AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi’s Birthday; ಮೋದಿ ಜನ್ಮದಿನ; ಕಳೆದ 9 ವರ್ಷಗಳಲ್ಲಿ ಪ್ರಧಾನಿ ಘೋಷಿಸಿದ ಪ್ರಮುಖ ಯೋಜನೆಗಳ ವಿವರ ಇಲ್ಲಿದೆ

Schemes Launched By PM Modi; 2014 ರಲ್ಲಿ ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರದ ಎಂಟು ವರ್ಷಗಳಲ್ಲಿ ಹಲವಾರು ಸಾರ್ವಜನಿಕ ಜನ್ ಧನ್ ಯೋಜನೆಯಿಂದ ತೊಡಗಿ ಸುಕನ್ಯಾ ಸಮೃದ್ಧಿ, ಕಿಸಾನ್ ಸಮ್ಮಾನ್​ನಂಥ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳ ಕುರಿತ ಇಣುಕುನೋಟ ಇಲ್ಲಿದೆ.

PM Modi's Birthday; ಮೋದಿ ಜನ್ಮದಿನ; ಕಳೆದ 9 ವರ್ಷಗಳಲ್ಲಿ ಪ್ರಧಾನಿ ಘೋಷಿಸಿದ ಪ್ರಮುಖ ಯೋಜನೆಗಳ ವಿವರ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on: Sep 16, 2023 | 2:05 PM

ಪ್ರತಿ ವರ್ಷ ಪ್ರಧಾನಿ ನರೇಂದ್ರ ಮೋದಿ (Narendra Modi Birthday) ಅವರ ಹುಟ್ಟುಹಬ್ಬವನ್ನು ಬಿಜೆಪಿ (BJP) ದೇಶದಾದ್ಯಂತ ಜನರಿಗೆ ವಿವಿಧ ಸೇವೆಗಳನ್ನು ಒದಗಿಸುವ ಮೂಲಕ ಆಚರಿಸುತ್ತದೆ. ಮೋದಿ ಜನ್ಮದಿನದ ಪ್ರಯುಕ್ತ ಸುಮಾರು 15 ದಿನಗಳ ಕಾಲ ವಿವಿಧ ಸೇವಾ ಯೋಜನೆಗಳನ್ನು ‘ಸೇವಾ ಪಖ್ವಾಡ್ / ಸೇವಾ ಪಾಕ್ಷಿಕ’ ಮೂಲಕ ಹಮ್ಮಿಕೊಳ್ಳಲಾಗುತ್ತದೆ. ಅದೇ ರೀತಿ ಈ ವರ್ಷವೂ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 7ರ ವರೆಗೂ ದೇಶದಾದ್ಯಂತ ವಿವಿಧ ಸೇವಾ ಕಾರ್ಯಕ್ರಮಗಳನ್ನು ಪಕ್ಷ ಹಮ್ಮಿಕೊಂಡಿದೆ. ಈ ಬಾರಿ ‘ಆಯುಷ್ಮಾನ್ ಭವ’ ಅಭಿಯಾನ ಹಾಗೂ ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಲಿದೆ.

2014 ರಲ್ಲಿ ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರದ ಎಂಟು ವರ್ಷಗಳಲ್ಲಿ ಹಲವಾರು ಸಾರ್ವಜನಿಕ ಜನ್ ಧನ್ ಯೋಜನೆಯಿಂದ ತೊಡಗಿ ಸುಕನ್ಯಾ ಸಮೃದ್ಧಿ, ಕಿಸಾನ್ ಸಮ್ಮಾನ್​ನಂಥ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳ ಕುರಿತ ಇಣುಕುನೋಟ ಇಲ್ಲಿದೆ.

ಜನ್ ಧನ್ ಯೋಜನೆ

2014 ರಲ್ಲಿ ಪ್ರಾರಂಭವಾದ ‘ಪ್ರಧಾನ ಮಂತ್ರಿ ಜನ್ ಧನ್ ಯೋಜನೆ’ಯು ಪ್ರತಿ ಮನೆಗೆ ಕನಿಷ್ಠ ಒಂದು ಬ್ಯಾಂಕ್ ಖಾತೆ ಒದಗಿಸುವುದರೊಂದಿಗೆ ಎಲ್ಲರಿಗೂ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯ ಅಡಿಯಲ್ಲಿ, ವ್ಯಕ್ತಿಗೆ ಉಳಿತಾಯ ಬ್ಯಾಂಕ್ ಖಾತೆಯನ್ನು ತೆರೆಯಲಾಗುತ್ತದೆ. ಈ ಜನ್ ಧನ್ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಅಗತ್ಯವಿಲ್ಲ. ಈ ಖಾತೆಯಲ್ಲಿನ ಠೇವಣಿಯ ಮೇಲೆ ಬಡ್ಡಿ ನೀಡಲಾಗುತ್ತದೆ. ಖಾತೆದಾರರಿಗೆ ರುಪೇ ಡೆಬಿಟ್ ಕಾರ್ಡ್ ಅನ್ನು ಸಹ ಒದಗಿಸಲಾಗಿದೆ. ಈ ಯೋಜನೆಯಡಿ ಖಾತೆ ತೆರೆದವರಿಗೆ 1 ಲಕ್ಷ ರೂ. ಆಕಸ್ಮಿಕ ವಿಮಾ ರಕ್ಷಣೆ ನೀಡಲಾಗುತ್ತಿತ್ತು. ಇದನ್ನು ಆಗಸ್ಟ್ 28, 2018 ರ ನಂತರ 2 ಲಕ್ಷ ರೂ.ಗೆ ಹೆಚ್ಚಿಸಲಾಯಿತು. ಜನ್ ಧನ್ ಖಾತೆಗಳು ಸರ್ಕಾರಿ ಯೋಜನೆಗಳ ನೇರ ನಗದು ವರ್ಗಾವಣೆಗೆ ಅರ್ಹವಾಗಿವೆ.

