AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ, ಓರ್ವ ಸಾವು

ಮಣಿಪುರದ ಖೋರೆಂಟಾಕ್ ಗ್ರಾಮದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ವಿವರಗಳ ಪ್ರಕಾರ, ಸುಮಾರು 10 ಗಂಟೆಗೆ ಕುಕಿ-ಜೋ ಗ್ರಾಮದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದರು. ಗ್ರಾಮದ ಸ್ವಯಂಸೇವಕರು ಭಾರೀ ಗುಂಡಿನ ದಾಳಿಗೆ ಪ್ರತಿಯಾಗಿ ಪ್ರತಿದಾಳಿ ನಡೆಸಿದ್ದರಿಂದ ಮೂವತ್ತು ವರ್ಷದ ಜಂಗ್ಮಿನ್ಲುನ್ ಗಂಗ್ಟೆ ಮೃತಪಟ್ಟಿದ್ದಾರೆ. ಐದು ಕಣಿವೆ ಜಿಲ್ಲೆಗಳ ಫ್ರಿಂಜ್ ಮತ್ತು ದುರ್ಬಲ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ.

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ, ಓರ್ವ ಸಾವು
ಭದ್ರತಾ ಸಿಬ್ಬಂದಿ
ನಯನಾ ರಾಜೀವ್
|

Updated on: Aug 30, 2023 | 8:10 AM

Share

ಮಣಿಪುರ(Manipur)ದ ಖೋರೆಂಟಾಕ್ ಗ್ರಾಮದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ವಿವರಗಳ ಪ್ರಕಾರ, ಸುಮಾರು 10 ಗಂಟೆಗೆ ಕುಕಿ-ಜೋ ಗ್ರಾಮದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದರು. ಗ್ರಾಮದ ಸ್ವಯಂಸೇವಕರು ಭಾರೀ ಗುಂಡಿನ ದಾಳಿಗೆ ಪ್ರತಿಯಾಗಿ ಪ್ರತಿದಾಳಿ ನಡೆಸಿದ್ದರಿಂದ ಮೂವತ್ತು ವರ್ಷದ ಜಂಗ್ಮಿನ್ಲುನ್ ಗಂಗ್ಟೆ ಮೃತಪಟ್ಟಿದ್ದಾರೆ. ಐದು ಕಣಿವೆ ಜಿಲ್ಲೆಗಳ ಫ್ರಿಂಜ್ ಮತ್ತು ದುರ್ಬಲ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ.

ಆಗಸ್ಟ್ 27 ರಂದು  ಮಣಿಪುರದ ರಾಜಧಾನಿ ಇಂಫಾಲ್‌ನ ನ್ಯೂ ಲಂಬುಲೇನ್ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಮೂರು ಮನೆಗಳಿಗೆ ಬೆಂಕಿ ಹಚ್ಚಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ, ಅದೇ ದಿನ ಮುಂಜಾನೆ 2 ಗಂಟೆ ಸುಮಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಜಿ ನಿರ್ದೇಶಕ ಕೆ ರಾಜೋ ಅವರ ನಿವಾಸವನ್ನು ಕಾವಲು ಕಾಯುತ್ತಿದ್ದ ಭದ್ರತಾ ಸಿಬ್ಬಂದಿಯಿಂದ ಅಪರಿಚಿತ ವ್ಯಕ್ತಿಗಳು ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡಿದ್ದರು.

ಮೇ 3 ರಂದು ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆಯಿಂದ 160 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಮತ್ತೊಬ್ಬ ವ್ಯಕ್ತಿಯ ಭುಜಕ್ಕೆ ಗುಂಡು ತಗುಲಿದೆ. ಅವರನ್ನು ಇಂಫಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ:ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು

ವಿವಿಧ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಕೂಡ ಬಂಧಿಸಲಾಗಿದೆ. ಅವರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆಯಲ್ಲಿ, ಪೊಲೀಸ್ ತಂಡಗಳು ಎನ್‌ಎಸ್‌ಸಿಎನ್ (ಐಎಂ) ಮತ್ತು ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ನ ತಲಾ ಒಬ್ಬ ಉಗ್ರರನ್ನು ಮತ್ತು ಇಂಫಾಲ್ ಪೂರ್ವ ಮತ್ತು ಬಿಷ್ಣುಪುರ ಜಿಲ್ಲೆಗಳಿಂದ ಕಂಗ್ಲೇಪಕ್ ಕಮ್ಯುನಿಸ್ಟ್ ಪಾರ್ಟಿ (ಕೆಸಿಪಿ) (ಲಮಯಾಂಬ ಖುಮಾನ್ ಬಣ) ದ ಇಬ್ಬರು ಭೂಗತ ಕಾರ್ಯಕರ್ತರನ್ನು ಬಂಧಿಸಿವೆ. ಕಾರ್ಯಾಚರಣೆ ವೇಳೆ ಆರು ಬಂದೂಕುಗಳು, ಐದು ಕಾಟ್ರಿಡ್ಜ್‌ಗಳು ಮತ್ತು ಎರಡು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