ದೆಹಲಿಯಲ್ಲಿ G20 ಶೃಂಗಸಭೆ: ರಿಷಿ ಸುನಕ್ ಸೇರಿದಂತೆ ಇತರೆ ರಾಷ್ಟ್ರ ನಾಯಕರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿದೆ. ಜಿ20 ರಾಷ್ಟ್ರಗಳ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆ ನಡೆಸಿದರು. ಬ್ರಿಟನ್ ಪ್ರಧಾನಿ ರಿಷಿ ಸುನಕ್, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ಪ್ರಧಾನಿ ಮೋದಿ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ.
ದೆಹಲಿ ಸೆಪ್ಟೆಂಬರ್ 09: ಜಿ20 ಶೃಂಗಸಭೆಗಾಗಿ (G20 Summit) ಭಾರತಕ್ಕೆ ಆಗಮಿಸಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆ ನಡೆಸಿದರು. ಅಕ್ಟೋಬರ್ 2022 ರಲ್ಲಿ ಪ್ರಧಾನಿಯಾದ ಬಳಿಕ ರಿಷಿ ಸುನಕ್ ಅವರು ಮೊದಲ ಭಾರೀಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ವಿವಿಧ G20 ಸಭೆಗಳು ಮತ್ತು ಕಾರ್ಯಕ್ರಮಗಳಲ್ಲಿ ಉನ್ನತ ಮಟ್ಟದಲ್ಲಿ ಭಾಗವಹಿಸುವುದರೊಂದಿಗೆ ಗುರುತಿಸಲ್ಪಟ್ಟ ಭಾರತದ ಜಿ 20 ಅಧ್ಯಕ್ಷತೆಯಲ್ಲಿ ಯುಕೆಯ ಬೆಂಬಲಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಟ್ವಿಟರ್ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ವ್ಯಾಪಾರ ಸಂಬಂಧಗಳನ್ನು ಇನ್ನಷ್ಟು ಗಟ್ಟಿಗೊಳಸಲು ಮತ್ತು ಹೂಡಿಕೆಯನ್ನು ಉತ್ತೇಜಿಸುವ ಕುರಿತಾಗಿ ನಾವು ಚರ್ಚಿಸಿದ್ದೇವೆ. ಭಾರತ ಮತ್ತು ಯುಕೆ ಸಮೃದ್ಧ ಮತ್ತು ಜಾಗತಿಕ ಸುಸ್ಥಿರ ಅಭವೃದ್ಧಿ ಕೆಲಸ ಮಾಡುತ್ತಲೇ ಇರುತ್ತವೆ. ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿ ಖುಷಿ ಆಗಿದೆ ಎಂದು ಹೇಳಿದ್ದಾರೆ.
Great to have met PM @RishiSunak on the sidelines of the G20 Summit in Delhi. We discussed ways to deepen trade linkages and boost investment. India and UK will keep working for a prosperous and sustainable planet. pic.twitter.com/7kKC17FfgN
— Narendra Modi (@narendramodi) September 9, 2023
ವಿಶೇಷವಾಗಿ ಆರ್ಥಿಕತೆ, ರಕ್ಷಣೆ ಮತ್ತು ಭದ್ರತೆ, ತಂತ್ರಜ್ಞಾನ, ಹಸಿರು ತಂತ್ರಜ್ಞಾನ ಮತ್ತು ಹವಾಮಾನ ಬದಲಾವಣೆ, ಆರೋಗ್ಯ ಕ್ಷೇತ್ರಗಳ ಬಗ್ಗೆ ಇಬ್ಬರೂ ನಾಯಕರು ಪ್ರಾಮುಖ್ಯತೆ ಮತ್ತು ಪರಸ್ಪರ ಹಿತಾಸಕ್ತಿಯ ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಇದು ಮೋದಿ ಗ್ಯಾರಂಟಿ: ಜಿ20 ಶೃಂಗಸಭೆಯಲ್ಲಿ ಆಫ್ರಿಕಾ ಒಕ್ಕೂಟಕ್ಕೆ ಕಾಯಂ ಸದಸ್ಯತ್ವ ಬಗ್ಗೆ ಎಸ್ ಜೈಶಂಕರ್
