ಟೈಮ್-100: ಎಐಗೆ ಕೊಡುಗೆ, ವಿಶ್ವದ 100 ಪ್ರಭಾವಶಾಲಿಗಳ ಪಟ್ಟಿಯಲ್ಲಿದ್ದಾರೆ ಈ ಭಾರತೀಯರು

TIME100 Most Influential People in AI 2024 List: ಟೈಮ್ ಮ್ಯಾಗಜೀನ್ AI 2024 ರ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಪುಟದ ಸಚಿವರೂ ಸ್ಥಾನ ಪಡೆದಿದ್ದಾರೆ. ಮೋದಿ ಸಂಪುಟದಲ್ಲಿ ಮೂರು ಸಚಿವ ಸ್ಥಾನಗಳನ್ನು ಅಲಂಕರಿಸಿರುವ ಅಶ್ವಿನಿ ವೈಷ್ಣವ್ ಅವರು ಟೈಮ್ ಮ್ಯಾಗಜೀನ್​ ಟಾಪ್ 100 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಟೈಮ್-100: ಎಐಗೆ ಕೊಡುಗೆ, ವಿಶ್ವದ 100 ಪ್ರಭಾವಶಾಲಿಗಳ ಪಟ್ಟಿಯಲ್ಲಿದ್ದಾರೆ ಈ ಭಾರತೀಯರು
ಅಶ್ವಿನಿ ವೈಷ್ಣವ್, ನಂದನ್ ನೀಲೇಕಣಿ, ಅನಿಲ್ ಕಪೂರ್
Follow us
ನಯನಾ ರಾಜೀವ್
|

Updated on: Sep 06, 2024 | 11:36 AM

ಭಾರತೀಯರು ಇಡೀ ವಿಶ್ವದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದಾರೆ. ಇತ್ತೀಚೆಗೆ ಟೈಮ್ ಮ್ಯಾಗಜೀನ್ ವಿಶ್ವದ ಟಾಪ್ 100 ಪ್ರಸಿದ್ಧ ಮತ್ತು ಪ್ರಭಾವಿ ವ್ಯಕ್ತಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಭಾರತೀಯರೂ ಸ್ಥಾನ ಪಡೆದಿದ್ದಾರೆ.

ಟೈಮ್ ಮ್ಯಾಗಜೀನ್ ಎಐ 2024 ರ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಪುಟದ ಸಚಿವರೂ ಸ್ಥಾನ ಪಡೆದಿದ್ದಾರೆ. ಈ ಬಾರಿ ಟೈಮ್ ಮ್ಯಾಗಜೀನ್ ಟಾಪ್ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಬಾಲಿವುಡ್ ನಟ ಅನಿಲ್ ಕಪೂರ್ ಅವರನ್ನು ಕೂಡ ಸೇರಿಸಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲಿ ನೀಡಿದ ಮಹತ್ವದ ಕೊಡುಗೆಗಾಗಿ ಅನಿಲ್ ಕಪೂರ್ ಅವರಿಗೆ ಈ ಗೌರವ ನೀಡಲಾಗಿದೆ. ಭಾರತದ ಹಿರಿಯ ನಾಯಕ ಮತ್ತು ರೈಲ್ವೇ ಸಚಿವ ಅಶ್ವನಿ ವೈಷ್ಣವ್ ಮತ್ತು ಗೂಗಲ್ ಸಿಇಒ ಸುಂದರ್ ಪಿಚೈ ಅವರ ಹೆಸರನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ.

ಮತ್ತಷ್ಟು ಓದಿ: ಟೈಮ್ಸ್-100, ವಿಶ್ವದ ಅತ್ಯಂತ ಪ್ರಭಾವಿ ಕಂಪನಿಗಳ ಪಟ್ಟಿಯಲ್ಲಿ ಮೂರು ಭಾರತೀಯ ಸಂಸ್ಥೆಗಳು

ಅನಿಲ್ ಕಪೂರ್ ಕೃತಕ ಬುದ್ಧಿಮತ್ತೆ ವಿರುದ್ಧ ಪ್ರಕರಣ ದಾಖಲಿಸಿದ್ದರು.ಸಾಮಾಜಿಕ ಮಾಧ್ಯಮದ ಭದ್ರತೆಯನ್ನು ಕೋರಿ AI ವಿರುದ್ಧ ಮೊಕದ್ದಮೆ ಹೂಡಿದ್ದರು. ಇದಾದ ನಂತರ ದೆಹಲಿ ಹೈಕೋರ್ಟ್ ಅನುಮತಿಯಿಲ್ಲದೆ ನಟನ ಹೆಸರು, ಫೋಟೋ ಅಥವಾ ಧ್ವನಿಯನ್ನು ಬಳಸುವುದನ್ನು ನಿಷೇಧಿಸಿತ್ತು.

