AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಕರೆಗೆ ಓಗೊಟ್ಟ ವಿವಿಧ ರಾಜ್ಯಗಳ ನಾಯಕರು; ಯೋಗಿಯಿಂದ ಹಿಡಿದು ರೇಖಾವರೆಗೆ ಯಾರಿಂದೇನು ಕ್ರಮ?

PM Modi's Energy Saving Drive: ಪ್ರಧಾನಿ ಮೋದಿ ಇಂಧನ ಉಳಿತಾಯ ಕರೆಗೆ ಸ್ಪಂದಿಸಿ ರಾಜ್ಯ ನಾಯಕರು ಮಾದರಿ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಉತ್ತರ ಪ್ರದೇಶ ಸಿಎಂ ವಾಹನ ಕಡಿತಗೊಳಿಸಿ WFH ಉತ್ತೇಜಿಸಿದರೆ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ ಸಿಎಂಗಳು ಬೆಂಗಾವಲು ವಾಹನಗಳ ಸಂಖ್ಯೆ ತಗ್ಗಿಸಿದ್ದಾರೆ. ಮಹಾರಾಷ್ಟ್ರ ವಿಮಾನ ಬಳಕೆ ಮಿತಿಗೊಳಿಸಿದರೆ, ಗುಜರಾತ್ ರಾಜ್ಯಪಾಲರು ರೈಲು ಪ್ರಯಾಣಕ್ಕೆ ಆದ್ಯತೆ ನೀಡಿದ್ದಾರೆ. ಈ ಕ್ರಮಗಳು ಇಂಧನ ಸಂರಕ್ಷಣೆ ಹಾಗೂ ಸಾರ್ವಜನಿಕ ಹಣದ ಉಳಿತಾಯಕ್ಕೆ ಸಹಕಾರಿ.

ಮೋದಿ ಕರೆಗೆ ಓಗೊಟ್ಟ ವಿವಿಧ ರಾಜ್ಯಗಳ ನಾಯಕರು; ಯೋಗಿಯಿಂದ ಹಿಡಿದು ರೇಖಾವರೆಗೆ ಯಾರಿಂದೇನು ಕ್ರಮ?
ಮೋದಿImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2026 | 12:08 PM

Share

ನವದೆಹಲಿ, ಮೇ 13: ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ಇಂಧನ ಸಂರಕ್ಷಣೆ ಮತ್ತು ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವಂತೆ (Austerity measures) ನೀಡಿದ ಕರೆಯ ಬೆನ್ನಲ್ಲೇ, ದೇಶದ ವಿವಿಧ ರಾಜ್ಯಗಳಲ್ಲಿ ಆಡಳಿತಾರೂಢ ನಾಯಕರು ಮಾದರಿ ಕ್ರಮಗಳನ್ನು ಘೋಷಿಸಿದ್ದಾರೆ. ಅದರಲ್ಲೂ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿನ ಸಿಎಂ ಮತ್ತಿತರ ನಾಯಕರು ಮೋದಿ ಅವರ ಮಾತಿಗೆ ಬೆಲೆ ನೀಡಿ, ಇಂಧನ ಬಳಕೆ ತಗ್ಗಿಸಲು ಕ್ರಮ ತೆಗೆದುಕೊಂಡಿದ್ದಾರೆ. ಸಲಹೆ ಪಾಲನೆಯನ್ನು ತಮ್ಮಿಂದಲೇ ಶುರು ಮಾಡಿದ್ದಾರೆ. ವಿವಿಧ ರಾಜ್ಯಗಳ ನಾಯಕರು ಇಂಧನ ಉಳಿತಾಯಕ್ಕೆ ತೆಗೆದುಕೊಂಡಿರುವ ಕ್ರಮಗಳ ವಿವರ ಈ ಕೆಳಕಾಣಿಸಿದಂತಿದೆ:

ಉತ್ತರ ಪ್ರದೇಶ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಹಾಗೂ ಸಚಿವರ ವಾಹನಗಳ ಸಂಖ್ಯೆಯಲ್ಲಿ ತಕ್ಷಣವೇ 50% ಕಡಿತ ಮಾಡುವಂತೆ ಆದೇಶಿಸಿದ್ದಾರೆ. ಅಲ್ಲದೆ, ಸಚಿವರು ಮತ್ತು ಶಾಸಕರು ವಾರಕ್ಕೊಮ್ಮೆ ಕಡ್ಡಾಯವಾಗಿ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಿದ್ದಾರೆ. ರಾಜ್ಯದಲ್ಲಿ ವರ್ಕ್ ಫ್ರಂ ಹೋಮ್ ವ್ಯವಸ್ಥೆಗೆ ಉತ್ತೇಜನ ಕೊಡಲು, ಮತ್ತು ಹೆಚ್ಚು ಸಿಬ್ಬಂದಿ ಇರುವ ಸಂಸ್ಥೆಗಳಲ್ಲಿ ವಾರಕ್ಕೆ ಎರಡು ದಿನ ವರ್ಕ್ ಫ್ರಂ ಮಾಡಲು ಶಿಫಾರಸು ಮಾಡುವಂತೆ ಸಿಎಂ ತಿಳಿಸಿದ್ದಾರೆ.