ಸುಕನ್ಯಾ ಸಮೃದ್ಧಿ ಯೋಜನೆ

ಪ್ರಧಾನಿ ನರೇಂದ್ರ ಮೋದಿ ಅವರು 2015 ರಲ್ಲಿ ಹೆಣ್ಣು ಮಕ್ಕಳಿಗಾಗಿ ಈ ಯೋಜನೆಯನ್ನು ಪರಿಚಯಿಸಿದ್ದರು. ಈ ಯೋಜನೆಯನ್ನು ಅಂಚೆ ಕಚೇರಿಗಳ ಮೂಲಕ ನಡೆಸಲಾಗುತ್ತಿದೆ. ಸುಕನ್ಯಾ ಸಮೃದ್ಧಿ ಯೋಜನೆಯ ಪ್ರಕಾರ, ಪೋಷಕರು ಹತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ ತಮ್ಮ ಹೆಣ್ಣುಮಕ್ಕಳಿಗಾಗಿ ಖಾತೆಗಳನ್ನು ತೆರೆಯಬಹುದು. ಈ ಯೋಜನೆಯಡಿ ಬಡ್ಡಿದರವು ಶೇ 7.8 ರಷ್ಟಿದೆ.

ಪ್ರಧಾನ ಮಂತ್ರಿ ಉಜ್ವಲಾ ಯೋಜನೆ

ಈ ಯೋಜನೆಯನ್ನು 2016 ರಲ್ಲಿ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಮೋದಿ ಅವರು ಪ್ರಾರಂಭಿಸಿದರು. ಸಾಂಪ್ರದಾಯಿಕ ಅಡುಗೆ ಇಂಧನಗಳಾದ ಉರುವಲು, ಕಲ್ಲಿದ್ದಲುಗಳನ್ನು ಬಳಸುತ್ತಿದ್ದ ಗ್ರಾಮೀಣ ಮತ್ತು ವಂಚಿತ ಕುಟುಂಬಗಳಿಗೆ ಎಲ್‌ಪಿಜಿ ಲಭ್ಯವಾಗುವಂತೆ ಮಾಡಲು ಈ ಯೋಜನೆಯನ್ನು ಪರಿಚಯಿಸಲಾಯಿತು. ಉಜ್ವಲ ಯೋಜನೆ 2.0 ಅಡಿಯಲ್ಲಿ 1.50 ಕೋಟಿಗೂ ಹೆಚ್ಚು ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ.

ಪ್ರಧಾನಮಂತ್ರಿ ಮುದ್ರಾ ಯೋಜನೆ

10 ಲಕ್ಷ ರೂ. ವರೆಗೆ ಸಾಲ ನೀಡಲು 2015 ರಲ್ಲಿ ಪ್ರಧಾನಿ ಮೋದಿಯವರು ಯೋಜನೆಯನ್ನು ಪ್ರಾರಂಭಿಸಿದರು. ಇದರಡಿ ಕಾರ್ಪೊರೇಟ್ ಅಲ್ಲದ, ಕೃಷಿಯೇತರ ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳಿಗೆ 10 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ವಾಣಿಜ್ಯ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಸಣ್ಣ ಹಣಕಾಸು ಬ್ಯಾಂಕುಗಳು, ಸೂಕ್ಷ್ಮ ಹಣಕಾಸು ಸಂಸ್ಥೆಗಳು (MFI) ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು ಸಾಲಗಳನ್ನು ನೀಡುತ್ತವೆ. ಸಾಲ ಪಡೆಯಲು ಇಚ್ಛಿಸುವವರು ಮೇಲೆ ತಿಳಿಸಲಾದ ಯಾವುದೇ ಸಾಲ ನೀಡುವ ಸಂಸ್ಥೆಗಳನ್ನು ಸಂಪರ್ಕಿಸಬಹುದು ಅಥವಾ ಈ ಪೋರ್ಟಲ್ www.udyamimitra.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಕಿಸಾನ್ ಸಮ್ಮಾನ್ ನಿಧಿ ಯೋಜನೆ

