TV9 Kannada News Live: ಹೆಲಿಕಾಪ್ಟರ್ ಪತನದಲ್ಲಿ ಬದುಕುಳಿದ ಸೈನಿಕರ ಸೆಲ್ಫಿ, ಬೇಗ ಬರಲಿದೆ ರಾಮಾಯಣ ಸಿನಿಮಾ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು
ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿಅವರು ದೇಶದ 51,000 ಕ್ಕೂ ಹೆಚ್ಚು ಯುವಕರಿಗೆ ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದ್ದಾರೆ. ರಣಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್, ಸಾಯಿ ಪಲ್ಲವಿ ಮತ್ತು ಸನ್ನಿ ಡಿಯೋಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ರಾಮಾಯಣ: ಪಾರ್ಟ್ 1’ ಸಿನಿಮಾದ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ ಮಧ್ಯಾಹ್ನದವರೆಗಿನ ಟಾಪ್ ಸುದ್ದಿಗಳ ಬಗ್ಗೆ ಇಲ್ಲಿದೆ ಮಾಹಿತಿ.

ನವದೆಹಲಿ, ಮೇ 23: ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇ 20 ರಂದು ನಡೆದ ಈ ಘಟನೆಯ ವಿವರಗಳನ್ನು ಸೇನಾ ಅಧಿಕಾರಿಗಳು ಇಂದು ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿದ್ದಾರೆ. ಸೇನೆಯ ‘ಚೀತಾ’ ಹೆಸರಿನ ಸಿಂಗಲ್-ಎಂಜಿನ್ ಹೆಲಿಕಾಪ್ಟರ್‌ನಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಇಬ್ಬರು ಮೇಜರ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್ ಚಲಾಯಿಸುತ್ತಿದ್ದರು. ಇವರೊಂದಿಗೆ 3ನೇ ಪದಾತಿ ದಳದ ವಿಭಾಗದ ಜನರಲ್ ಆಫೀಸರ್ ಕಮಾಂಡಿಂಗ್ ಆಗಿರುವ ಮೇಜರ್ ಜನರಲ್ ಸಚಿನ್ ಮೆಹ್ತಾ ಅವರು ಪ್ರಯಾಣಿಕರಾಗಿ ಅದೇ ವಿಮಾನದಲ್ಲಿದ್ದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
51 ಸಾವಿರ ಯುವಕರಿಗೆ ಉದ್ಯೋಗ ಪತ್ರ ವಿತರಿಸಿದ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ(Narendra Modi)ಅವರು ದೇಶದ 51,000 ಕ್ಕೂ ಹೆಚ್ಚು ಯುವಕರಿಗೆ ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತಮ್ಮ ಇತ್ತೀಚಿನ ಐದು ದೇಶಗಳ ಪ್ರವಾಸದ ಮಹತ್ವವನ್ನು ವಿವರಿಸುವ ಮೂಲಕ ರಾಜಕೀಯ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ನಾನು ಕೇವಲ ಐದು ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡು ಬಂದಿಲ್ಲ, ಬದಲಿಗೆ ಈ ಅವಧಿಯಲ್ಲಿ ಡಜನ್‌ಗಟ್ಟಲೆ ದೇಶಗಳ ಪ್ರಮುಖ ಜಾಗತಿಕ ಕಂಪನಿಗಳ ನಾಯಕರನ್ನು ಭೇಟಿ ಮಾಡಿ ವಿವರವಾದ ಚರ್ಚೆ ನಡೆಸಿದ್ದೇನೆ ಎಂದು ಪ್ರಧಾನಿ ಹೇಳಿದರು. ಇಂದು ಇಡೀ ಜಗತ್ತು ಭಾರತದ ತಾಂತ್ರಿಕ ಪ್ರಗತಿ ಮತ್ತು ಇಲ್ಲಿನ ಯುವಶಕ್ತಿಯ ಬಗ್ಗೆ ಅಪಾರ ಉತ್ಸಾಹ ಹೊಂದಿದೆ. ಜಾಗತಿಕ ಮಟ್ಟದಲ್ಲಿ ಭಾರತದ ಯುವಕರಿಗೆ ದೊಡ್ಡ ಮನ್ನಣೆ ಮತ್ತು ಅವಕಾಶಗಳು ಸಿಗಬೇಕೆಂಬುದೇ ನನ್ನ ವಿದೇಶಿ ಪ್ರವಾಸಗಳ ಮುಖ್ಯ ಉದ್ದೇಶವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಮತ್ತಷ್ಟು ಓದಿ: 51 ಸಾವಿರ ಯುವಕರಿಗೆ ಉದ್ಯೋಗ ಪತ್ರ ವಿತರಿಸಿದ ಪ್ರಧಾನಿ
