G20 ಶೃಂಗಸಭೆಯಲ್ಲಿ ಯಾರೆಲ್ಲ ಭಾಗವಹಿಸುತ್ತಾರೆ? ಯಾರು ಗೈರು?

18ನೇ ಜಿ20 ಶೃಂಗಸಭೆಯಲ್ಲಿ ಸ್ಟೇಟ್ ಕೌನ್ಸಿಲ್‌ನ ಪ್ರಧಾನ ಮಂತ್ರಿ ಲಿ ಕಿಯಾಂಗ್ ಚೀನಾವನ್ನು ಪ್ರತಿನಿಧಿಸಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಹೇಳಿದ್ದಾರೆ. ಹಾಗಾಗಿ G20 ಸಭೆಯಲ್ಲಿ ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್ ಭಾಗವಹಿಸುವುದಿಲ್ಲ ಎಂಬುದನ್ನು ಇದು ಸೂಚಿಸುತ್ತದೆ.

G20 ಶೃಂಗಸಭೆಯಲ್ಲಿ ಯಾರೆಲ್ಲ ಭಾಗವಹಿಸುತ್ತಾರೆ? ಯಾರು ಗೈರು?
ಜಿ20 ಶೃಂಗಸಭೆ
Follow us
ರಶ್ಮಿ ಕಲ್ಲಕಟ್ಟ
|

Updated on: Sep 05, 2023 | 1:43 PM

ದೆಹಲಿ ಸೆಪ್ಟೆಂಬರ್ 05: ಸೆಪ್ಟೆಂಬರ್ 9 ಮತ್ತು 10 ರಂದು ದೆಹಲಿಯಲ್ಲಿ(Delhi) G20 ಶೃಂಗಸಭೆ (G20 Summit) ನಡೆಯಲಿದ್ದು, 20 ದೇಶಗಳ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಭಾರತದಲ್ಲಿ ನಡೆಯುವ ಈ ಜಿ20 ಶೃಂಗಸಭೆಯು ಐತಿಹಾಸಿಕವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದು, ಇದು ವಿಶ್ವ ನಾಯಕರ ಅತಿದೊಡ್ಡ ಸಭೆಗೆ ಸಾಕ್ಷಿಯಾಗಲಿದೆ. ನ್ಯೂಸ್ 18 ವರದಿಯ ಪ್ರಕಾರ, ನವದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ 40 ಕ್ಕೂ ಹೆಚ್ಚು ವಿಶ್ವ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಮುಂಬರುವ G20 ಶೃಂಗಸಭೆಯ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಯಾರು ಈ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ? ಯಾವ ನಾಯಕರು ಗೈರು ಎಂಬುದರ ಬಗ್ಗೆ ನೋಡೋಣ.

ಶೃಂಗಸಭೆಯಲ್ಲಿ ಭಾಗವಹಿಸಲು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 10 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅವರ ಭೇಟಿಯ ಸಮಯದಲ್ಲಿ, ಜಾಗತಿಕ ಸವಾಲುಗಳನ್ನು ಎದುರಿಸಲು ಸಹಕಾರಿ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಶುದ್ಧ ಶಕ್ತಿಯ ಪರಿವರ್ತನೆ ಮತ್ತು ಹವಾಮಾನ ಬದಲಾವಣೆಯ ವಿರುದ್ಧದ ಹೋರಾಟದ ಬಗ್ಗೆಯೂ ನಾಯಕರು ಚರ್ಚೆ ನಡೆಸಲಿದ್ದಾರೆ. ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳ ಸಾಮರ್ಥ್ಯಗಳನ್ನು ಬಲಪಡಿಸಲು ಮತ್ತು ಉಕ್ರೇನ್ ಸಂಘರ್ಷದ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮಗಳನ್ನು ನಿವಾರಿಸುವ ಬಗ್ಗೆ ಬೈಡನ್ ಚರ್ಚೆ ನಡೆಸಲಿದ್ದಾರೆ ಎಂದು ಶ್ವೇತ ಭವನ ಹೇಳಿದೆ.

18ನೇ ಜಿ20 ಶೃಂಗಸಭೆಯಲ್ಲಿ ಸ್ಟೇಟ್ ಕೌನ್ಸಿಲ್‌ನ ಪ್ರಧಾನ ಮಂತ್ರಿ ಲಿ ಕಿಯಾಂಗ್ ಚೀನಾವನ್ನು ಪ್ರತಿನಿಧಿಸಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಹೇಳಿದ್ದಾರೆ. ಹಾಗಾಗಿ G20 ಸಭೆಯಲ್ಲಿ ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್ ಭಾಗವಹಿಸುವುದಿಲ್ಲ ಎಂಬುದನ್ನು ಇದು ಸೂಚಿಸುತ್ತದೆ.

ಯುಕೆ ಪ್ರಧಾನಿ ರಿಷಿ ಸುನಕ್ ಅವರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ವರದಿಯ ಪ್ರಕಾರ, ಅವರ ಭೇಟಿಯ ಸಮಯದಲ್ಲಿ, ಸುನಕ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಪ್ರತ್ಯೇಕ ದ್ವಿಪಕ್ಷೀಯ ಸಭೆಯಲ್ಲಿ ಯುಕೆ-ಭಾರತ ವ್ಯಾಪಾರ ಮಾತುಕತೆಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ದೆಹಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಈ ಹಿಂದೆ ಪ್ರಧಾನಿ ಮೋದಿ ಅವರಿಗೆ ತಿಳಿಸಿದ್ದರು. ಇವರ ಬದಲು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರು ಶೃಂಗಸಭೆಯಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ.

ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಜಿ20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಭಾರತದಲ್ಲಿನ ದಕ್ಷಿಣ ಕೊರಿಯಾದ ರಾಯಭಾರಿ ಚಾಂಗ್ ಜೇ ಬೊಕ್ ಈ ತಿಂಗಳ ಆರಂಭದಲ್ಲಿ, “ನಮ್ಮ ಅಧ್ಯಕ್ಷರು ಸೆಪ್ಟೆಂಬರ್ 9-10 ರಂದು ನಡೆಯುವ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದು ಖಚಿತವಾಗಿದೆ. ನ್ಯೂಸ್ 18 ಪ್ರಕಾರ, ಮ್ಯಾಕ್ರನ್ ಅವರ ಭೇಟಿಯ ಸಮಯದಲ್ಲಿ ನವದೆಹಲಿಯ ಕ್ಲಾರಿಡ್ಜಸ್ ಹೋಟೆಲ್‌ನಲ್ಲಿ ಅವರಿಗೆ ವಸತಿ ಕಲ್ಪಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಜಿ 20 ಶೃಂಗಸಭೆಗೆ ತಮ್ಮ ಭೇಟಿಯನ್ನು ಖಚಿತಪಡಿಸಿದ್ದಾರೆ. “ನಾನು ಒಂದು ವಾರದಲ್ಲಿ ಜಿ 20 ನಲ್ಲಿರುತ್ತೇನೆ. ಜಗತ್ತು ಉಕ್ರೇನ್‌ನೊಂದಿಗೆ ನಿಂತಿದೆ ಎಂದು ಖಚಿತಪಡಿಸಿಕೊಳ್ಳುವುದನ್ನು ನಾವು ಮುಂದುವರಿಸುತ್ತೇವೆ ಎಂದು ಟ್ರುಡೊ ಹೇಳಿದ್ದಾರೆ.

ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಭಾರತ ಪ್ರವಾಸವು ಮೂರು-ರಾಷ್ಟ್ರಗಳ ಪ್ರವಾಸಲ್ಲೊಂದಾಗಿಗೆ. ಅಲ್ಬನೀಸ್ ಅವರು ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್ ಪ್ರವಾಸ ಕೈಗೊಳ್ಳಲಿದ್ದಾರೆ. ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಕೂಡ ಶೃಂಗಸಭೆಯಲ್ಲಿ ಭಾಗವಹಿಸುವುದು ಖಚಿತವಾಗಿದೆ. ಶೃಂಗಸಭೆಯ ನಂತರ, ಯುಎನ್ ಜನರಲ್ ಅಸೆಂಬ್ಲಿಯ 78 ನೇ ಅಧಿವೇಶನದಲ್ಲಿ ಭಾಗವಹಿಸಲು ಎರ್ಡೊಗನ್ ನ್ಯೂಯಾರ್ಕ್‌ಗೆ ಪ್ರಯಾಣಿಸಲಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಶೃಂಗಸಭೆಯಲ್ಲಿ ಉಪಸ್ಥಿತರಿರುತ್ತಾರೆ ಮತ್ತು ಶೃಂಗಸಭೆಯ ಮುಕ್ತಾಯದ ನಂತರ ದೆಹಲಿಯಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನವದೆಹಲಿ ಶೃಂಗಸಭೆಗೆ ಹಾಜರಾಗಲು ಆಹ್ವಾನವನ್ನು ಸ್ವೀಕರಿಸದ ಕಾರಣ ಗೈರುಹಾಜರಾಗಲಿದ್ದಾರೆ.

ಇದನ್ನೂ ಓದಿ: G20 Summit: ಜಿ20 ಶೃಂಗಸಭೆ ಹಿನ್ನೆಲೆ ಎರಡು ದಿನಗಳ ಕಾಲ ಈ ಮೆಟ್ರೋ ನಿಲ್ದಾಣಗಳು ಬಂದ್

ನ್ಯೂಸ್ 18 ರ ವರದಿಯ ಪ್ರಕಾರ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಮೆಕ್ಸಿಕೋ, ಜಪಾನ್, ಇಟಲಿ, ಜರ್ಮನಿ, ಇಂಡೋನೇಷಿಯಾ, ಬ್ರೆಜಿಲ್ ಮತ್ತು ಅರ್ಜೆಂಟೀನಾ ಸೇರಿದಂತೆ ಶೃಂಗಸಭೆಯಲ್ಲಿ ತಮ್ಮ ಹಾಜರಾತಿಯನ್ನು ಇನ್ನೂ ದೃಢೀಕರಿಸಿಲ್ಲ. ಶೃಂಗಸಭೆಯಲ್ಲಿ ನೆದರ್ಲ್ಯಾಂಡ್ಸ್, ಸಿಂಗಾಪುರ್, ಸ್ಪೇನ್, ಯುಎಇ, ಒಮಾನ್, ಬಾಂಗ್ಲಾದೇಶ, ಈಜಿಪ್ಟ್, ಮಾರಿಷಸ್ ಮತ್ತು ನೈಜೀರಿಯಾವನ್ನು ಒಳಗೊಂಡಿರುವ ಕೆಲವು ಅತಿಥಿ ದೇಶಗಳೂ ಭಾಗವಹಿಸಲಿವೆ.

G20, 19 ಪ್ರತ್ಯೇಕ ರಾಷ್ಟ್ರ ಅಂದರೆಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ರಿಪಬ್ಲಿಕ್ ಆಫ್ ಕೊರಿಯಾ, ಮೆಕ್ಸಿಕೋ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿಯೆ, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್ ಯುರೋಪಿಯನ್ ಯೂನಿಯನ್ ಜೊತೆಗೆ ಪ್ರಮುಖ ಅಂತಾರಾಷ್ಟ್ರೀಯ ಸಭೆಯನ್ನು ರೂಪಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್