ಮಣಿಪುರ: ಇಂಫಾಲ್ ಪೂರ್ವ ಮತ್ತು ಕಾಂಗ್‌ಪೋಕ್ಪಿ ಗಡಿಯಲ್ಲಿ ಗುಂಡಿನ ದಾಳಿ; ಇಬ್ಬರು ಸಾವು

ಘಟನೆಯ ಸಂದರ್ಭದಲ್ಲಿ ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗ್ರಾಮದ ಸ್ವಯಂಸೇವಕರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತರಿಬ್ಬರನ್ನು ನಾಂಗ್‌ತೊಂಬಮ್ ಮೈಕೆಲ್ (33) ಮತ್ತು ಮೈಸ್ನಮ್ ಖಬಾ (23) ಎಂದು ಗುರುತಿಸಲಾಗಿದೆ. ಇದೇ ವೇಳೆ ಘಟನೆಯಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ

ಮಣಿಪುರ: ಇಂಫಾಲ್ ಪೂರ್ವ ಮತ್ತು ಕಾಂಗ್‌ಪೋಕ್ಪಿ ಗಡಿಯಲ್ಲಿ ಗುಂಡಿನ ದಾಳಿ; ಇಬ್ಬರು ಸಾವು
ಮಣಿಪುರದಲ್ಲಿ ಹಿಂಸಾಚಾರ
Follow us
ರಶ್ಮಿ ಕಲ್ಲಕಟ್ಟ
|

Updated on: Jan 30, 2024 | 8:50 PM

ಇಂಫಾಲ್ ಜನವರಿ30: ಮಣಿಪುರದಲ್ಲಿ (Manipur) ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಮಂಗಳವಾರ ಇಂಫಾಲ್ ಪೂರ್ವ (Imphal East) ಮತ್ತು ಕಾಂಗ್‌ಪೋಕ್ಪಿ (Kangpokpi )ಜಿಲ್ಲೆಗಳ ಪರಿಧಿಯ ಪ್ರದೇಶದಲ್ಲಿ ಗುಂಡಿನ ಕಾಳಗ ನಡೆದಿದ್ದು ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿ ಆಗಿದೆ. ವರದಿಗಳ ಪ್ರಕಾರ, ಕಾಂಗ್‌ಪೋಕ್ಪಿ ಮತ್ತು ಇಂಫಾಲ್ ಪಶ್ಚಿಮದ ಪಕ್ಕದ ಪ್ರದೇಶಗಳಾದ ಕೌಟ್ರುಕ್‌ನಲ್ಲಿ ಇಂದು ಮಧ್ಯಾಹ್ನ 2:30 ರ ಸುಮಾರಿಗೆ ಗುಂಡಿನ ದಾಳಿ ನಡೆದಿದೆ.

ಘಟನೆಯ ಸಂದರ್ಭದಲ್ಲಿ ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗ್ರಾಮದ ಸ್ವಯಂಸೇವಕರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತರಿಬ್ಬರನ್ನು ನಾಂಗ್‌ತೊಂಬಮ್ ಮೈಕೆಲ್ (33) ಮತ್ತು ಮೈಸ್ನಮ್ ಖಬಾ (23) ಎಂದು ಗುರುತಿಸಲಾಗಿದೆ. ಇದೇ ವೇಳೆ ಘಟನೆಯಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿರುವ RIMS ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತ ದೇಹಗಳನ್ನೂ ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಏತನ್ಮಧ್ಯೆ, ಇಂದು ಹೊಸ ಹಿಂಸಾಚಾರದ ನಂತರ ಕೌತ್ರುಕ್‌ನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಜನವರಿ 27 ರಂದು, ಇಂಫಾಲ್ ಪೂರ್ವ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳ ನಡುವಿನ ಪಕ್ಕದ ಪ್ರದೇಶಗಳ ಬಳಿ ಎರಡು ವಿಭಿನ್ನ ಸ್ಥಳಗಳಲ್ಲಿ ಎರಡು ಬಾರಿ ಗುಂಡಿನ ಚಕಮಕಿ ನಡೆದ ನಂತರ ರಾಜ್ಯದಲ್ಲಿ ಹಿಂಸಾಚಾರ ಸ್ಫೋಟಗೊಂಡಿತು.

ಜನವರಿ 27 ರಂದು ಖಮೆನ್ಲೋಕ್ ಪ್ರದೇಶದ ಬಳಿ ಸತಾಂಗ್ ಮೊಲ್ಸಾಂಗ್‌ನಲ್ಲಿ ಮೊದಲ ಬಾರಿಗೆ ಗುಂಡಿನ ದಾಳಿ ನಡೆಯಿತು. ಗುಂಡಿನ ಚಕಮಕಿಯಲ್ಲಿ ಒಬ್ಬರು ಸಾವನ್ನಪ್ಪಿದ್ದರೆ, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇದರ ನಂತರ, ಅದೇ ದಿನ (ಜನವರಿ 27) ಮತ್ತೊಂದು ಗುಂಡಿನ ಚಕಮಕಿಯು ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳ ನಡುವಿನ ಪಕ್ಕದ ಪ್ರದೇಶಗಳಲ್ಲಿ ಗೋವಾಜಂಗ್‌ನಿಂದ ಭುಗಿಲೆದ್ದಿತು.

ಇದನ್ನೂ ಓದಿ: Rajasthan Accident: ಭೀಕರ ರಸ್ತೆ ಅಪಘಾತ: ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಜಸೋಲ್ ಪತ್ನಿ ಚಿತ್ರಾ ಸಿಂಗ್ ಸಾವು

ಜನವರಿ 27 ರಂದು ನಡೆದ ಗುಂಡಿನ ಎರಡು ಘಟನೆಗಳ ಮೊದಲು, ಮಣಿಪುರವು ಈ ತಿಂಗಳ ಆರಂಭದಲ್ಲಿ ಎರಡು ಹಿಂಸಾಚಾರದ ಘಟನೆಗಳಲ್ಲಿ ನಾಲ್ವರು ಸಾವಿಗೀಡಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