪ್ರದೇಶದಲ್ಲಿ ಕರ್ಫ್ಯೂ ಸಡಿಲಿಕೆಯನ್ನು ಎರಡು ಗಂಟೆಗಳಷ್ಟು ಕಡಿಮೆ ಮಾಡಲಾಗಿದೆ. ಮುಂಜಾನೆ 6ರಿಂದ ಸಂಜೆ 4ರವರೆಗೆ ಕರ್ಫ್ಯೂ ಸಡಿಲಿಸಲಾಗಿತ್ತು. ಇದೀಗ ವಿಶ್ರಾಂತಿಯನ್ನು ಮೊಟಕುಗೊಳಿಸಲಾಗಿದ್ದು, ಮಧ್ಯಾಹ್ನ 2 ಗಂಟೆಗೆ ಮುಕ್ತಾಯವಾಗಲಿದೆ. ಕಳೆದ ದಿನಗಳಲ್ಲಿ ಕೆಲವು ಸ್ಥಳಗಳಲ್ಲಿ ವಿರಳವಾದ ಹಿಂಸಾಚಾರದ ಘಟನೆಗಳು ನಡೆಯುತ್ತಿವೆ, ಆದರೆ ಇತ್ತೀಚೆಗೆ ಯಾವುದೇ ದೊಡ್ಡ ಮಟ್ಟದಲ್ಲಿ ಹಿಂಸಾಚಾರ ಅಥವಾ ಜೀವಹಾನಿ ಸಂಭವಿಸಿಲ್ಲ. ಅಂತಹ ಘಟನೆಗಳು ನಡೆದಾಗ, ರಾಜ್ಯದಲ್ಲಿ ಈಗಾಗಲೇ ನಿಯೋಜಿಸಲಾದ ಸೇನೆ ಮತ್ತು ಅರೆ ಮಿಲಿಟರಿ ಪಡೆಗಳು ಈ ಸ್ಥಳಗಳನ್ನು ತಲುಪಿ ವಿಷಯಗಳನ್ನು ನಿಯಂತ್ರಣಕ್ಕೆ ತರುತ್ತವೆಎಂದು ಗುವಾಹಟಿಯ PRO (ರಕ್ಷಣೆ) ಲೆಫ್ಟಿನೆಂಟ್ ಕರ್ನಲ್ ಮಹೇಂದರ್ ರಾವತ್ ಹೇಳಿದರು.

ಇದನ್ನೂ ಓದಿ: ಖರ್ಗೆ, ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ನಿತೀಶ್ ಕುಮಾರ್; ವಿಪಕ್ಷಗಳನ್ನು ಒಗ್ಗೂಡಿಸುವುದೇ ಅಜೆಂಡಾ

ಭಾನುವಾರ, ಮಣಿಪುರ ಸರ್ಕಾರವು ಮೇ 3 ರಂದು ಪ್ರಾರಂಭವಾದ ಇಂಟರ್ನೆಟ್ ಸೇವೆಗಳ ಮೇಲಿನ ನಿರ್ಬಂಧಗಳನ್ನು ಮೇ 26 ರ ಮಧ್ಯಾಹ್ನ 3 ರವರೆಗೆ ಇನ್ನೂ ಐದು ದಿನಗಳವರೆಗೆ ವಿಸ್ತರಿಸಿದೆ. ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಯಾವುದೇ ಅಡಚಣೆಗಳನ್ನು ತಡೆಗಟ್ಟಲು ಮತ್ತು ತಪ್ಪು ಮಾಹಿತಿ ಮತ್ತು ಸುಳ್ಳು ವದಂತಿಗಳನ್ನು ಹರಡುವುದನ್ನು ತಡೆಯಲು ಇದನ್ನು ಮಾಡಲಾಗುತ್ತಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮೇ 3 ರಂದು ಮಣಿಪುರದ ಹಲವು ಭಾಗಗಳಲ್ಲಿ ಜನಾಂಗೀಯ ಹಿಂಸಾಚಾರವು ಪ್ರಾರಂಭವಾಯಿತು. ಮೇ 5 ರವರೆಗೆ ಪ್ರಬಲವಾದ ಮೈತಿ ಸಮುದಾಯಕ್ಕೆ ST ಸ್ಥಾನಮಾನವನ್ನು ನೀಡುವ ಪ್ರಸ್ತಾಪಕ್ಕೆ ಬುಡಕಟ್ಟು ಗುಂಪುಗಳು ವಿರೋಧ ವ್ಯಕ್ತಪಡಿಸಿ ನಡೆಸಿದ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಹಿಂಸಾಚಾರ 70 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ ಮತ್ತು 30,000 ಕ್ಕೂ ಹೆಚ್ಚು ಜನರ ಸ್ಥಳಾಂತರಕ್ಕೆ ಕಾರಣವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:56 pm, Mon, 22 May 23

ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