ಬಾಲಿಯಲ್ಲಿ ಜಿ20 ಅಧ್ಯಕ್ಷ ಸ್ಥಾನವನ್ನು ಅಧಿಕೃತವಾಗಿ ಸ್ವೀಕರಿಸಿದ ಪ್ರಧಾನಿ ಮೋದಿ

ಸಮಾರೋಪ ಸಮಾರಂಭದಲ್ಲಿ ಮೋದಿ, ಜಿ20 ಕಾರ್ಯಸೂಚಿಯಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಪ್ರತಿಪಾದಿಸಿದರು. ಭಾರತವು ಡಿಸೆಂಬರ್ 1, 2022 ರಿಂದ ಒಂದು ವರ್ಷದವರೆಗೆ G20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದೆ.

ಬಾಲಿಯಲ್ಲಿ ಜಿ20 ಅಧ್ಯಕ್ಷ ಸ್ಥಾನವನ್ನು ಅಧಿಕೃತವಾಗಿ ಸ್ವೀಕರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 16, 2022 | 3:23 PM

ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಬುಧವಾರ ಬಾಲಿಯಲ್ಲಿ(Bali) ಇಂಡೋನೇಷ್ಯಾದ ಅಧ್ಯಕ್ಷ ಜೋಕೊ ವಿಡೋಡೊ(Joko Widodo) ಅವರಿಂದ ಭಾರತದ ಜಿ20 (G20)ಅಧ್ಯಕ್ಷ ಸ್ಥಾನವನ್ನು ಅಧಿಕೃತವಾಗಿ ಸ್ವೀಕರಿಸಿದರು. ಜಿ 20 ರ ಸಮಾರೋಪದ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಜಿ 20 ಅಧ್ಯಕ್ಷ ಸ್ಥಾನವು ಎಲ್ಲರನ್ನೂ ಒಳಗೊಳ್ಳುವ, ಮಹತ್ವಾಕಾಂಕ್ಷೆಯ, ನಿರ್ಣಾಯಕ ಮತ್ತು ಕಾರ್ಯ ಆಧಾರಿತವಾಗಿರುತ್ತದೆ ಎಂದು ಹೇಳಿದರು.”ಭಾರತ ಜಿ 20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ನಾವು ಭಾರತದ ವಿವಿಧ ರಾಜ್ಯಗಳು ಮತ್ತು ನಗರಗಳಲ್ಲಿ ಜಿ 20 ಸಭೆಗಳನ್ನು ಆಯೋಜಿಸುತ್ತೇವೆ. ಒಟ್ಟಾಗಿ ನಾವು ಜಿ 20 ಅನ್ನು ಜಾಗತಿಕ ಬದಲಾವಣೆಗೆ ವೇಗವರ್ಧಕವಾಗಿ ಮಾಡುತ್ತೇವೆ” ಎಂದು ಮೋದಿ ಹೇಳಿದರು.ಜಗತ್ತು ಏಕಕಾಲದಲ್ಲಿ ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಆರ್ಥಿಕ ಮಂದಗತಿ, ಆಹಾರ ಮತ್ತು ಇಂಧನ ಬೆಲೆಗಳ ಏರಿಕೆ ಮತ್ತು ದೀರ್ಘಾವಧಿಯ ಸಾಂಕ್ರಾಮಿಕದ ದುಷ್ಪರಿಣಾಮಗಳೊಂದಿಗೆ ಹೋರಾಡುತ್ತಿರುವ ಸಮಯದಲ್ಲಿ ಭಾರತವು G-20 ನ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತಿದೆ. ಅಂತಹ ಸಮಯದಲ್ಲಿ ಜಗತ್ತು ಜಿ -20 ಅನ್ನು ಭರವಸೆಯಿಂದ ನೋಡುತ್ತಿದೆ ಎಂದು ಮೋದಿ ಹೇಳಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಮೋದಿ, ಜಿ20 ಕಾರ್ಯಸೂಚಿಯಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಪ್ರತಿಪಾದಿಸಿದರು. ಭಾರತವು ಡಿಸೆಂಬರ್ 1, 2022 ರಿಂದ ಒಂದು ವರ್ಷದವರೆಗೆ G20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದೆ.