ಅಂದುಕೊಂಡಿದ್ದಕ್ಕಿಂತ ಮೊದಲೇ ಬರಲಿದೆ ‘ರಾಮಾಯಣ’ ಸಿನಿಮಾ; ‘ಟಾಕ್ಸಿಕ್’ ಮೇಲೆ ಒತ್ತಡ? ರಣಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್, ಸಾಯಿ ಪಲ್ಲವಿ ಮತ್ತು ಸನ್ನಿ ಡಿಯೋಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ರಾಮಾಯಣ: ಪಾರ್ಟ್ 1’ (Ramayana) ಸಿನಿಮಾದ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಸಿನಿಮಾ ಬಗ್ಗೆ ಗಾಂಧಿನಗರದಿಂದ ಹಿಡಿದು ಬಾಲಿವುಡ್‌ವರೆಗೂ ಭಾರಿ ಚರ್ಚೆ ಶುರುವಾಗಿದೆ. ಈ ಬಿಗ್ ಬಜೆಟ್ ಸಿನಿಮಾ ದೀಪಾವಳಿ ಹಬ್ಬದ ಸಂದರ್ಭದಲ್ಲಿ (ನವೆಂಬರ್ 5-6 ಸಮಯದಲ್ಲಿ) ತೆರೆಗೆ ಬರಲಿದೆ ಎಂದು ತಂಡ ಹೇಳಿತ್ತು. ಆದರೆ, ಈಗ ಸಿಗುತ್ತಿರುವ ಲೇಟೆಸ್ಟ್ ಮಾಹಿತಿ ಪ್ರಕಾರ, ಅಂದುಕೊಂಡಿದ್ದಕ್ಕಿಂತ ಒಂದು ವಾರ ಮೊದಲೇ ಅಂದರೆ ಅಕ್ಟೋಬರ್ 30, 2026ರಂದೇ ಸಿನಿಮಾ ಥಿಯೇಟರ್‌ಗೆ ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ. ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ದೀಪಾವಳಿ ಹಬ್ಬದ ರಜೆಯ ದಿನಗಳನ್ನೇ ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಹಬ್ಬದ ವಾರದಲ್ಲೇ ರಿಲೀಸ್ ಮಾಡುವ ಬದಲು, ಒಂದು ವಾರ ಮೊದಲೇ ಸಿನಿಮಾ ರಿಲೀಸ್ ಮಾಡಿ ಸಿನಿಮಾಗೆ ಬಾಯ್ಮಾತಿನ ಪ್ರಚಾರ ನೀಡಲು ತಂಡ ಪ್ಲಾನ್ ಮಾಡಿಕೊಂಡಿದೆ ಎಂದು ವರದಿ ಆಗಿದೆ.
ಮತ್ತಷ್ಟು ಓದಿ: ಮೊದಲೇ ಬರಲಿದೆ ‘ರಾಮಾಯಣ’ ಸಿನಿಮಾ; ‘ಟಾಕ್ಸಿಕ್’ ಮೇಲೆ ಒತ್ತಡ?
1 ಗೆಲುವು, 2 ತಂಡಗಳ ಜಯ: ಹೀಗಿದೆ ಪಂಜಾಬ್ ಕಿಂಗ್ಸ್ ಪ್ಲೇಆಫ್ ಲೆಕ್ಕಾಚಾರ ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್ಗೇರಿದರೆ, ಮೂರು ತಂಡಗಳು ಪ್ಲೇಆಫ್ ರೇಸ್ನಲ್ಲಿದೆ. ಅಂದರೆ ನಾಲ್ಕನೇ ಸ್ಥಾನಕ್ಕಾಗಿ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿಯಲ್ಲಿರುವ ಪಂಜಾಬ್ ಕಿಂಗ್ಸ್ ತಂಡವು ಇಂದು (ಮೇ.23) ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಪಡೆ ಒಟ್ಟು 15 ಅಂಕಗಳನ್ನು ಪಡೆಯಲಿದೆ. ಇದಾಗ್ಯೂ ಪಂಜಾಬ್ ಕಿಂಗ್ಸ್ ತಂಡ ನೇರವಾಗಿ ಪ್ಲೇಆಫ್ಗೇರುವುದಿಲ್ಲ. ಬದಲಾಗಿ ಇತರೆ ಎರಡು ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ





