AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಜಿನಗರ ಅಖಾಡಾದಲ್ಲಿ ಹೈಡ್ರಾಮಾ: ನಾಮಪತ್ರ ಹಿಂಪಡೆಯುವ ನಿರ್ಧಾರ ಬದಲಿಸಿ ಯು-ಟರ್ನ್ ಹೊಡೆದ ಟಿಎಂಸಿ ಅಭ್ಯರ್ಥಿ!

ಪಶ್ಚಿಮ ಬಂಗಾಳದ ರೆಜಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರಿ ರಾಜಕೀಯ ಹೈಡ್ರಾಮಾ ನಡೆದಿದೆ. ಶನಿವಾರ ಬೆಳಿಗ್ಗೆಷ್ಟೇ ನಾಮಪತ್ರ ಹಿಂಪಡೆಯುವುದಾಗಿ ಹೇಳಿದ್ದ ಟಿಎಂಸಿ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ, ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತನಾಡಿದ ಬಳಿಕ ಯು-ಟರ್ನ್ ಹೊಡೆದಿದ್ದು, ಕಣದಲ್ಲೇ ಉಳಿಯುವುದಾಗಿ ಘೋಷಿಸಿದ್ದಾರೆ

ರೆಜಿನಗರ ಅಖಾಡಾದಲ್ಲಿ ಹೈಡ್ರಾಮಾ: ನಾಮಪತ್ರ ಹಿಂಪಡೆಯುವ ನಿರ್ಧಾರ ಬದಲಿಸಿ ಯು-ಟರ್ನ್ ಹೊಡೆದ ಟಿಎಂಸಿ ಅಭ್ಯರ್ಥಿ!
ಮಮತಾ ಬ್ಯಾನರ್ಜಿ ಮತ್ತು ರಬಿಯುಲ್ ಚೌಧರಿ
ಭಾವನಾ ಹೆಗಡೆ
|

Updated on:Sep 19, 2026 | 2:19 PM

Share

ಮುಖ್ಯಾಂಶಗಳು

  • ರೆಜಿನಗರ ಉಪಚುನಾವಣೆಯಿಂದ ಹಿಂದೆ ಸರಿಯುವ ತೀರ್ಮಾನ ಹಿಂತೆಗೆದುಕೊಂಡ ಟಿಎಂಸಿ ಅಭ್ಯರ್ಥಿ ರಬಿಯುಲ್.
  • ನಾಯಕಿ ಮಮತಾ ಬ್ಯಾನರ್ಜಿ ನೀಡಿದ ಸೂಚನೆಯ ಮೇರೆಗೆ ಸ್ಪರ್ಧೆಯಲ್ಲಿ ಉಳಿಯಲು ನಿರ್ಧಾರ.
  • ನೂತನ 'ಫುಟ್‌ಬಾಲ್ ಆಟಗಾರ' ಚಿಹ್ನೆಯ ಅಡಿಯಲ್ಲೇ ಚುನಾವಣೆ ಎದುರಿಸಲಿರುವ ಮಮತಾ ಬಣ.

ಕೋಲ್ಕತ್ತಾ, ಸೆಪ್ಟೆಂಬರ್ 19: ಪಶ್ಚಿಮ ಬಂಗಾಳದ ಉಪಚುನಾವಣೆಯ ಕಣದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸಾಲು ಸಾಲು ಹಿನ್ನಡೆಗಳು ಎದುರಾಗುತ್ತಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿತ್ತು. ಆದರೆ ನಂದಿಗ್ರಾಮ ಕ್ಷೇತ್ರದಲ್ಲಿ ಎದುರಾದ ಹಿನ್ನಡೆಯ ಬೆನ್ನಲ್ಲೇ, ಶನಿವಾರ ಬೆಳಿಗ್ಗೆಷ್ಟೇ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಬಣದ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ, ಕೆಲವೇ ಗಂಟೆಗಳಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದು, ತಾವು ಚುನಾವಣಾ ಕಣದಲ್ಲೇ ಉಳಿಯುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಈ ದಿಢೀರ್ ಬೆಳವಣಿಗೆಗೆ ಕಾರಣವೇನು?

ಸ್ಥಳೀಯ ಮಟ್ಟದಲ್ಲಿ ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಹಾಗೂ ನಾಯಕತ್ವದ ನಿರ್ಧಾರಗಳ ವಿರುದ್ಧ ಕಾರ್ಯಕರ್ತರಲ್ಲಿ ಉಂಟಾಗಿರುವ ತೀವ್ರ ಅಸಮಾಧಾನವೇ ಈ ದಿಢೀರ್ ಬೆಳವಣಿಗೆಗೆ ಮುಖ್ಯ ಕಾರಣ ಎನ್ನಲಾಗಿದೆ. ಉಪಚುನಾವಣೆ ಹತ್ತಿರವಾಗುತ್ತಿರುವ ವೇಳೆಯಲ್ಲೇ ಪ್ರಮುಖ ಅಭ್ಯರ್ಥಿಗಳು ಒಂದಾದ ಮೇಲೊಂದರಂತೆ ಕಣದಿಂದ ಹಿಂದೆ ಸರಿಯುತ್ತಿರುವುದು ತೃಣಮೂಲ ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ತೀವ್ರ ಆತಂಕ ಮೂಡಿಸಿದೆ.

