Covid-19 Vaccine: ಮೇ 1ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಕೊವಿಡ್ ಲಸಿಕೆ

ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ. ರಾಜ್ಯಗಳಲ್ಲಿ ಕೊವಿಡ್ ಲಸಿಕೆ ವಿತರಣೆ ಪ್ರಕ್ರಿಯೆ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಲಿದೆ.

Covid-19 Vaccine: ಮೇ 1ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಕೊವಿಡ್ ಲಸಿಕೆ
ಕೊರೊನಾ ಲಸಿಕೆ (ಸಂಗ್ರಹ ಚಿತ್ರ)
Follow us
ರಶ್ಮಿ ಕಲ್ಲಕಟ್ಟ
|

Updated on:Apr 19, 2021 | 8:09 PM

ದೆಹಲಿ: ಕೊರೊನಾವೈರಸ್ ಎರಡನೇ ಅಲೆಯಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಹೊತ್ತಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ. ಮೇ 1ರಿಂದ ಎಲ್ಲರಿಗೂ ಕೊವಿಡ್ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಹೆಚ್ಚುವರಿ ಲಸಿಕೆ ಪ್ರಮಾಣವನ್ನು ನೇರವಾಗಿ ಉತ್ಪಾದಕರಿಂದ ಸಂಗ್ರಹಿಸಲು ರಾಜ್ಯಗಳಿಗೆ ಅಧಿಕಾರವಿದೆ, ಜೊತೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಯಾವುದೇ ವರ್ಗದ ಜನರಿಗೆ ಲಸಿಕೆ ನೀಡಬಹುದು. ಲಸಿಕೆ ತಯಾರಕರು ತಮ್ಮ ಪೂರೈಕೆಯ ಶೇ 50ರಷ್ಟು ಲಸಿಕೆಯನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಯಲ್ಲಿ ಪೂರ್ವ ಘೋಷಿತ ಬೆಲೆಗೆ ಬಿಡುಗಡೆ ಮಾಡಬಹುದಾಗಿದೆ ಎಂದು ಸರ್ಕಾರ ಹೇಳಿದೆ.

ಭಾರತ ಸರ್ಕಾರವು ತನ್ನ ಪಾಲಿನಿಂದ, ಸೋಂಕಿನ ವ್ಯಾಪ್ತಿ (ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ) ಮತ್ತು ಕಾರ್ಯಕ್ಷಮತೆ (ಆಡಳಿತದ ವೇಗ) ದ ಆಧಾರದ ಮೇಲೆ ಲಸಿಕೆಗಳನ್ನು ರಾಜ್ಯ  ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಿದೆ.   ಆರೋಗ್ಯ ಮತ್ತು ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರು, 45 ವರ್ಷಕ್ಕಿಂತ ಮೇಲ್ಪಟ್ಟ  ಜನರಿಗೆ ಆದ್ಯತೆ  ಮೇರೆಗೆ ಎರಡನೇ ಡೋಸ್ ನೀಡಲಾಗುವುದು.

ವಿಶ್ವದ ಅತಿದೊಡ್ಡ ಲಸಿಕೆ ವಿತರಣೆ ಅಭಿಯಾನದ 3 ನೇ ಹಂತದಲ್ಲಿ ಖರೀದಿ, ಅರ್ಹತೆ, ಲಸಿಕೆಗಳ ನಿರ್ವಹಣೆಯನ್ನು ಸುಲಭವಾಗಿ  ಮಾಡಲಾಗುತ್ತಿದೆ. ಲಸಿಕೆ ಬೆಲೆಯ ಆಧಾರದ ಮೇಲೆ, ರಾಜ್ಯ ಸರ್ಕಾರಗಳು, ಖಾಸಗಿ ಆಸ್ಪತ್ರೆಗಳು, ಕೈಗಾರಿಕಾ ಸಂಸ್ಥೆಗಳು ಇತ್ಯಾದಿ ಉತ್ಪಾದಕರಿಂದ ಲಸಿಕೆ ಪ್ರಮಾಣವನ್ನು ಸಂಗ್ರಹಿಸಬಹುದು. ಖಾಸಗಿ ವ್ಯಾಕ್ಸಿನೇಷನ್ ಪೂರೈಕೆದಾರರು ತಮ್ಮ ಲಸಿಕೆಯ ಬೆಲೆಯನ್ನು ಪಾರದರ್ಶಕವಾಗಿ ಘೋಷಿಸಬೇಕು ಎಂದು ಸರ್ಕಾರ ಹೇಳಿದೆ.