ಟೈಮ್ಸ್ ನಿಯತಕಾಲಿಕೆಗಳ ಪಟ್ಟಿಯಲ್ಲಿ ಅನಿಲ್ ಕಪೂರ್ ಜೊತೆಗೆ, ಅನೇಕ ಭಾರತೀಯ ಸೆಲೆಬ್ರಿಟಿಗಳನ್ನು ಸಹ ಸೇರಿಸಲಾಗಿದೆ . ಇದರಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ, ಮಾಹಿತಿ ತಂತ್ರಜ್ಞಾನ ಸಚಿವ ಅಶ್ವನಿ ವೈಷ್ಣವ್ ಹಾಗೂ ಇನ್ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಸೇರಿದ್ದಾರೆ.

ಎಐ ಅನ್ನು ಇನ್ನಷ್ಟು ಸುಧಾರಿಸಲು AI ಓವರ್‌ವ್ಯೂ ಎಂಬ ವೈಶಿಷ್ಟ್ಯವನ್ನು ಸುಂದರ್ ಪಿಚ್ಚೈ ಇತ್ತೀಚೆಗೆ ಪ್ರಾರಂಭಿಸಿದ್ದಾರೆ. ಇದು ಇಂಟರ್ನೆಟ್‌ನಲ್ಲಿನ ವಿಷಯವನ್ನು ಫಿಲ್ಟರ್ ಮಾಡುತ್ತದೆ ಮತ್ತು ಬಳಕೆದಾರರ ಪ್ರಶ್ನೆಗಳಿಗೆ ಉತ್ತರಿಸುತ್ತದೆ.

ಭಾರತವು ಜುಲೈನಲ್ಲಿ ಗ್ಲೋಬಲ್ ಇಂಡಿಯಾ AI ಶೃಂಗಸಭೆಯನ್ನು ಆಯೋಜಿಸಿತ್ತು, ಇದರಲ್ಲಿ 2000 AI ತಜ್ಞರು ಭಾಗವಹಿಸಿದ್ದರು. ಓಪನ್ ಎಐ ಮತ್ತು ಮೈಕ್ರೋಸಾಫ್ಟ್‌ನಂತಹ 50 ದೊಡ್ಡ ಕಂಪನಿಗಳ ಮುಖ್ಯಸ್ಥರನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಶೃಂಗಸಭೆಯನ್ನು ಸ್ವತಃ ಅಶ್ವಿನಿ ವೈಷ್ಣವ್ ಆಯೋಜಿಸಿದ್ದರು.

ದೇಶದ ಕಂಪ್ಯೂಟಿಂಗ್ ಸಾಮರ್ಥ್ಯವನ್ನು ಹೆಚ್ಚಿಸಲು ಭಾರತ ಸರ್ಕಾರವು 10,000 ಕ್ಕೂ ಹೆಚ್ಚು ಗ್ರಾಫಿಕ್ ಸಂಸ್ಕರಣಾ ಘಟಕಗಳನ್ನು ನಿರ್ಮಿಸುವ ಯೋಜನೆಯನ್ನು ಸಿದ್ಧಪಡಿಸುತ್ತಿದೆ. ಇದು AI ಅನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಈ ಪಟ್ಟಿಯಲ್ಲಿ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್, ಗೂಗಲ್ ಸಿಇಒ ಸುಂದರ್ ಪಿಚೈ, ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ, ಓಪನ್ ಎಐ ಸಿಇಒ ಸ್ಯಾಮ್ ಆಲ್ಟ್‌ಮ್ಯಾನ್ ಮತ್ತು ರೆಡ್ಡಿಟ್ ಸಿಇಒ ಸ್ಟೀವ್ ಹಫ್ಮನ್ ಅವರಂತಹ ಅನೇಕ ಹೆಸರುಗಳಿವೆ. AI ಗೆ ಮಹತ್ವದ ಕೊಡುಗೆ ನೀಡಿದ ಬಾಲಿವುಡ್ ನಟ ಅನಿಲ್ ಕಪೂರ್ ಅವರ ಹೆಸರನ್ನು ಟಾಪ್ 100 ಪಟ್ಟಿಯಲ್ಲಿ ಸೇರಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