G20 Meeting: ಶ್ರೀನಗರದಲ್ಲಿ ಇಂದಿನಿಂದ ಜಿ 20 ದೇಶಗಳ ಪ್ರವಾಸೋದ್ಯಮ ಕಾರ್ಯಪಡೆ ಸಭೆ, ಬಿಗಿ ಭದ್ರತೆ

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಇಂದಿನಿಂದ ಆರಂಭವಾಗಲಿರುವ 2 ದಿನಗಳ ಜಿ 20 ದೇಶಗಳ ಪ್ರವಾಸೋದ್ಯಮ ಕಾರ್ಯಪಡೆ ಸಭೆ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. 26/11 ಮಾದರಿ ದಾಳಿ ನಡೆಸಲು ಪಾಕಿಸ್ತಾನ ಸಂಚು ರೂಪಿಸಿದ್ದ ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ.

G20 Meeting: ಶ್ರೀನಗರದಲ್ಲಿ ಇಂದಿನಿಂದ ಜಿ 20 ದೇಶಗಳ ಪ್ರವಾಸೋದ್ಯಮ ಕಾರ್ಯಪಡೆ ಸಭೆ, ಬಿಗಿ ಭದ್ರತೆ
ಭದ್ರತೆImage Credit source: Indian Express
Follow us
ನಯನಾ ರಾಜೀವ್
|

Updated on: May 22, 2023 | 10:18 AM

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಇಂದಿನಿಂದ ಆರಂಭವಾಗಲಿರುವ 2 ದಿನಗಳ ಜಿ 20 ದೇಶಗಳ ಪ್ರವಾಸೋದ್ಯಮ ಕಾರ್ಯಪಡೆ ಸಭೆ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. 26/11 ಮಾದರಿ ದಾಳಿ ನಡೆಸಲು ಪಾಕಿಸ್ತಾನ ಸಂಚು ರೂಪಿಸಿದ್ದ ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ. ಅಂತಾರಾಷ್ಟ್ರೀಯ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಇಂದು ನಡೆಯಲಿರುವ ಸಭೆಯು ದಾಲ್ ಸರೋವರದ ದಡದಲ್ಲಿರುವ ಶೆರ್ರಿ ಕಾಶ್ಮೀರ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ (SKICC) ನಲ್ಲಿ ನಡೆಯಲಿದೆ. ಜಿ20 ರಾಷ್ಟ್ರಗಳ 60 ಮಂದಿ ಸೇರಿದಂತೆ 180ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಶ್ರೀನಗರದಲ್ಲಿ ನಡೆದ ಜಿ 20 ಸಭೆಯು ಈ ಪ್ರದೇಶದ ಪ್ರವಾಸೋದ್ಯಮ ಸಾಮರ್ಥ್ಯ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಎತ್ತಿ ಹಿಡಿಯಲು ವಿಶೇಷ ಅವಕಾಶವನ್ನು ಒದಗಿಸುತ್ತದೆ ಎಂದು ಕೇಂದ್ರ ಪ್ರವಾಸೋದ್ಯಮ ಕಾರ್ಯದರ್ಶಿ ಅರವಿಂದ್ ಸಿಂಗ್ ಹೇಳಿದ್ದಾರೆ.

ಮತ್ತಷ್ಟು ಓದಿ: G-20 in Srinagar: ಜಿ20 ಸಭೆಗಾಗಿ ಕಾಶ್ಮೀರದಲ್ಲಿ ಕಟ್ಟೆಚ್ಚರ, ಎಲ್​ಒಸಿ ಬಳಿ ಬಿಗಿ ಭದ್ರತೆ, 15 ಕಡೆ ಎನ್​ಐಎ ದಾಳಿ

ಸಭೆಯು ಇಂದಿನಿಂದ ಎರಡು ದಿನಗಳ ಕಾಲ ಅಂದರೆ ಮೇ 24 ರವರೆಗೆ ನಡೆಯಲಿದೆ. ಜೂನ್‌ನಲ್ಲಿ ಗೋವಾದಲ್ಲಿ ಜಿ20 ಪ್ರವಾಸೋದ್ಯಮ ಸಚಿವರ ಕೊನೆಯ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಚಿವರು ಅಂಗೀಕರಿಸುವ ಕರಡು ಪ್ರತಿ ಶ್ರೀನಗರದಲ್ಲಿ ಅಂತಿಮಗೊಳ್ಳಲಿರುವುದರಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ.

ಜಿ20 ಸಭೆಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಅರೆಸೇನಾ ಪಡೆಗಳು ಮತ್ತು ಪೊಲೀಸರು ಮೆರೈನ್ ಕಮಾಂಡೋಗಳು ಮತ್ತು ಎನ್ಎಸ್ಜಿ ಸಹಾಯವನ್ನು ತೆಗೆದುಕೊಳ್ಳುತ್ತಿದ್ದಾರೆ. ಅದೇ ಸಮಯದಲ್ಲಿ, ಸ್ಫೋಟಕಗಳು ಮತ್ತು ಐಇಡಿಗಳನ್ನು ಪರೀಕ್ಷಿಸಲು ಸ್ಕ್ಯಾನರ್‌ಗಳು ಮತ್ತು ನಾಯಿಗಳನ್ನು ಸಹ ನಿಯೋಜಿಸಲಾಗಿದೆ.

