ನಾನು ಹೇಳಿದಂತೆ ಆಯ್ತು, ಬಿಜೆಪಿ ಅಧಿಕಾರ ರಚಿಸಿದ ಬೆನ್ನಲ್ಲೇ ಇಂಧನ-ಗ್ಯಾಸ್​ ಬೆಲೆ ಜಾಸ್ತಿಯಾಯ್ತು: ಛತ್ತೀಸ್​ಗಢ ಸಿಎಂ

ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಕೂಡ ಇಂಧನ ಮತ್ತು ಗ್ಯಾಸ್​ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ ಕೈಗೆಟಕುವ ಅಂಶಗಳೆಂದರೆ ಕೋಮುವಾದ ಮತ್ತು ದ್ವೇಷ. ಉಳಿದಿದ್ದೆಲ್ಲ ದುಬಾರಿ ಎಂದು ವ್ಯಂಗ್ಯ ಮಾಡಿದ್ದಾರೆ. 

ನಾನು ಹೇಳಿದಂತೆ ಆಯ್ತು, ಬಿಜೆಪಿ ಅಧಿಕಾರ ರಚಿಸಿದ ಬೆನ್ನಲ್ಲೇ ಇಂಧನ-ಗ್ಯಾಸ್​ ಬೆಲೆ ಜಾಸ್ತಿಯಾಯ್ತು: ಛತ್ತೀಸ್​ಗಢ ಸಿಎಂ
ಭೂಪೇಶ್ ಬಾಘೇಲ್​
Follow us
TV9 Web
| Updated By: Lakshmi Hegde

Updated on:Mar 23, 2022 | 8:27 AM

ತೈಲ ಮತ್ತು ಗೃಹಬಳಕೆ​ ಗ್ಯಾಸ್​ ಸಿಲಿಂಡರ್​ ಬೆಲೆ ಏರಿಕೆಯಾದ ಬೆನ್ನಲ್ಲೇ ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್​ ಅವರು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಹೊಸದಾಗಿ ಅಧಿಕಾರ ಹಿಡಿದ ಖುಷಿಗೆ ಬಿಜೆಪಿ ದೇಶದ ಜನರಿಗೆ ನೀಡುತ್ತಿರುವ ಉಡುಗೊರೆ ಇದು ಎಂದು ಹೇಳಿದ್ದಾರೆ.  ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ಪೆಟ್ರೋಲ್​, ಡೀಸೆಲ್​ ಮತ್ತು ಗೃಹಬಳಕೆ ಸಿಲಿಂಡರ್ ಗ್ಯಾಸ್​ ಬೆಲೆ ಏರಿಕೆಯಾಗುತ್ತದೆ ಎಂದು ನಾನು ಮೊದಲೇ ಹೇಳಿದ್ದೆ. ಅದರಂತೆ ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಹಿಡಿದ ನಂತರ ಬಿಜೆಪಿ ಮೊದಲು ನೀಡುತ್ತಿರುವ ಉಡುಗೊರೆಯೇ ತೈಲ ಬೆಲೆ ಏರಿಕೆ ಮತ್ತು ಗ್ಯಾಸ್​ ಬೆಲೆ ಏರಿಕೆ ಎಂದು ಹೇಳಿದರು.

ಹಾಗೇ, ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಕೂಡ ಇಂಧನ ಮತ್ತು ಗ್ಯಾಸ್​ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ದೇಶದ ಹಲವು ನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ಬೆಲೆ 1000 ರೂಪಾಯಿ ತಲುಪಿದ್ದಕ್ಕೆ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು. ಇನ್ನು ಪೆಟ್ರೋಲ್​​-ಡೀಸೆಲ್​ ಬೆಲೆಯಲ್ಲೂ ಇನ್ನು ಮುಂದೆ ದೈನಂದಿನ ವಿಕಾಸ (ಪ್ರತಿ ದಿನ ಏರಿಕೆ) ಆಗುತ್ತದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೈಗೆಟಕುವ ಅಂಶಗಳೆಂದರೆ ಕೋಮುವಾದ ಮತ್ತು ದ್ವೇಷ. ಉಳಿದಿದ್ದೆಲ್ಲ ದುಬಾರಿ ಎಂದು ವ್ಯಂಗ್ಯ ಮಾಡಿದ್ದಾರೆ.

ನವೆಂಬರ್​​ಗೂ ಮೊದಲು ಪೆಟ್ರೋಲ್​-ಡೀಸೆಲ್​ ಬೆಲೆ ಪ್ರತಿದಿನ ಏರಿಕೆಯಾಗುತ್ತಿತ್ತು. ಆದರೆ ನವೆಂಬರ್​​ನಲ್ಲಿ ದೀಪಾವಳಿ ಉಡುಗೊರೆಯಾಗಿ ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 10 ರೂ. ಮತ್ತು 5ರೂಪಾಯಿ ಕಡಿತಗೊಳಿಸಿತ್ತು. ಅಂದಿನಿಂದಲೂ ಪೆಟ್ರೋಲ್​-ಡೀಸೆಲ್​ ಬೆಲೆ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ.  ಅದರ ಬೆನ್ನಲ್ಲೇ ನಿನ್ನೆ (ಮಾರ್ಚ್​ 22) ಪೆಟ್ರೋಲ್​-ಡೀಸೆಲ್​ ಬೆಲೆಯನ್ನು 80 ಪೈಸೆ ಹೆಚ್ಚಳ ಮಾಡಲಾಗಿತ್ತು. ಇಂದೂ ಕೂಡ ಹೆಚ್ಚಿಸಲಾಗಿದೆ.

ಇದನ್ನೂ ಓದಿ: IPL 2022: ಐಪಿಎಲ್ ಆರಂಭದಲ್ಲೇ ಮುಂಬೈಗೆ ಆಘಾತ! ಬಲಿಷ್ಠ ಡೆಲ್ಲಿ ಎದುರಿನ ಪಂದ್ಯಕ್ಕೆ ತಂಡದ ಸ್ಟಾರ್ ಬ್ಯಾಟರ್ ಅಲಭ್ಯ

Published On - 8:12 am, Wed, 23 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್