ಜಿ20 ಶೃಂಗಸಭೆ: ವಿಶ್ವನಾಯಕರೊಂದಿಗೆ 15 ದ್ವಿಪಕ್ಷೀಯ ಸಭೆಗಳನ್ನು ನಡೆಸಲಿರುವ ಪ್ರಧಾನಿ ಮೋದಿ

ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ನಾಯಕರೊಂದಿಗೆ 15ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಸೆ.9ರಿಂದ 10ರವರೆಗೆ ನಡೆಯಲಿರುವ ಜಿ20 ಶೃಂಗಸಭೆಗೆ ವಿಶ್ವ ನಾಯಕರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಎರಡು ದಿನಗಳ ಶೃಂಗಸಭೆಯಲ್ಲಿ, ವಿಶ್ವ ನಾಯಕರು ಹವಾಮಾನ ಬದಲಾವಣೆ, ಭೌಗೋಳಿಕ ರಾಜಕೀಯ ಮತ್ತು ಬಹುಪಕ್ಷೀಯ ಸಹಕಾರ ಸೇರಿದಂತೆ ಜಾಗತಿಕ ಅಭಿವೃದ್ಧಿ ಸವಾಲುಗಳನ್ನು ಚರ್ಚಿಸಲಿದ್ದಾರೆ. ಭಾರತ ಈ ಬಾರಿ ಶೃಂಗಸಭೆಯನ್ನು ಆಯೋಜಿಸುತ್ತಿದೆ.

ಜಿ20 ಶೃಂಗಸಭೆ: ವಿಶ್ವನಾಯಕರೊಂದಿಗೆ 15 ದ್ವಿಪಕ್ಷೀಯ ಸಭೆಗಳನ್ನು ನಡೆಸಲಿರುವ ಪ್ರಧಾನಿ ಮೋದಿ
ನರೇಂದ್ರ ಮೋದಿImage Credit source: Mint
Follow us
ನಯನಾ ರಾಜೀವ್
|

Updated on: Sep 08, 2023 | 11:41 AM

ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆ(G20 Summit)ಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ವಿಶ್ವ ನಾಯಕರೊಂದಿಗೆ 15ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಸೆ.9ರಿಂದ 10ರವರೆಗೆ ನಡೆಯಲಿರುವ ಜಿ20 ಶೃಂಗಸಭೆಗೆ ವಿಶ್ವ ನಾಯಕರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಎರಡು ದಿನಗಳ ಶೃಂಗಸಭೆಯಲ್ಲಿ, ವಿಶ್ವ ನಾಯಕರು ಹವಾಮಾನ ಬದಲಾವಣೆ, ಭೌಗೋಳಿಕ ರಾಜಕೀಯ ಮತ್ತು ಬಹುಪಕ್ಷೀಯ ಸಹಕಾರ ಸೇರಿದಂತೆ ಜಾಗತಿಕ ಅಭಿವೃದ್ಧಿ ಸವಾಲುಗಳನ್ನು ಚರ್ಚಿಸಲಿದ್ದಾರೆ. ಭಾರತ ಈ ಬಾರಿ ಶೃಂಗಸಭೆಯನ್ನು ಆಯೋಜಿಸುತ್ತಿದೆ.

20 ಸದಸ್ಯ ರಾಷ್ಟ್ರಗಳ ಈ ಗುಂಪು ಅನೇಕ ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳನ್ನು ಒಳಗೊಂಡಿದೆ, ಇದರಲ್ಲಿ ಭಾರತವು ಪ್ರಮುಖ ಮತ್ತು ಶಾಶ್ವತ ಸದಸ್ಯವಾಗಿದೆ. ಅಮೆರಿಕ, ಕೆನಡಾ, ಬ್ರಿಟನ್, ಫ್ರಾನ್ಸ್, ಜಪಾನ್ ಸೇರಿದಂತೆ ಹಲವು ರಾಷ್ಟ್ರಗಳ ನಾಯಕರು ಪಾಲ್ಗೊಳ್ಳಲಿದ್ದಾರೆ, ಈ ಮೂರು ದಿನಗಳಲ್ಲಿ ನರೇಂದ್ರ ಮೋದಿ ಅವರು ಜಿ20 ಹೊರತುಪಡಿಸಿ 15 ದ್ವಿಪಕ್ಷೀಯ ಸಭೆಗಳನ್ನು ಹಲವಾರು ರಾಷ್ಟ್ರಗಳ ಮುಖ್ಯಸ್ಥರು ಮತ್ತು ನಾಯಕರೊಂದಿಗೆ ನಡೆಸಲಿದ್ದಾರೆ.

