AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 1ರಿಂದ ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಆರೋಗ್ಯ ಎಚ್ಚರಿಕೆ ಜತೆ ಹೊಸ ಚಿತ್ರ

ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಹೊಸ ಚಿತ್ರ ಮತ್ತು ತಂಬಾಕು ಸೇವನೆಯಿಂದ ನರಳಿ ಸಾಯುತ್ತೀರಿ ಎಂಬ ಎಚ್ಚರಿಕೆಯ ಸಾಲು ಇರಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಡಿಸೆಂಬರ್ 1ರಿಂದ ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಆರೋಗ್ಯ ಎಚ್ಚರಿಕೆ ಜತೆ ಹೊಸ ಚಿತ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 29, 2022 | 3:17 PM

Share

ದೆಹಲಿ: 2022 ಡಿಸೆಂಬರ್1 ರ ನಂತರ ತಯಾರಿಸಲಾಗುವ ತಂಬಾಕು (Tobacco) ಉತ್ಪನ್ನಗಳು, ಆಮದು ಮಾಡುವ ಅಥವಾ ಪ್ಯಾಕ್ ಮಾಡಲಾಗುವ ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಹೊಸ ಚಿತ್ರ ಮತ್ತು ತಂಬಾಕು ಸೇವನೆಯಿಂದ ನರಳಿ ಸಾಯುತ್ತೀರಿ ಎಂಬ ಎಚ್ಚರಿಕೆಯ ಸಾಲು ಇರಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ (Union Health Ministry) ಹೇಳಿದೆ. ಡಿಸೆಂಬರ್ 1ರಿಂದ ಜಾರಿಗೆ ಬರುವ ಈ ಚಿತ್ರ ಮತ್ತು ಎಚ್ಚರಿಕೆ ಸಾಲು ಒಂದು ವರ್ಷದವರೆಗೆ ಚಾಲ್ತಿಯಲ್ಲಿರಲಿದೆ. 2023 ಡಿಸೆಂಬರ್ 1ರ ನಂತರ ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಚಿತ್ರ ಮತ್ತು ಎಚ್ಚರಿಕೆಯ ಸಾಲು ತಂಬಾಕು ಬಳಕೆದಾದರರು ಬೇಗನೆ ಸಾಯುತ್ತಾರೆ ಎಂಬುದಾಗಿರುತ್ತದೆ ಎಂದು ಸಚಿವಾಲಯ ಹೊರಡಿಸಿದ ಪ್ರಕಟಣೆ ತಿಳಿಸಿದೆ. ಸಿಗರೇಟ್ಸ್ ಆಂಡ್ ಟೊಬಾಕೋ ಪ್ರಾಡೆಕ್ಟ್ಸ್ (ಪ್ಯಾಕೇಜಿಂಗ್ ಆಂಡ್ ಲೇಬಲಿಂಗ್) ರೂಲ್ಸ್ 2008, ಎಂಬ ನಿಯಮಕ್ಕೆ 2022 ಜುಲೈ 21ಕ್ಕೆ ತಿದ್ದುಪಡಿ ಮಾಡಲಾಗಿದೆ ಎಂದು ಸಚಿವಾಲಯ ಹೇಳಿದೆ.

ಈ ತಿದ್ದುಪಡಿ 2022 ಡಿಸೆಂಬರ್ 1ರಿಂದ ಅನ್ವಯವಾಗಲಿದೆ. ಈ ಅಧಿಸೂಚನೆಯು  http://www.mohfw.gov.in”www.mohfw.gov.in ಮತ್ತು  http://ntcp.nhp.gov.in”ntcp.nhp.gov.in ವೆಬ್​​ಸೈಟ್​​ಗಳಲ್ಲಿ 19 ಭಾಷೆಗಳಲ್ಲಿ ಲಭ್ಯವಾಗಲಿದೆ. ಯಾವುದೇ ವ್ಯಕ್ತಿ ನೇರ ಅಥವಾ ಪರೋಕ್ಷವಾಗಿ ತಂಬಾಕು ಉತ್ಪನ್ನಗಳನ್ನು ತಯಾರಿಸುಸುವುದು, ಉತ್ಪಾದನೆ, ಸರಬರಾಜು, ಆಮದು ಅಥವಾ ಸಿಗರೇಟು ಅಥವಾ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದಾದರೆ ಎಲ್ಲ ತಂಬಾಕು ಉತ್ಪನ್ನಗಳ ಪ್ಯಾಕೆಟ್ ಗಳ ಮೇಲೆ ಸಚಿವಾಲಯ ನಿರ್ದೇಶಿಸಿದಂತೆ ಆರೋಗ್ಯ ಬಗ್ಗೆ ಎಚ್ಚರಿಕೆಯ ಸಾಲು ಹೊಂದಿರ ಬೇಕು ಎಂದಿದ್ದಾರೆ.

ಈ ಮಾರ್ಗಸೂಚಿಗಳ ಉಲ್ಲಂಘನೆಯು ಶಿಕ್ಷಾರ್ಹ ಅಪರಾಧವಾಗಿದ್ದು ಜೈಲು ಅಥವಾ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ನಿಯಂತ್ರಣ, ಉತ್ಪಾದನೆ, ಸರಬರಾಜು ಮತ್ತು ವಿತರಣೆ) ಕಾಯಿದೆ, 2003ರಡಿಯಲ್ಲಿ ಸೆಕ್ಷನ್ 20ರಲ್ಲಿ ಸೂಚಿಸಿರುವಂತೆ ದಂಡ ಪಾವತಿಸಬೇಕಾಗಿದೆ ಎಂದು ಸರ್ಕಾರ ಹೇಳಿದೆ.

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