ದೇಶದಲ್ಲಿ ಕಳೆದ 24ಗಂಟೆಯಲ್ಲಿ 2,73,810ಹೊಸ ಕೊರೊನಾ ಕೇಸ್​ಗಳು ದಾಖಲಾಗಿದ್ದು, 1,619 ಜನರು ಮೃತಪಟ್ಟಿದ್ದಾರೆ. ಹಾಗೇ 1,44,178 ಜನರು ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ. ಅಲ್ಲಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ. ಅದರಲ್ಲಿ ಸಕ್ರಿಯ ಪ್ರಕರಣಗಳು 19,29,329. ಒಟ್ಟು ಚೇತರಿಕೆ ಕಂಡವರ ಸಂಖ್ಯೆ 1,29,53,821  ಮತ್ತು ಕೊರೊನಾದಿಂದ ಜೀವ ಕಳೆದುಕೊಂಡವರು 1,78,769  ಜನರು.

ಕೊರೊನಾ ಎರಡನೇ ಅಲೆಯಲ್ಲಿ ಹಿರಿಯ ನಾಗರಿಕರಿಗೆ ಹೋಲಿಸಿದರೆ ಯುವಜನರೇ ಹೆಚ್ಚಾಗಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಲಕ್ಷಣಗಳೂ ಸ್ವಲ್ಪ ವಿಭಿನ್ನವಾಗಿದ್ದು, ಬಾಯಿ ಒಣಗುವುದು, ಗ್ಯಾಸ್ಟ್ರಿಕ್​, ಲೂಸ್​ ಮೋಶನ್​, ಕೆಂಪು ಕಣ್ಣು, ತಲೆನೋವುಗಳು ಕಾಣಿಸಿಕೊಳ್ಳುತ್ತಿವೆ. ಈ ಬಾರಿ ಕೊರೊನಾ ಪಾಸಿಟಿವ್​ ಬಂದವರಿಗೆ ಎಲ್ಲರಿಗೂ ಜ್ವರ ಕಾಣಿಸಿಕೊಳ್ಳುತ್ತಿಲ್ಲ ಎಂದು ಜಿನೆಸ್ಟ್ರಿಂಗ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಮುಖ್ಯಸ್ಥರಾದ ಗೌರಿ ಅಗರ್​ವಾಲ್ ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ಚೇತರಿಕೆಯ ಪ್ರಮಾಣ 86.62ಕ್ಕೆ ಕುಸಿದಿದೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳು 18,01,316 ಇದ್ದು, ಒಟ್ಟು ಸೋಂಕಿತರ ಸಂಖ್ಯೆಯ ಶೇ.12.18ರಷ್ಟಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದ್ದು ಆಗಸ್ಟ್​ 7ರಂದು. 30 ಲಕ್ಷ ದಾಟಿದ್ದು ಆಗಸ್ಟ್​ 23ರಂದು, 40 ಲಕ್ಷ ದಾಟಿದ್ದು ಸೆಪ್ಟೆಂಬರ್​ 5 ಮತ್ತು 50 ಲಕ್ಷ ದಾಟಿದ್ದು ಸೆಪ್ಟೆಂಬ್ 16ರಂದು. ಕಳೆದ ಬಾರಿಗೆ ಹೋಲಿಸಿದರೆ ಸೋಂಕಿನ ಪ್ರಸರಣ ತುಂಬ ವೇಗವಾಗಿರುವುದು ಇನ್ನಷ್ಟು ಆತಂಕ ಮೂಡಿಸಿದೆ.

ಇದನ್ನೂ ಓದಿ:ದೇಶದಲ್ಲಿ 24 ಗಂಟೆಯಲ್ಲಿ 2,73,810 ಹೊಸ ಕೊರೊನಾ ಪ್ರಕರಣಗಳು; ಆತಂಕ ಹುಟ್ಟಿಸಿದ ಸೋಂಕಿನ ವಿಭಿನ್ನ ಲಕ್ಷಣಗಳು

(from May 1 Everyone above the age of 18 to be eligible to get corona vaccine says govt)

Published On - 7:54 pm, Mon, 19 April 21

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