ಅದೇ ರೀತಿಯಾಗಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ ಮಾಡಿದ್ದಾರೆ. ಮಾರ್ಚ್ 2023 ರಲ್ಲಿ ಅಧಿಕೃತ ಭೇಟಿಯ ಬಳಿಕ ಪ್ರಧಾನಿ ಮೆಲೋನಿ ಅವರ ಎರಡನೇ ಭಾರತ ಭೇಟಿ ಇದಾಗಿದೆ. ಈ ಸಮಯದಲ್ಲಿ ದ್ವಿಪಕ್ಷೀಯ ಸಂಬಂಧಗಳ ಕಾರ್ಯತಂತ್ರದ ಪಾಲುದಾರಿಕೆಯ ಮಟ್ಟವನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
I had excellent meeting with PM @GiorgiaMeloni. Our talks covered sectors such as trade, commerce, defence, emerging technologies and more. India and Italy will keep working together for global prosperity. pic.twitter.com/mBtyczMjB0
— Narendra Modi (@narendramodi) September 9, 2023
ಭಾರತದ ಜಿ 20 ಅಧ್ಯಕ್ಷತೆಗೆ ಬೆಂಬಲ ಮತ್ತು ಜಾಗತಿಕ ಜೈವಿಕ ಇಂಧನ ಒಕ್ಕೂಟ ಮತ್ತು ಭಾರತ – ಮಧ್ಯಪ್ರಾಚ್ಯ – ಯುರೋಪ್ ಆರ್ಥಿಕ ಕಾರಿಡಾತ್ಗೆ ಇಟಲಿಯ ಬೆಂಬಲವನ್ನು ಪ್ರಧಾನಿ ಶ್ಲಾಘಿಸಿದ್ದಾರೆ. ವ್ಯಾಪಾರ, ವಾಣಿಜ್ಯ, ರಕ್ಷಣೆ, ಹೊಸ ಬಗೆಯ ತಂತ್ರಜ್ಞಾನಗಳು ಮತ್ತು ಜಾಗತಿಕ ಏಳಿಗೆಗಾಗಿ ಭಾರತ ಮತ್ತು ಇಟಲಿ ಒಟ್ಟಾಗಿ ಕೆಲಸ ಮಾಡಲಿವೆ. ಜಾರ್ಜಿಯಾ ಮೆಲೋನಿ ಅವರೊಂದಿಗೆ ಉತ್ತಮ ಮಾತುಕತೆ ನಡೆಸಿರುವುದಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಜಿ20 ಶೃಂಗಸಭೆಯಲ್ಲಿ ಅಂಗೀಕರಿಸಲಿರುವ ‘ನವದೆಹಲಿ ಘೋಷಣೆ’ಗೆ ಒಮ್ಮತ; ನಾಯಕರು ಏನು ಹೇಳಿದರು?
ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ಪ್ರಧಾನಿ ನರೇಂದ್ರ ಇಂದು ದ್ವಿಪಕ್ಷೀಯ ಸಭೆ ಮಾಡಿದ್ದಾರೆ. ಸಭೆಯಲ್ಲಿ, ಉಭಯ ದೇಶಗಳು ತಮ್ಮ ತಮ್ಮ ಜಿ -20 ಮತ್ತು ಜಿ -7 ಪ್ರೆಸಿಡೆನ್ಸಿ ಆದ್ಯತೆಗಳ ಬಗ್ಗೆ, ವಿಶೇಷವಾಗಿ ಜಾಗತಿಕ ದಕ್ಷಿಣದ ಕಾಳಜಿ ಮತ್ತು ಆಕಾಂಕ್ಷೆಗಳನ್ನು ಮುನ್ನೆಲೆಗೆ ತರುವಲ್ಲಿ ವರ್ಷವಿಡೀ ರಚನಾತ್ಮಕ ಕಾರ್ಯವಿಧಾನಕ್ಕೆ ನಾಯಕರು ಒಪ್ಪಿಕೊಂಡಿದ್ದಾರೆ.
ಮೂಲಸೌಕರ್ಯ ಅಭಿವೃದ್ಧಿ, ತಾಂತ್ರಿಕ ಸಹಯೋಗ, ಹೂಡಿಕೆ ಮತ್ತು ಇಂಧನ ಸೇರಿದಂತೆ ಭಾರತ-ಜಪಾನ್ ದ್ವಿಪಕ್ಷೀಯ ಪಾಲುದಾರಿಕೆಯ ವಿವಿಧ ಅಂಶಗಳ ಬಗ್ಗೆ ನಾಯಕರು ಚರ್ಚೆ ನಡೆಸಿದ್ದಾರೆ. ಜೊತೆಗೆ ಭಾರತ-ಜಪಾನ್ ವಿಶೇಷ ವ್ಯೂಹಾತ್ಮಕ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಸಂಕಲ್ಪ ಮಾಡಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:09 pm, Sat, 9 September 23