2018 ರಲ್ಲಿ ಮೋದಿ ಅವರು ಘೋಷಿಸಿದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ಭೂಮಿ ಹೊಂದಿರುವ ಬಡ ಕುಟುಂಬಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಷಕ್ಕೆ 6,000 ರೂ. ಹಣ ವರ್ಗಾವಣೆ ಮಾಡಲಾಗುತ್ತಿದೆ. ಯೋಜನೆಯ ಅಧಿಕೃತ ವೆಬ್‌ಸೈಟ್​ನಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಗಂಡ, ಹೆಂಡತಿ ಮತ್ತು ಅಪ್ರಾಪ್ತ ಮಕ್ಕಳನ್ನೊಳಗೊಂಡ ಕುಟುಂಬವು ಯೋಜನೆ ಪ್ರಯಫಜನ ಪಡೆಯಲು ಅರ್ಹವಾಗಿದೆ. ಯೋಜನೆಗೆ ಅರ್ಹರಾಗಿರುವ ರೈತ ಕುಟುಂಬಗಳನ್ನು ಗುರುತಿಸುವುದು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶದ ಆಡಳಿತದ ಜವಾಬ್ದಾರಿಯಾಗಿದೆ. ಹಣವನ್ನು ನೇರವಾಗಿ ಈ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.

ಅಟಲ್ ಪಿಂಚಣಿ ಯೋಜನೆ

ಅಟಲ್ ಪಿಂಚಣಿ ಯೋಜನೆ (APY) ನರೇಂದ್ರ ಮೋದಿ ಸರ್ಕಾರದ ಪ್ರಮುಖ ಸಾಮಾಜಿಕ ಭದ್ರತಾ ಯೋಜನೆಯಾಗಿದೆ. ಮೇ 9, 2015 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಘೋಷಿಸಿದ್ದರು. ಈ ಯೋಜನೆಯು ವಿಶೇಷವಾಗಿ ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯ ಆದಾಯ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆ

ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆ (PM SVANIdhi) ಅನ್ನು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಜೂನ್ 01, 2020 ರಂದು ಪ್ರಾರಂಭಿಸಿತು. ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಉದ್ದೇಶದೊಂದಿಗೆ ಇದನ್ನು ಆರಂಭಿಸಲಾಯಿತು. ಕೋವಿಡ್-19 ಸಾಂಕ್ರಾಮಿಕದ ಲಾಕ್‌ಡೌನ್‌ನಿಂದಾಗಿ ಬಾಧಿತರಾದವರಿಗಾಗಿ ಈ ಯೋಜನೆ ಪ್ರಾರಂಭಿಸಲಾಗಿತ್ತು.

ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ

-ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (PMSBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMJJBY) 2015 ರಲ್ಲಿ ಮೋದಿ ಸರ್ಕಾರವು ಪ್ರಾರಂಭಿಸಿದ ಎರಡು ಯೋಜನೆಗಳು ಜನರಿಗೆ ಕೈಗೆಟುಕುವ ವಿಮೆ ಮತ್ತು ರಕ್ಷಣೆಯನ್ನು ಒದಗಿಸುವ ಗುರಿಯನ್ನು ಹೊಂದಿವೆ.

ಇದನ್ನೂ ಓದಿ: ಕಳೆದ ಕೆಲವು ವರ್ಷಗಳಿಂದ ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಸಾಮಾನ್ಯ ಜನರಿಗೆ ಹೇಗೆ ವಿಶೇಷ ದಿನವಾಗಿದೆ?

ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ

ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY). PMSBY ಒಂದು ವರ್ಷದ ಅಪಘಾತ ವಿಮಾ ಯೋಜನೆಯಾಗಿದ್ದು, ಇದು ವರ್ಷದಿಂದ ವರ್ಷಕ್ಕೆ ನವೀಕರಿಸಲ್ಪಡುತ್ತದೆ ಮತ್ತು ಅಪಘಾತದಿಂದಾಗಿ ಸಾವು ಅಥವಾ ಅಂಗವೈಕಲ್ಯಕ್ಕೆ ವಿಮಾ ಕವರೇಜ್ ನೀಡುತ್ತದೆ.

ಸಾವರಿನ್ ಗೋಲ್ಡ್ ಬಾಂಡ್ ಯೋಜನೆ

ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯನ್ನು ನವೆಂಬರ್ 2015 ರಲ್ಲಿ ಭೌತಿಕ ಚಿನ್ನದ ಬೇಡಿಕೆಯನ್ನು ಕಡಿಮೆ ಮಾಡುವ ಮತ್ತು ಮನೆಯ ಉಳಿತಾಯದ ಒಂದು ಭಾಗವನ್ನು ಆರ್ಥಿಕ ಉಳಿತಾಯಕ್ಕೆ ಬದಲಾಯಿಸುವ ಉದ್ದೇಶದಿಂದ ಪ್ರಾರಂಭಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