ಸೆಪ್ಟೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್, ಬಾಂಗ್ಲಾದೇಶ ಮತ್ತು ಅಮೆರಿಕದ ನಾಯಕರೊಂದಿಗೆ ಲೋಕ ಕಲ್ಯಾಣ ಮಾರ್ಗದಲ್ಲಿ ಸಭೆ ನಡೆಸಲಿದ್ದಾರೆ. ಸೆಪ್ಟೆಂಬರ್ 9 ರಂದು ನಡೆಯಲಿರುವ ಜಿ20 ಸಭೆಗಳ ಹೊರತಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಟನ್, ಜಪಾನ್, ಜರ್ಮನಿ ಮತ್ತು ಇಟಲಿ ರಾಷ್ಟ್ರಗಳ ಮುಖ್ಯಸ್ಥರು ಮತ್ತು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.

ಮತ್ತಷ್ಟು ಓದಿ: G 20 Summit; ಶೃಂಗಸಭೆಗೂ ಮುನ್ನ ಜಿ 20 ಅಧ್ಯಕ್ಷತೆಯಲ್ಲಿ ಭಾರತದ ಸಾಧನೆಗಳಿವು

ಪ್ರಧಾನಿಯಾದ ನಂತರ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಮೊದಲ ಭಾರತ ಭೇಟಿ ನೀಡುತ್ತಿರುವುದು ಗಮನಾರ್ಹ ಸಂಗತಿ. ಭಾರತ, ಯುಕೆ ಮತ್ತು ಭಾರತದ ನಡುವೆ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಮತ್ತು ಇತರ ವಿಷಯಗಳ ಕುರಿತು ಚರ್ಚೆಗಳು ನಡೆಯಲಿವೆ. ಪ್ರಧಾನಿ ರಿಷಿ ಸುನಕ್ ಅವರ ಕುಟುಂಬ ಸದಸ್ಯರು ಕೂಡ ದೆಹಲಿಗೆ ಬರುತ್ತಿದ್ದಾರೆ.

ಸೆಪ್ಟೆಂಬರ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಊಟದ ಜತೆ ಜತೆಯೇ ಸಭೆ ನಡೆಸಲಿದ್ದಾರೆ.

ಇದಲ್ಲದೇ ಕೆನಡಾದೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಕೊಮೊರೊಸ್, ಟರ್ಕಿ, ಯುನೈಟೆಡ್ ಅರಬ್ ಎಮಿರೇಟ್ಸ್, ದಕ್ಷಿಣ ಕೊರಿಯಾ, ಇಯು/ಇಸಿ, ಬ್ರೆಜಿಲ್ ಮತ್ತು ನೈಜೀರಿಯಾದೊಂದಿಗೆ ದ್ವಿಪಕ್ಷೀಯ ಸಭೆಗಳನ್ನೂ ನಡೆಸಲಿದ್ದಾರೆ.

ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅರ್ಜೆಂಟೀನಾದ ಅಧ್ಯಕ್ಷ ಅಲ್ಬರ್ಟೊ ಫೆರ್ನಾಂಡಿಸ್ ದೆಹಲಿಗೆ ಆಗಮಿಸಿದ್ದಾರೆ. ಗಮನಾರ್ಹವಾಗಿ, ಜಿ 20 ಶೃಂಗಸಭೆಯಲ್ಲಿ ದೆಹಲಿ ಪೊಲೀಸ್, ಕೆ 9 ಶ್ವಾನ ದಳ ಮತ್ತು ಮೌಂಟೆಡ್ ಪೊಲೀಸರ 50,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಭದ್ರತೆಯನ್ನು ಒದಗಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