ಜಿ 20 ಮುಖ್ಯ ಸಂಯೋಜಕ ಹರ್ಷ್ ವರ್ಧನ್ ಶ್ರಿಂಗ್ಲಾ ಅವರು ಭಾನುವಾರ ಇಲ್ಲಿ ಜಿ 20 ಪ್ರವಾಸೋದ್ಯಮ ವರ್ಕಿಂಗ್ ಗ್ರೂಪ್ ಸಭೆಯು ಪ್ರತಿನಿಧಿಗಳ ಹೆಚ್ಚಿನ ಭಾಗವಹಿಸುವಿಕೆಯನ್ನು ಹೊಂದಿದೆ ಮತ್ತು ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ಪ್ರಮುಖ ಕಾರ್ಯಕ್ರಮವಾಗಿದೆ ಎಂದು ಹೇಳಿದರು.

ಶ್ರೀನಗರದಲ್ಲಿ ಜಿ20 ಸಭೆ ಆಯೋಜನೆಗೆ ಆರಂಭದಿಂದಲೂ ವಿರೋಧ ಹೊಂದಿದ್ದ ಪಾಕಿಸ್ತಾನ ಇಲ್ಲಿ ಏನಾದರೂ ದುಷ್ಕೃತ್ಯಕ್ಕೆ ಸಂಚು ರೂಪಿಸಿರಬಹುದೆಂಬ ಶಂಕೆ ಮೊದಲಿನಿಂದಲೂ ಭದ್ರತಾ ಪಡೆಗಳಿಗೆ ಇತ್ತು. ಹೀಗಾಗಿ ಕಳೆದೊಂದು ತಿಂಗಳಿನಿಂದ ಕಣಿವೆ ರಾಜ್ಯದಲ್ಲಿ ಭಾರಿ ನಿಗಾ ಇಟ್ಟಿದ್ದ ಭದ್ರತಾ ಪಡೆಗಳು ಇತ್ತೀಚೆಗೆ ಫಾರುಖ್‌ ಅಹಮದ್‌ ವಾನಿ ಎಂಬಾತನನ್ನು ಬಂಧಿಸಿದ್ದವು.

ಜಿ20 ಸಭೆ ಕಾರ್ಯಕ್ರಮ ನಡೆಯುವ ಹೊತ್ತಿನಲ್ಲಿ ಗುಲ್ಮಾಗ್‌ರ್‍ನ ಹೋಟೆಲ್‌ ಸೇರಿದಂತೆ ಎರಡು ಮೂರು ಸ್ಥಳಗಳ ಮೇಲೆ ಏಕಕಾಲಕ್ಕೆ ಮುಂಬೈ ಮಾದರಿ ಗುಂಡಿನ ದಾಳಿ ನಡೆಸಲು ಪಾಕಿಸ್ತಾನ ಮೂಲಕ ಉಗ್ರ ಸಂಘಟನೆಗಳು ಸಂಚು ರೂಪಿಸಿರುವ ವಿಷಯ ಬೆಳಕಿಗೆ ಬಂದಿದೆ.

ಜಿ20 ರಾಷ್ಟ್ರಗಳ ಕಾರ್ಯಕಾರಿ ಗುಂಪಿನ 3 ದಿನಗಳ ಸಭೆ ಇಂದಿನಿಂದ ಶ್ರೀನಗರದಲ್ಲಿ ಆರಂಭವಾಗಲಿದೆ. ಈ ಸಭೆಯಲ್ಲಿ 100ಕ್ಕೂ ಹೆಚ್ಚು ಅತಿಥಿಗಳು ಭಾಗಿಯಾಗಲಿದ್ದು, ಮೇ 24ಕ್ಕೆ ಅಂತ್ಯವಾಗಲಿದೆ. ಜಿ20 ಶೃಂಗ ಈ ವರ್ಷಾಂತ್ಯಕ್ಕೆ ನಡೆಯಲಿದ್ದು, ಅದಕ್ಕೆ ಮುನ್ನ ನಡೆಯುವ ಮಹತ್ವದ ಸಭೆ ಇದಾಗಿದೆ. ಆದರೆ, ಉಗ್ರರ ಉಪಟಳ ಇರುವ ಈ ರಾಜ್ಯದಲ್ಲಿ ಈ ಹಿಂದೆಂದೂ ಕಂಡಿರದ ರೀತಿಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ವಾಯುಪಡೆ, ನೌಕಾಪಡೆ ಮತ್ತು ಭೂಸೇನೆಗಳು ಸಹ ಭದ್ರತಾ ಕಾರ್ಯದಲ್ಲಿ ಭಾಗಿಯಾಗಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!