AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲು ಸಿದ್ಧ; ಇಟಲಿ ಪ್ರಧಾನಿ ಭೇಟಿ ಬಳಿಕ ಮೋದಿ ಹೇಳಿಕೆ

ಮೋದಿ ಜತೆ ಮಾಧ್ಯಮಗಳಿಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿದ ಜಾರ್ಜಿಯಾ ಮೆಲೋನಿ, ಜಿ20 ಅಧ್ಯಕ್ಷತೆ ವಹಿಸಿರುವ ಈ ಸಂದರ್ಭದಲ್ಲಿ ಉಕ್ರೇನ್​ನಲ್ಲಿ ಶಾಂತಿ ನೆಲೆಸುವಂತೆ ಮಾಡುವ ಪ್ರಯತ್ನಗಳಲ್ಲಿ ಬಾರತ ಪ್ರಮುಖ ಪಾತ್ರ ವಹಿಸಬಲ್ಲದು ಎಂದು ಭಾವಿಸಿದ್ದೇನೆ ಎಂದು ಹೇಳಿದರು.

ಗಣಪತಿ ಶರ್ಮಾ
|

Updated on:Mar 02, 2023 | 8:36 PM

Share

ನವದೆಹಲಿ: ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ (Ukraine peace process) ತೊಡಗಿಕೊಳ್ಳಲು ಭಾರತ ಸಂಪೂರ್ಣ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಅವರು ಭಾರತ ಪ್ರವಾಸದಲ್ಲಿರುವ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರನ್ನು ದೆಹಲಿಯ ಹೈದರಾಬಾದ್ ಹೌಸ್​ನಲ್ಲಿ ಗುರುವಾರ ಸಂಜೆ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ, ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಪ್ರಮುಖ ಪಾತ್ರವಹಿಸಬೇಕು ಎಂದು ಮೆಲೋನಿ ಹೇಳಿದ್ದಾರೆ. ದ್ವಿಪಕ್ಷೀಯ ಮಾತುಕತೆ ವೇಳೆ ಅನೇಕ ಜಾಗತಿಕ ವಿಚಾರಗಳ ಜತೆ ಉಕ್ರೇನ್ ಸಂಘರ್ಷದ ಬಗ್ಗೆಯೂ ಚರ್ಚೆಯಾಗಿದೆ. ನವದೆಹಲಿಯಲ್ಲಿ ಜಿ20 ವಿದೇಶಾಂಗ ಸಚಿವರ ಸಭೆ ನಡೆಯುತ್ತಿರುವ ಸಂದರ್ಭದಲ್ಲೇ ಮೋದಿ ಈ ಹೇಳಿಕೆ ನೀಡಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ರಷ್ಯಾ – ಉಕ್ರೇನ್ ಯುದ್ಧದ ಆರಂಭದಿಂದಲೂ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂಬುದನ್ನು ಭಾರತ ಪ್ರತಿಪಾದಿಸುತ್ತಲೇ ಬಂದಿದೆ. ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲು ಭಾರತ ಪೂರ್ಣ ಸಿದ್ಧವಿದೆ ಎಂದು ಮೋದಿ ಹೇಳಿದ್ದಾರೆ.

ಮೋದಿ ಜತೆ ಮಾಧ್ಯಮಗಳಿಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿದ ಜಾರ್ಜಿಯಾ ಮೆಲೋನಿ, ಜಿ20 ಅಧ್ಯಕ್ಷತೆ ವಹಿಸಿರುವ ಈ ಸಂದರ್ಭದಲ್ಲಿ ಉಕ್ರೇನ್​ನಲ್ಲಿ ಶಾಂತಿ ನೆಲೆಸುವಂತೆ ಮಾಡುವ ಪ್ರಯತ್ನಗಳಲ್ಲಿ ಬಾರತ ಪ್ರಮುಖ ಪಾತ್ರ ವಹಿಸಬಲ್ಲದು ಎಂದು ಭಾವಿಸಿದ್ದೇನೆ ಎಂದು ಹೇಳಿದರು. ಉಕ್ರೇನ್​ ಮೇಲಿನ ರಷ್ಯಾದ ಅತಿಕ್ರಮಣವನ್ನು ಬಲವಾಗಿ ಖಂಡಿಸುವುದಾಗಿಯೂ ಅವರು ಹೇಳಿದರು.

ಇದನ್ನೂ ಓದಿ: Narendra Modi: ಮೋದಿ ವಿಶ್ವದಲ್ಲೇ ಅತ್ಯಂತ ಜನಪ್ರಿಯ, ಪ್ರಮುಖ ನಾಯಕ; ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಶ್ಲಾಘನೆ

ರಷ್ಯಾದ ಸಶಸ್ತ್ರ ಪಡೆಗಳು ಉಕ್ರೇನ್ ಮೇಲೆ ಕಾನೂನುಬಾಹಿರ ಮತ್ತು ಅಪ್ರಚೋದಿತ ಆಕ್ರಮಣ ನಡೆಸುತ್ತಿರುವುದನ್ನು ಇಟಲಿ ಬಲವಾಗಿ ಖಂಡಿಸುತ್ತದೆ ಎಂದೂ ಅವರು ಹೇಳಿದರು.

ಉಕ್ರೇನ್‌ನಲ್ಲಿ ಉಂಟಾಗಿರುವ ಮಾನವೀಯ ಬಿಕ್ಕಟ್ಟು ಮತ್ತು ಅಭಿವೃದ್ಧಿಹೊಂದುತ್ತಿರುವ ರಾಷ್ಟ್ರಗಳ ಮೇಲೆ ಈ ಬಿಕ್ಕಟ್ಟು ಬೀರಿರುವ ವ್ಯತಿರಿಕ್ತ ಪರಿಣಾಮದ ಇಟಲಿ ಪ್ರಧಾನಿ ನನ್ನ ಜತೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಉಕ್ರೇನ್ ಸಂಘರ್ಷದಿಂದ ಉಂಟಾದ ಆಹಾರ, ರಸಗೊಬ್ಬರ ಮತ್ತು ಇಂಧನ ಬಿಕ್ಕಟ್ಟಿನಿಂದ ಎಲ್ಲಾ ದೇಶಗಳು ತೊಂದರೆ ಅನುಭವಿಸುತ್ತಿವೆ ಎಂದು ಅವರು ಹೇಳಿದರು.

‘ಮೋದಿ ವಿಶ್ವದಲ್ಲೇ ಅತ್ಯಂತ ಜನಪ್ರಿಯ, ಪ್ರಮುಖ ನಾಯಕ’

ನರೇಂದ್ರ ಮೋದಿ ವಿಶ್ವದಲ್ಲೇ ಅತ್ಯಂತ ಜನಪ್ರಿಯ ಹಾಗೂ ಪ್ರಮುಖ ನಾಯಕ ಎಂದು ಜಾರ್ಜಿಯಾ ಮೆಲೋನಿ ಬಣ್ಣಿಸಿದ್ದಾರೆ. ಮೋದಿ ಅವರು ವಿಶ್ವದ ಪ್ರಮುಖ ನಾಯಕರಾಗಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರು ಜಾಗತಿಕ ಮಟ್ಟದ ಎಲ್ಲ ನಾಯಕರ ಪೈಕಿ ಅತ್ಯಂತ ಪ್ರೀತಿಪಾತ್ರರಾಗಿದ್ದಾರೆ. ಅವರು ಜಾಗತಿಕ ಮಟ್ಟದ ಪ್ರಮುಖ ನಾಯಕ ಎಂಬುದು ಸಾಬೀತಾಗಿದೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Thu, 2 March 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್