G20 Summit: ‘ವಿಶ್ವವೇ ಒಂದು ಕುಟುಂಬ’ ಜಿ-20 ಶೃಂಗಸಭೆಯಲ್ಲಿ ಏಕತೆಯ ಸಂದೇಶ ಸಾರಿದ ಭಾರತ

ಭಾರತವು ಈ ವರ್ಷ 9 ನೇ ಅಂತರರಾಷ್ಟ್ರೀಯ ಯೋಗ ದಿನದ ಅಧ್ಯಕ್ಷತೆಯನ್ನು ವಹಿಸಿದೆ. ವಿಶ್ವಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು.

G20 Summit: 'ವಿಶ್ವವೇ ಒಂದು ಕುಟುಂಬ' ಜಿ-20 ಶೃಂಗಸಭೆಯಲ್ಲಿ ಏಕತೆಯ ಸಂದೇಶ ಸಾರಿದ ಭಾರತ
ಜಿ20 ಸಭೆ
Follow us
ರಶ್ಮಿ ಕಲ್ಲಕಟ್ಟ
|

Updated on: Jul 11, 2023 | 1:44 PM

ದೆಹಲಿ: ಭಾರತ ಆಯೋಜಿಸಿರುವ ಈ ವರ್ಷದ ಜಿ-20 ಶೃಂಗಸಭೆಯ (G20 Summit) ಟ್ಯಾಗ್‌ಲೈನ್‌ ವಸುದೈವ ಕುಟುಂಬಕಂ (Vasudhaiva Kutumbakam). ಇದರ ಅರ್ಥ, ಇಡೀ ವಿಶ್ವವೇ ಒಂದು ಕುಟುಂಬ. ಈ ಟ್ಯಾಗ್‌ಲೈನ್‌ನಿಂದ ಭಾರತವು ಇಡೀ ಜಗತ್ತಿಗೆ ಏಕತೆಯ ಸಂದೇಶವನ್ನು ಕಳುಹಿಸುತ್ತಿದೆ ಎಂಬುದು ಸ್ಪಷ್ಟವಾಗಿದೆ. ಆದರೆ ಟ್ಯಾಗ್ ಲೈನ್ ಮೂಲಕ ಮಾತ್ರವಲ್ಲ, ಅಂತಾರಾಷ್ಟ್ರೀಯ ಯೋಗ ದಿನ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಭಾರತವು ‘ಒಂದು ಕುಟುಂಬ’ ಎಂಬ ಸಂದೇಶವನ್ನು ನೀಡಿದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಜಿ20 ಶೃಂಗಸಭೆ ನವದೆಹಲಿಯಲ್ಲಿ ನಡೆಯಲಿದೆ. ಇದಕ್ಕಾಗಿ ಜನವರಿಯಿಂದಲೇ ತಯಾರಿ ಶುರುವಾಗಿದೆ. ಎಲ್ಲಾ ಜಿ-20 ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ಭಾರತದ ವಿವಿಧ ಭಾಗಗಳಲ್ಲಿ ಪ್ರತ್ಯೇಕ ಸಭೆಗಳನ್ನು ನಡೆಸಲಾಗುತ್ತಿದ್ದು ಕೇಂದ್ರ ಸರ್ಕಾರ ಪ್ರತಿ ಸಭೆಯ ಮೂಲಕ ಏಕತೆಯ ಸಂದೇಶವನ್ನು ಸಾರಲಿದೆ.

ಭಾರತವು ಈ ವರ್ಷ 9 ನೇ ಅಂತರರಾಷ್ಟ್ರೀಯ ಯೋಗ ದಿನದ ಅಧ್ಯಕ್ಷತೆಯನ್ನು ವಹಿಸಿದೆ. ವಿಶ್ವಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು. 135 ಕ್ಕೂ ಹೆಚ್ಚು ದೇಶಗಳಿಂದ ಲಕ್ಷಾಂತರ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವ ದಾಖಲೆಯನ್ನು ಸ್ಥಾಪಿಸಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ಮೋದಿ ಏಕತೆಯ ಸಂದೇಶವನ್ನೂ ನೀಡಿದ್ದಾರೆ.

