ದೆಹಲಿ: ಜಿ-20 ಶೃಂಗಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಸೆ.8 ರಿಂದ 10ರವರೆಗೆ ಶಾಲೆಗಳು, ಕಚೇರಿಗಳು, ಅಂಗಡಿಗಳು ಬಂದ್

ದೆಹಲಿಯಲ್ಲಿ ಜಿ-20 ಶೃಂಗಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೆ.8ರಿಂದ ಸೆ.10ರವರೆಗೆ ಶಾಲೆಗಳು, ಕಚೇರಿಗಳು, ಅಂಗಡಿಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಪೊಲೀಸ್ ವಿಶೇಷ ಆಯುಕ್ತರು ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 10 ರವರೆಗೆ ಸರ್ಕಾರಿ ರಜೆಯನ್ನು ಘೋಷಿಸಲು ಶಿಫಾರಸು ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆಗಳು ನಡೆದಿವೆ.

ದೆಹಲಿ: ಜಿ-20 ಶೃಂಗಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಸೆ.8 ರಿಂದ 10ರವರೆಗೆ ಶಾಲೆಗಳು, ಕಚೇರಿಗಳು, ಅಂಗಡಿಗಳು ಬಂದ್
ಪೊಲೀಸ್

Updated on: Aug 23, 2023 | 8:46 AM

ದೆಹಲಿಯಲ್ಲಿ ಜಿ-20 ಶೃಂಗಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೆ.8ರಿಂದ ಸೆ.10ರವರೆಗೆ ಶಾಲೆಗಳು, ಕಚೇರಿಗಳು, ಅಂಗಡಿಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಪೊಲೀಸ್ ವಿಶೇಷ ಆಯುಕ್ತರು ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 10 ರವರೆಗೆ ಸರ್ಕಾರಿ ರಜೆಯನ್ನು ಘೋಷಿಸಲು ಶಿಫಾರಸು ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆಗಳು ನಡೆದಿವೆ.

ವಿಶ್ವದ ಅತಿದೊಡ್ಡ ಆರ್ಥಿಕತೆಗಳ ನಾಯಕರ ಸಭೆಯಾದ G20 ಶೃಂಗಸಭೆಯು ಸೆಪ್ಟೆಂಬರ್ 9 ಮತ್ತು ಸೆಪ್ಟೆಂಬರ್ 10 ರಂದು ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯ ಪ್ರಗತಿ ಮೈದಾನದಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ಅತ್ಯಾಧುನಿಕ ಭಾರತ್ ಮಂಟಪದ ಸಮಾವೇಶ ಕೇಂದ್ರದಲ್ಲಿ ನಡೆಯಲಿದೆ.

ಟ್ರಾಫಿಕ್​ನ್ನು ನಿಭಾಯಿಸುವ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಜಿ-20 ಶೃಂಗಸಭೆಯಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡೆನ್, ಚೀನಾದ ಪ್ರಧಾನಿ ಕ್ಸಿ ಜಿನ್‌ಪಿಂಗ್, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಸೇರಿದಂತೆ ಹಲವಾರು ರಾಷ್ಟ್ರಗಳ ಮುಖ್ಯಸ್ಥರು ಮತ್ತು ರಾಜತಾಂತ್ರಿಕರು ಆಗಮಿಸಲಿದ್ದಾರೆ. ವಿವಿಧ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಬಹು ತಂಡಗಳನ್ನು ನಿಯೋಜಿಸಲಾಗಿದೆ.

ಮತ್ತಷ್ಟು ಓದಿ: G20 Summit: ‘ವಿಶ್ವವೇ ಒಂದು ಕುಟುಂಬ’ ಜಿ-20 ಶೃಂಗಸಭೆಯಲ್ಲಿ ಏಕತೆಯ ಸಂದೇಶ ಸಾರಿದ ಭಾರತ

G20 ಶೃಂಗಸಭೆಯು ಜಾಗತಿಕ ಆರ್ಥಿಕ ಸಮಸ್ಯೆಗಳು, ಸಹಕಾರ ಮತ್ತು ನೀತಿ ಸಮನ್ವಯವನ್ನು ಚರ್ಚಿಸಲು ರಾಷ್ಟ್ರದ ಮುಖ್ಯಸ್ಥರು, ಆರ್ಥಿಕ ತಜ್ಞರು ಮತ್ತು ವಿವಿಧ ವಲಯಗಳ ಪ್ರತಿನಿಧಿಗಳು ಒಗ್ಗೂಡಲಿದ್ದಾರೆ.

ಇದಲ್ಲದೆ, ದೆಹಲಿ ಪೊಲೀಸರು ವಿಶೇಷ ರೀತಿಯ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಬುಲೆಟ್ ಪ್ರೂಫ್ ಜಾಕೆಟ್‌ಗಳು ಮತ್ತು ಎಕ್ಸ್-ರೇ ಯಂತ್ರಗಳನ್ನು ಸಂಗ್ರಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:45 am, Wed, 23 August 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us