ವಿಪಕ್ಷಗಳ ವಾಗ್ದಾಳಿ

ಈ ಬೆಳವಣಿಗೆಯನ್ನು ಆಧಾರವಾಗಿಟ್ಟುಕೊಂಡು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೇಸ್, ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ” ಕಾಂಗ್ರೆಸ್ ಪಕ್ಷದ ಮೇಲಿನ ಸಾರ್ವಜನಿಕರ ಹಾಗೂ ಸ್ವತಃ ಪಕ್ಷದ ನಾಯಕರ ನಂಬಿಕೆ ಸಂಪೂರ್ಣವಾಗಿ ಕುಸಿದಿದೆ. ಮಮತಾ ಬ್ಯಾನರ್ಜಿ ಅವರ ಏಕಪಕ್ಷೀಯ ಆಡಳಿತ ವೈಖರಿಯಿಂದಾಗಿ ಅವರದೇ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ” ಎಂದು ವಿಪಕ್ಷ ನಾಯಕರು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ ‘ಹೆದರಿ ತಲೆಬಾಗಲ್ಲ, ತಿರುಗಿಬೀಳುತ್ತೇವೆ’; ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಮಮತಾ ಬ್ಯಾನರ್ಜಿ ಜೊತೆಗಿನ ಮಾತುಕತೆ ಬಳಿಕ ಯು-ಟರ್ನ್

ಶನಿವಾರ ಬೆಳಿಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಬಿಯುಲ್ ಚೌಧರಿ, “ಚುನಾವಣಾ ಆಯೋಗವು ನಮ್ಮ ಮೂಲ ಚಿಹ್ನೆಯನ್ನು ಫ್ರೀಜ್ ಮಾಡಿದೆ. ಹೊಸ ಚಿಹ್ನೆಯೊಂದಿಗೆ ಪ್ರಚಾರ ಮಾಡಲು ಸಮಯಾವಕಾಶ ಕಡಿಮೆಯಿದೆ ಮತ್ತು ಕಾರ್ಯಕರ್ತರ ಮೇಲೆ ಆಡಳಿತಾತ್ಮಕ ಒತ್ತಡ ಹೆಚ್ಚಿರುವುದರಿಂದ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದೇನೆ” ಎಂದು ತಿಳಿಸಿದ್ದರು. ಆದರೆ, ಈ ಬೆಳವಣಿಗೆಯ ಬೆನ್ನಲ್ಲೇ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ರಬಿಯುಲ್ ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘ ಸಮಾಲೋಚನೆ ನಡೆಸಿದರು. ನಾಯಕಿ ನೀಡಿದ ಧೈರ್ಯ ಹಾಗೂ ಸೂಚನೆಯ ಮೇರೆಗೆ ತಮ್ಮ ತೀರ್ಮಾನವನ್ನು ವಾಪಸ್ ಪಡೆದಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಚಿಹ್ನೆ ಗೊಂದಲ ಮತ್ತು ಚುನಾವಣಾ ಅಖಡಾ

ಟಿಎಂಸಿ ಆಂತರಿಕ ಗೊಂದಲ ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಇಸಿಐ (ECI) ಮೂಲ ‘ಹೂವು-ಹುಲ್ಲು’ ಚಿಹ್ನೆಯನ್ನು ಮುಟ್ಟುಗೋಲು ಹಾಕಿಕೊಂಡು, ಮಮತಾ ಬಣಕ್ಕೆ ‘ಫುಟ್‌ಬಾಲ್ ಆಟಗಾರ’ ಚಿಹ್ನೆಯನ್ನು ಹಂಚಿಕೆ ಮಾಡಿದೆ. ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಬಣದ ಅಭ್ಯರ್ಥಿ ಕಣದಿಂದ ಸಂಪೂರ್ಣವಾಗಿ ಹೊರಬಿದ್ದು ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದರೆ, ರೆಜಿನಗರ ಕ್ಷೇತ್ರದಲ್ಲಿ ಮಾತ್ರ ರಬಿಯುಲ್ ಚೌಧರಿ ನೂತನ ‘ಫುಟ್‌ಬಾಲ್’ ಚಿಹ್ನೆಯ ಅಡಿಯಲ್ಲೇ ಅಖಡಕ್ಕಿಳಿಯಲಿದ್ದಾರೆ. ಅಭ್ಯರ್ಥಿಯ ಈ ಯು-ಟರ್ನ್‌ನಿಂದಾಗಿ ರೆಜಿನಗರ ಕ್ಷೇತ್ರದಲ್ಲಿ ಬಿಜೆಪಿ, ಟಿಎಂಸಿ ಬಂಡಾಯ ಪಡೆ ಹಾಗೂ ಕಾಂಗ್ರೆಸ್ ನಡುವೆ ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:00 pm, Sat, 19 September 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