ಮಧ್ಯಪ್ರದೇಶ: ಮುಖ್ಯಮಂತ್ರಿ ಮೋಹನ್ ಯಾದವ್ ಅವರು ತಮ್ಮ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವುದಾಗಿ ಘೋಷಿಸಿದ್ದು, ಇತರ ಸಚಿವರಿಗೂ ಇದೇ ಹಾದಿ ತುಳಿಯಲು ಮನವಿ ಮಾಡಿದ್ದಾರೆ. ಸಾಮಾನ್ಯ ಜನರು ಸಾರ್ವಜನಿಕ ಸಾರಿಗೆ ಬಳಸುವಂತೆಯೂ ಕೇಳಿಕೊಂಡಿದ್ದಾರೆ.

ದೆಹಲಿ: ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಅಧಿಕೃತ ಕೆಲಸಗಳಿಗೆ ಕನಿಷ್ಠ ವಾಹನ ಬಳಸುವುದಾಗಿ ತಿಳಿಸಿದ್ದಾರೆ. ತಮ್ಮನ್ನೂ ಒಳಗೊಂಡಂತೆ ದೆಹಲಿಯ ಎಲ್ಲಾ ಬಿಜೆಪಿ ಶಾಸಕರು ಮತ್ತು ಅಧಿಕಾರಿಗಳು ಕಾರ್-ಪೂಲಿಂಗ್ (ವಾಹನ ಹಂಚಿಕೆ) ಮತ್ತು ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರಧಾನಿಗಳ ಸಲಹೆ ಪಾಲಿಸುವಂತೆ ಸಾರ್ವಜನಿಕರಿಗೂ ಅವರು ಮನವಿ ಮಾಡಿದ್ದಾರೆ.

ರಾಜಸ್ಥಾನ: ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಭದ್ರತೆಯ ಹೆಸರಿನಲ್ಲಿ ಬಳಸುವ ಅನಗತ್ಯ ವಾಹನಗಳನ್ನು ನಿಲ್ಲಿಸಲು ಸೂಚಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ಈ ನಿಯಮ ಅನ್ವಯವಾಗಲಿದೆ.

ಮಹಾರಾಷ್ಟ್ರ: ಇಲ್ಲಿ ಸರ್ಕಾರಿ ವಿಮಾನ ಮತ್ತು ಹೆಲಿಕಾಪ್ಟರ್ ಬಳಕೆಗೆ ಬ್ರೇಕ್ ಹಾಕಲಾಗಿದೆ. ಸಚಿವರು ತುರ್ತು ಕೆಲಸಗಳಿಗಾಗಿ ವಿಮಾನ ಬಳಸಬೇಕಿದ್ದರೆ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: ಡಿಜಿಲಾಕರ್ ಬಳಕೆಯಲ್ಲಿ ಕರ್ನಾಟಕ ಟಾಪ್! ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಪ್ರಶಸ್ತಿ ಗೌರವ

ಬಿಹಾರ: ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಚೌಧರಿ ಅವರು ತಮ್ಮ ವೈಯಕ್ತಿಕ ಬಳಕೆಯ ವಾಹನಗಳ ಸಂಖ್ಯೆಯನ್ನು ಅರ್ಧದಷ್ಟು ಕಡಿತಗೊಳಿಸಿದ್ದು, ಅತ್ಯಗತ್ಯವಿದ್ದಾಗ ಮಾತ್ರ ಅಧಿಕೃತ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ಗುಜರಾತ್‌: ಗುಜರಾತ್ ರಾಜ್ಯಪಾಲರು ಹೆಲಿಕಾಪ್ಟರ್ ಅಥವಾ ವಿಮಾನಗಳ ಬದಲಿಗೆ ರಾಜ್ಯದೊಳಗೆ ಪ್ರಯಾಣಿಸಲು ರೈಲು ಮತ್ತು ಎಸ್‌ಟಿ (ST) ಬಸ್‌ಗಳನ್ನು ಬಳಸಲು ನಿರ್ಧರಿಸಿದ್ದಾರೆ. ಇನ್ನು ರಾಜ್ಯದ ಉಪಮುಖ್ಯಮಂತ್ರಿ ಹರ್ಷ ಸಂಘವಿ ಅವರು ತಮ್ಮ ನಿಗದಿತ ಅಮೆರಿಕ ಪ್ರವಾಸವನ್ನು ರದ್ದುಗೊಳಿಸುವ ಮೂಲಕ ವಿದೇಶಿ ಪ್ರಯಾಣದ ವೆಚ್ಚಕ್ಕೆ ಕಡಿವಾಣ ಹಾಕಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಲ್ಲೂ ನಿರೀಕ್ಷೆಗೂ ಮೀರಿ ವಿಶ್ವಾಸಮತ ಗೆದ್ದ ಸಿಎಂ ವಿಜಯ್: ಯಾರದ್ದೆಲ್ಲ ಬೆಂಬಲ ಸಿಕ್ತು? ಇಲ್ಲಿದೆ ವಿವರ

ಸರ್ಕಾರದ ಈ ಕ್ರಮಗಳು ಕೇವಲ ಇಂಧನ ಉಳಿತಾಯ ಮಾತ್ರವಲ್ಲದೆ, ಸಾರ್ವಜನಿಕ ಹಣದ ದುಂದುವೆಚ್ಚವನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ. ಜನಪ್ರತಿನಿಧಿಗಳೇ ನೇರವಾಗಿ ಸಾರ್ವಜನಿಕ ಸಾರಿಗೆ ಬಳಕೆಗೆ ಮುಂದಾಗಿರುವುದು ಜನಸಾಮಾನ್ಯರಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!