ದೆಹಲಿ: ಪ್ರಧಾನಮಂತ್ರಿಗಳ ವಸ್ತುಸಂಗ್ರಹಾಲಯ (Pradhan Mantri Sangrahalaya) ಎಂದೂ ಕರೆಯಲ್ಪಡುವ ಪ್ರಧಾನ ಮಂತ್ರಿ ಸಂಗ್ರಹಾಲಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಭಾರತೀಯ ಸಂವಿಧಾನದ ಮುಖ್ಯ ಶಿಲ್ಪಿ ಡಾ.ಭೀಮರಾವ್ ಅಂಬೇಡ್ಕರ್ (Dr Bhimrao Ambedkar) ಅವರ 131 ನೇ ಜನ್ಮದಿನ ಏಪ್ರಿಲ್ 14 (ಗುರುವಾರ) ಉದ್ಘಾಟಿಸಲಿದ್ದಾರೆ. ಆಜಾದಿ ಕಾ ಅಮೃತ್ ಮಹೋತ್ಸವದ ಆಚರಣೆಯ ಸಂದರ್ಭದಲ್ಲಿ ಉದ್ಘಾಟನೆಗೊಂಡ ಸಂಗ್ರಹಾಲಯವು ಸ್ವಾತಂತ್ರ್ಯದ ನಂತರದ ಭಾರತದ ಕಥೆಯನ್ನು ಅದರ ಪ್ರಧಾನ ಮಂತ್ರಿಗಳ ಜೀವನ ಮತ್ತು ಕೊಡುಗೆಗಳ ಮೂಲಕ ಹೇಳುತ್ತದೆ. ರಾಷ್ಟ್ರ ನಿರ್ಮಾಣಕ್ಕಾಗಿ ಭಾರತದ ಎಲ್ಲಾ ಪ್ರಧಾನ ಮಂತ್ರಿಗಳ ಕೊಡುಗೆಯನ್ನು ಗೌರವಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯಿಂದ ಮಾರ್ಗದರ್ಶಿಸಲ್ಪಟ್ಟ ಸಂಗ್ರಹಾಲಯವು ಅವರ ಸಿದ್ಧಾಂತ ಅಥವಾ ಅಧಿಕಾರಾವಧಿಯನ್ನು ಲೆಕ್ಕಿಸದೆ ಸ್ವಾತಂತ್ರ್ಯದ ನಂತರ ಭಾರತದ ಪ್ರತಿಯೊಬ್ಬ ಪ್ರಧಾನಿಗೆ ಗೌರವ ನೀಡಿದೆ. “ನಮ್ಮ ಎಲ್ಲಾ ಪ್ರಧಾನಿಗಳ ನಾಯಕತ್ವ, ದೂರದೃಷ್ಟಿ ಮತ್ತು ಸಾಧನೆಗಳ ಬಗ್ಗೆ ಯುವ ಪೀಳಿಗೆಯನ್ನು ಸಂವೇದನಾಶೀಲಗೊಳಿಸುವ ಮತ್ತು ಪ್ರೇರೇಪಿಸುವ ಗುರಿಯನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಈ ಮ್ಯೂಸಿಯಂ ಎಲ್ಲರನ್ನೂ ಒಳಗೊಳ್ಳುವ ಪ್ರಯತ್ನವಾಗಿದೆ” ಎಂದು ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಾತನಾಡಿ, ಈ ಸಂಗ್ರಹಾಲಯ ‘ಕಾರ್ಯ ಪ್ರಗತಿಯಲ್ಲಿದೆ’ ಎಂದು ಹೇಳಿದರು. “ನಮ್ಮ ಕೊನೆಯ ಗ್ಯಾಲರಿಯು ಡಾ. ಮನಮೋಹನ್ ಸಿಂಗ್ ಅವರ ಪ್ರಧಾನಿಯಾಗಿ ಅಧಿಕಾರಾವಧಿಯನ್ನು ಪ್ರದರ್ಶಿಸುತ್ತದೆ. 2014 ರಿಂದ ಪಿಎಂ ಮೋದಿಯವರ ಅಧಿಕಾರವಧಿಯ ಕಾರ್ಯದ ಬಗ್ಗೆ ಕೂಡ ಶೀಘ್ರದಲ್ಲೇ ಕೆಲಸ ಮಾಡಲಾಗುವುದು” ಎಂದು ಅವರು ಹೇಳಿದ್ದಾರೆ.
ಪ್ರಧಾನ ಮಂತ್ರಿ ಸಂಗ್ರಹಾಲಯ ಹೇಗಿದೆ?
ಪ್ರಧಾನಮಂತ್ರಿಗಳ ಮ್ಯೂಸಿಯಂನಲ್ಲಿ ಅಂಬೇಡ್ಕರ್ಗೂ ಇದೆ ಸ್ಥಾನ
ಪ್ರಧಾನ ಮಂತ್ರಿ ಸಂಗ್ರಹಾಲಯದ ಲೋಗೋ ಅಶೋಕ ಚಕ್ರವನ್ನು ಹಿಡಿದಿರುವ ಭಾರತದ ಜನರ ಕೈಗಳನ್ನು ಪ್ರತಿನಿಧಿಸುತ್ತದೆ. ಇದು ರಾಷ್ಟ್ರ ಮತ್ತು ಪ್ರಜಾಪ್ರಭುತ್ವವನ್ನು ಸಂಕೇತಿಸುತ್ತದೆ ಎಂದು ಮೂಲಗಳು ಹೇಳಿವೆ. ಇದು ಸಂವಿಧಾನ ಸಭೆಯ ರಚನೆಯ ಹಿಂದಿರುವ ವ್ಯಕ್ತಿಗಳನ್ನು ಸಹ ಪ್ರದರ್ಶಿಸುತ್ತದೆ. “ಭಾರತದ ಸಂವಿಧಾನವಿಲ್ಲದೆ ಪ್ರಧಾನಿಯಾಗಲಿ ಅಥವಾ ಸರ್ಕಾರವಾಗಲಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಸಂವಿಧಾನವು ಆಡಳಿತದ ಸಾಧನವಾಗಿ ಉಳಿದಿದೆ”ಎಂದು ಸರ್ಕಾರಿ ಕಾರ್ಯನಿರ್ವಾಹಕರು ಹೇಳಿದ್ದಾರೆ.
ಇದನ್ನೂ ಓದಿ: ಏಪ್ರಿಲ್ 14ರಂದು 14 ಪ್ರಧಾನಮಂತ್ರಿಗಳ ಮ್ಯೂಸಿಯಂ ಉದ್ಘಾಟನೆ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