ಇದನ್ನೂ ಓದಿ
Image
ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ 3,000 ಭಾರತೀಯರಿಗೆ ವೀಸಾ ನೀಡಲು ರಿಷಿ ಸುನಕ್ ಸಮ್ಮತಿ
Image
Modi speech in Indonesia: ಭಾರತದ ರಾಮಮಂದಿರಕ್ಕೂ ಇಂಡೋನೇಷ್ಯಾ ಬಾಲಿ ನದಿಗೂ ಅವಿನಾಭಾವ ಸಂಬಂಧವಿದೆ : ಮೋದಿ
Image
G20 Summit: ಜಿ20 ಶೃಂಗಸಭೆ; ಪ್ರಧಾನಿ ಮೋದಿ ಬಳಿ ಬಂದು ತಬ್ಬಿ, ಕೈ ಕುಲುಕಿದ ಅಮೆರಿಕ ಅಧ್ಯಕ್ಷ ಜೋ ಬೈಡೆನ್
Image
G20 Summit: ಜಿ20 ಶೃಂಗಸಭೆಗೆ ತೆರಳಿದ ಪ್ರಧಾನಿ ಮೋದಿಗೆ ಬಾಲಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಅದ್ದೂರಿ ಸ್ವಾಗತ

ಮುಂದಿನ ಒಂದು ವರ್ಷದಲ್ಲಿ ಹೊಸ ಯೋಚನೆಗಳನ್ನು ರೂಪಿಸಲು ಮತ್ತು ಸಾಮೂಹಿಕ ಕ್ರಿಯೆಯನ್ನು ವೇಗಗೊಳಿಸಲು G-20 ಜಾಗತಿಕ ಪ್ರಧಾನ ಮೂವರ್ ಆಗಿ ಕಾರ್ಯನಿರ್ವಹಿಸುತ್ತದೆ ಎಂದು ಖಚಿತಪಡಿಸಿಕೊಳ್ಳಲು ನಾವು ಶ್ರಮಿಸುತ್ತೇವೆ. ನೈಸರ್ಗಿಕ ಸಂಪನ್ಮೂಲಗಳ ಮೇಲಿನ ಮಾಲೀಕತ್ವದ ಭಾವನೆ ಇಂದು ಸಂಘರ್ಷಕ್ಕೆ ಕಾರಣವಾಗುತ್ತಿದೆ. ಇದು ಪರಿಸರದ ದುಸ್ಥಿತಿಗೆ ಮುಖ್ಯ ಕಾರಣವಾಗಿದೆ. ಗ್ರಹದ ಸುರಕ್ಷಿತ ಭವಿಷ್ಯಕ್ಕಾಗಿ, ಟ್ರಸ್ಟಿಶಿಪ್ ಪ್ರಜ್ಞೆಯು ಪರಿಹಾರವಾಗಿದೆ. LiFE ಅಂದರೆ ‘ಪರಿಸರಕ್ಕಾಗಿ ಜೀವನಶೈಲಿ’ ಅಭಿಯಾನವು ಇದಕ್ಕೆ ದೊಡ್ಡ ಕೊಡುಗೆಯನ್ನು ನೀಡಬಹುದು. ಸುಸ್ಥಿರ ಜೀವನಶೈಲಿಯನ್ನು ಸಾಮೂಹಿಕ ಚಳುವಳಿಯನ್ನಾಗಿ ಮಾಡುವುದು ಇದರ ಉದ್ದೇಶವಾಗಿದೆ.

ಜಿ-20 ಅಧ್ಯಕ್ಷ ಸ್ಥಾನದ ಥೀಮ್ ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯವನ್ನು ಹೈಲೈಟ್ ಮಾಡಿದ ಮೋದಿ ನಮ್ಮ ಮುಂದಿನ ಪೀಳಿಗೆಗಳು ಶಾಂತಿ ಮತ್ತು ಭದ್ರತೆಯಿಲ್ಲದೆ ಆರ್ಥಿಕ ಬೆಳವಣಿಗೆ ಅಥವಾ ತಾಂತ್ರಿಕ ಆವಿಷ್ಕಾರದ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಎರಡು ದಿನಗಳ G20 ಶೃಂಗಸಭೆಯ ಮುಕ್ತಾಯದ ಹೊತ್ತಲ್ಲಿ ಹಸ್ತಾಂತರ ಸಮಾರಂಭ ನಡೆದಿದೆ. ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಅವರು ಜಿ 20 ‘ಫಲಿತಾಂಶದ ದಾಖಲೆ’ ಕರಡು ರಚನೆಗೆ ಭಾರತ ‘ರಚನಾತ್ಮಕ’ ಕೊಡುಗೆ ನೀಡಿದೆ ಎಂದು ಹೇಳಿದರು.

G20ನಲ್ಲಿರುವ 19 ದೇಶಗಳು: ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ದಕ್ಷಿಣ ಕೊರಿಯಾ, ಮೆಕ್ಸಿಕೋ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಯುಕೆ, ಯುಎಸ್ಎ ಮತ್ತು ಯುರೋಪಿಯನ್ ಯೂನಿಯನ್ (EU).

