AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 Summit: ಉಭಯ ದೇಶಗಳ ನಡುವಿನ ಸಂಬಂಧವನ್ನು ಮೋದಿ ನಡೆ ಬಲಪಡಿಸುತ್ತದೆ: ಬಾಂಗ್ಲಾದೇಶ

ಭಾರತದ ಪಕ್ಕದ ರಾಷ್ಟ್ರವಾದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು G20 ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಪ್ರಧಾನಿ ಮೋದಿ ಅವರ ಜತೆಗೆ ಹಲವು ವಿಚಾರಗಳ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ. ಈ ಸಭೆಯಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದೀಗ ಭಾರತ ಮತ್ತು ಪ್ರಧಾನಿ ಮೋದಿ ಅವರ ನಡೆಗೆ ಬಾಂಗ್ಲಾ ಫಿದಾ ಆಗಿದೆ.

G20 Summit: ಉಭಯ ದೇಶಗಳ ನಡುವಿನ ಸಂಬಂಧವನ್ನು ಮೋದಿ ನಡೆ ಬಲಪಡಿಸುತ್ತದೆ: ಬಾಂಗ್ಲಾದೇಶ
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Sep 11, 2023 | 6:48 PM

Share

ದೆಹಲಿ, ಸೆ.11: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆದ 18ನೇ ಜಿ-20 ಶೃಂಗಸಭೆಗೆ (G20 Summit) ಹಲವು ದೇಶಗಳ ನಾಯಕರುಗಳು ಭಾರತಕ್ಕೆ ಭೇಟಿ ನೀಡಿದ್ದರು. ಆರ್ಥಿಕ ಸಲಹೆ ಹಾಗೂ ಹಲವು ವಿಚಾರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಿದೆ. ಸಭೆಯಲ್ಲಿ ಭಾಗವಹಿಸಿದ ಜಿ-20 ಸದಸ್ಯ ರಾಷ್ಟ್ರದ ನಾಯಕರಗಳು ಭಾರತದ ಜತೆಗೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಭಾರತದ ಪಕ್ಕದ ರಾಷ್ಟ್ರವಾದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು. ಪ್ರಧಾನಿ ಮೋದಿ ಅವರ ಜತೆಗೆ ಹಲವು ವಿಚಾರಗಳ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ. ಈ ಸಭೆಯಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಈ ಸಭೆಗೆ ಬಾಂಗ್ಲಾಕ್ಕೆ ಆಹ್ವಾನ ನೀಡಿದ ಭಾರತದ ಬಗ್ಗೆ ಬಾಂಗ್ಲಾದೇಶದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಈ ಬಗ್ಗೆ ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಬ್ದುಲ್ ಮೊಮೆನ್ ಅವರು ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ನಮ್ಮ ದೇಶಕ್ಕೆ ಭಾರತ ನೀಡಿದ ಗೌರವ ಇದು. ತುಂಬಾ ಹೆಮ್ಮೆಯಾಗುತ್ತಿದೆ. ನಮ್ಮ ದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದಕ್ಕಾಗಿ ಧನ್ಯವಾದಗಳು ಎಂದು ಹೇಳಿದ್ದಾರೆ.

ಜಿ-20 ಶೃಂಗಸಭೆಯಲ್ಲಿ ಮಹತ್ವ ಘೋಷಣೆಗಳನ್ನು ಪ್ರಧಾನಿ ಮೋದಿ ಅವರು ಮಾಡಿದ್ದಾರೆ. ಅದನ್ನು ಕಾರ್ಯರೂಪಕ್ಕೆ ತರುವ ಕೆಲಸ ನಡೆಯಬೇಕಿದೆ. ಹಲವು ಒಪ್ಪಂದಗಳು ಕೂಡ ನಡೆದಿದೆ. ಇವುಗಳು ತಕ್ಷಣಕ್ಕೆ ಕಾರ್ಯರೂಪಕ್ಕೆ ಬರುವುದು ಅನುಮಾನ ಎಂದು ಹೇಳಿದ್ದಾರೆ.

ಇನ್ನು ಈ ಸಭೆಯಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್​​​ ಅವರು ಕೂಡ ಭಾಗವಹಿಸಿದರು. ಈ ಸಮಯದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಮತ್ತು ಅಮೆರಿಕದ ಅಧ್ಯಕ್ಷ ಜೋ ಅವರು ಜತೆಯಾಗಿ ಸೇಲ್ಫಿ ತೆಗೆದುಕೊಂಡಿರುವುದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಾಂಗ್ಲಾದೇಶ ಮತ್ತು ಅಮೆರಿಕದ ಉತ್ತಮ ಸಂಬಂಧಕ್ಕೆ ಭಾರತ ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:  ಭಾರತ್ ಮಂಟಪದ ಅಂತಾರಾಷ್ಟ್ರೀಯ ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿ ಪತ್ರಕರ್ತರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ಇನ್ನು ಬಾಂಗ್ಲಾದೇಶ ಪತ್ರಕರ್ತರೊಬ್ಬರು ಹೇಳಿರುವ ಪ್ರಕಾರ ಪ್ರಧಾನಿ ಶೇಖ್ ಹಸೀನಾ ಹಲವು ಬಾರಿ ಅಮೆರಿಕಕ್ಕೆ ಭೇಟಿ ನೀಡಿದ್ದರು, ಆದರೂ ಜೋ ಬೈಡನ್​​​ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ, ಆದರೆ ಭಾರತದ ಈ ಸಭೆಯಲ್ಲಿ ಭೇಟಿ ಮಾಡಿರುವುದು, ಇದು ಮತ್ತಷ್ಟು ಮಹತ್ವ ಪಡೆದಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:28 pm, Mon, 11 September 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್