ಪ್ರವಾಸೋದ್ಯಮ ಕ್ಷೇತ್ರವನ್ನು ವಿಸ್ತರಿಸಲು ಭಾರತದ ಪ್ರವಾಸೋದ್ಯಮ ಸಚಿವಾಲಯವು ಜಿ 20 ದೇಶಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಹಲವಾರು ಬಾರಿ ಸಭೆ ನಡೆಸಿದೆ. ಆ ಸಭೆಗಳಲ್ಲಿ, ದೇಶದ ಸಂಸ್ಕೃತಿಯನ್ನು ಜಾಗತಿಕ ವೇದಿಕೆಗೆ ತರುವ ಮೂಲಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಉಪಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಭಾರತದ ‘ವೈವಿಧ್ಯತೆಯಲ್ಲಿ ಏಕತೆ’ಯ ಸಂದೇಶವನ್ನು ಎತ್ತಿ ತೋರಿಸಲಾಯಿತು. ಮತ್ತೊಮ್ಮೆ, ಜಿ 20 ರ ಮೂರನೇ ಸಭೆಯಲ್ಲಿ ಜಾಗತಿಕ ಆರ್ಥಿಕತೆಯಲ್ಲಿ ಭಾರತದ ಪಾಲ್ಗೊಳ್ಳುವಿಕೆಯ ಬಗ್ಗೆ ಚರ್ಚಿಸಲಾಯಿತು. ಅಷ್ಟೇ ಅಲ್ಲ, ಪುರುಷರಿಗೆ ಸರಿಸಮಾನವಾಗಿ ಮಹಿಳೆಯರು ಕುಳಿತಿದ್ದಾರೆ ಎಂಬ ಅಂಶವೂ ‘ಮಹಿಳೆ-20 ಶೃಂಗಸಭೆ’ ಮೂಲಕ ಬೆಳಕಿಗೆ ಬಂದಿದೆ.

ಪ್ರಸ್ತುತ ‘ಜಾಗತಿಕ ತಾಪಮಾನ’ ತಡೆಯಲು ಪರಿಸರ ಸಂರಕ್ಷಣೆ, ಗಿಡ ನೆಡುವ ಬಗ್ಗೆ ಗಮನಹರಿಸುವುದು ಅತೀ ಅಗತ್ಯವಾಗಿದ್ದು, ಈ ವಿಚಾರದಲ್ಲಿ ಎಲ್ಲ ದೇಶಗಳು ಜಂಟಿಯಾಗಿ ಮುಂದೆ ಬರಬೇಕಿದೆ ಎಂದು ಜಿ-20 ಸಭೆಯಲ್ಲೂ ಗಮನ ಸೆಳೆದಿದೆ. ಮರಗಳನ್ನು ನೆಡುವ ಮೂಲಕ ಇಡೀ ಜಗತ್ತನ್ನು ಉಳಿಸುವ ಸಂದೇಶವನ್ನು ವಿಶ್ವ ಪರಿಸರ ದಿನದಂದು ಎತ್ತಿ ಹಿಡಿದಿರುವಂತೆ, ಜಿ-20 ಸಭೆಯಲ್ಲಿ ನೀರಿನ ಸಂರಕ್ಷಣೆಯ ವಿಷಯವೂ ಪ್ರಮುಖವಾಗಿದೆ.

ಇದನ್ನೂ ಓದಿ:Flood Crisis: ಪ್ರವಾಹ ಬಿಕ್ಕಟ್ಟು ಎದುರಿಸಲು ಹಿಮಾಚಲ, ಉತ್ತರಾಖಂಡ ಸರ್ಕಾರಕ್ಕೆ ಸೂಕ್ತ ಸಹಾಯದ ಭರವಸೆ ನೀಡಿದ ಪ್ರಧಾನಿ ಮೋದಿ

ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ಹೈದರಾಬಾದ್‌ನಲ್ಲಿ ಮತ್ತೆ ವಿಶೇಷ ಸಭೆ ಆಯೋಜಿಸಲಾಗಿದೆ. ಆ ಸಭೆಯಲ್ಲಿ ರಾಗಿ ಆರ್ಥಿಕ ವರ್ಷವಾಗಿ ರಾಗಿಗೆ ಒತ್ತು ನೀಡಲಾಯಿತು. ಎಲ್ಲರಿಗೂ ಆಹಾರ, ಆರೋಗ್ಯ ಸೇವೆಗಳ ಸಮಸ್ಯೆಯನ್ನು ಮತ್ತೆ ಎತ್ತಿ ತೋರಿಸಲಾಗಿದೆ. ಈ ಬಾರಿಯ ಜಿ-20 ಶೃಂಗಸಭೆಯಲ್ಲಿ ದಕ್ಷಿಣ ಜಗತ್ತಿಗೆ ಅಭಿವೃದ್ಧಿಯೇ ಮುಖ್ಯ ವಿಷಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್