ಇದು ಯುದ್ಧದ ಯುಗವಲ್ಲ: ಜಿ 20 ನಿರ್ಣಯದಲ್ಲಿ ಪ್ರತಿಧ್ವನಿಸಿದ ಮೋದಿ ಮಾತು

ಉಕ್ರೇನ್-ರಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಇದು ಯುದ್ಧದ ಯುಗವಲ್ಲ ಎಂಬ ಪ್ರಬಲ ಸಂದೇಶವು ಈಗ ಜಿ 20 ನಿರ್ಣಯದಲ್ಲಿ ಪ್ರತಿಧ್ವನಿಸಿದೆ.  ರಷ್ಯಾದ ಆಕ್ರಮಣವನ್ನು ಟೀಕಿಸುವ ಮಾತುಗಳ ಬಗ್ಗೆ ಸದಸ್ಯ ರಾಷ್ಟ್ರಗಳ ನಡುವೆ ಒಮ್ಮತವನ್ನು ಸಾಧಿಸುವಲ್ಲಿ ಭಾರತೀಯ ನಿಯೋಗವು ದೊಡ್ಡ ಪಾತ್ರವನ್ನು ವಹಿಸಿದೆ ಎಂದು ಮಾತುಕತೆಗಳ ಬಗ್ಗೆ ತಿಳಿದಿರುವ ಮೂವರು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಈ ಹೇಳಿಕೆಯು ಸೆಪ್ಟೆಂಬರ್‌ನಲ್ಲಿ ಪುಟಿನ್‌ಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ ಮಾತುಗಳನ್ನು ಪ್ರತಿಧ್ವನಿಸಿದೆ. ‘ಈಗ ಯುದ್ಧದ ಸಮಯವಲ್ಲ ಮತ್ತು ಫಲಿತಾಂಶದ ದಾಖಲೆಗಾಗಿ ಒಮ್ಮತವನ್ನು ಸಾಧಿಸುವಲ್ಲಿ ಭಾರತವು ಪ್ರಮುಖ ಪಾತ್ರ ವಹಿಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಅವರು ಬಾಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ್ದಾರೆ.

ಶಾಂತಿಯುತ ಪರಿಹಾರ, ಬಿಕ್ಕಟ್ಟುಗಳನ್ನು ಪರಿಹರಿಸುವ ಪ್ರಯತ್ನಗಳು ಮತ್ತು ರಾಜತಾಂತ್ರಿಕತೆ ಮತ್ತು ಸಂವಾದದ ಮೂಲಕ ಉಕ್ರೇನ್ ಸಂಘರ್ಷವನ್ನು ಪರಿಹರಿಸಲು ಪ್ರಧಾನಿ ಮೋದಿ ಅವರ ಕರೆ, ಜಿ 20 ಶೃಂಗಸಭೆಯಲ್ಲಿ ನಾಯಕರು ಕೈಗೊಂಡ ವಿಧಾನದಲ್ಲಿ ಗೋಚರಿಸುತ್ತದೆ. ಆತಿಥೇಯ ಇಂಡೋನೇಷ್ಯಾ ಮತ್ತು ಇತರ ದೇಶಗಳು ಜಾಗತಿಕ ಆರ್ಥಿಕತೆಯ ಮೇಲೆ ಕೇಂದ್ರೀಕರಿಸಬೇಕೆಂದು ಶೃಂಗಸಭೆ ಹೇಳಿದೆ. ಹದಿನಾಲ್ಕು ವರ್ಷಗಳ ಹಿಂದೆ, G20 ನಾಯಕರು ಮೊದಲ ಬಾರಿಗೆ ಭೇಟಿಯಾಗಿದ್ದು, ನಮ್ಮ ಪೀಳಿಗೆಯಲ್ಲಿ ಅತ್ಯಂತ ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಉಕ್ರೇನ್‌ನಲ್ಲಿನ ಯುದ್ಧವು ಜಾಗತಿಕ ಆರ್ಥಿಕತೆಗೆ ಹಾನಿಯನ್ನುಂಟುಮಾಡುತ್ತಿದೆ. ಸಂಘರ್ಷದಲ್ಲಿ ಪರಮಾಣು ಶಸ್ತ್ರಾಸ್ತ್ರಗಳ ಬೆದರಿಕೆ ಅಥವಾ ಬಳಕೆಯ ವಿರುದ್ಧ ಎಚ್ಚರಿಕೆ ನೀಡಿದೆ ಎಂದು ಜಿ20 ಹೇಳಿಕೆಯಲ್ಲಿ ಹೇಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Wed, 16 November 22

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು