ದೆಹಲಿ, ಸೆ.11: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆದ 18ನೇ ಜಿ-20 ಶೃಂಗಸಭೆಗೆ (G20 Summit) ಹಲವು ದೇಶಗಳ ನಾಯಕರುಗಳು ಭಾರತಕ್ಕೆ ಭೇಟಿ ನೀಡಿದ್ದರು. ಆರ್ಥಿಕ ಸಲಹೆ ಹಾಗೂ ಹಲವು ವಿಚಾರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಿದೆ. ಸಭೆಯಲ್ಲಿ ಭಾಗವಹಿಸಿದ ಜಿ-20 ಸದಸ್ಯ ರಾಷ್ಟ್ರದ ನಾಯಕರಗಳು ಭಾರತದ ಜತೆಗೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಭಾರತದ ಪಕ್ಕದ ರಾಷ್ಟ್ರವಾದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು. ಪ್ರಧಾನಿ ಮೋದಿ ಅವರ ಜತೆಗೆ ಹಲವು ವಿಚಾರಗಳ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ. ಈ ಸಭೆಯಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಈ ಸಭೆಗೆ ಬಾಂಗ್ಲಾಕ್ಕೆ ಆಹ್ವಾನ ನೀಡಿದ ಭಾರತದ ಬಗ್ಗೆ ಬಾಂಗ್ಲಾದೇಶದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಈ ಬಗ್ಗೆ ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಬ್ದುಲ್ ಮೊಮೆನ್ ಅವರು ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ನಮ್ಮ ದೇಶಕ್ಕೆ ಭಾರತ ನೀಡಿದ ಗೌರವ ಇದು. ತುಂಬಾ ಹೆಮ್ಮೆಯಾಗುತ್ತಿದೆ. ನಮ್ಮ ದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದಕ್ಕಾಗಿ ಧನ್ಯವಾದಗಳು ಎಂದು ಹೇಳಿದ್ದಾರೆ.
ಜಿ-20 ಶೃಂಗಸಭೆಯಲ್ಲಿ ಮಹತ್ವ ಘೋಷಣೆಗಳನ್ನು ಪ್ರಧಾನಿ ಮೋದಿ ಅವರು ಮಾಡಿದ್ದಾರೆ. ಅದನ್ನು ಕಾರ್ಯರೂಪಕ್ಕೆ ತರುವ ಕೆಲಸ ನಡೆಯಬೇಕಿದೆ. ಹಲವು ಒಪ್ಪಂದಗಳು ಕೂಡ ನಡೆದಿದೆ. ಇವುಗಳು ತಕ್ಷಣಕ್ಕೆ ಕಾರ್ಯರೂಪಕ್ಕೆ ಬರುವುದು ಅನುಮಾನ ಎಂದು ಹೇಳಿದ್ದಾರೆ.
Awami League’s relationship with India is historical, cultural and political. Narendra Modi has proved that friendship with Awami League is not of Congress but of India and Government of India….. pic.twitter.com/Prlxk8RfFj
— Rafiqul Islam A T (@rafiqulislamat) September 9, 2023
ಇನ್ನು ಈ ಸಭೆಯಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಕೂಡ ಭಾಗವಹಿಸಿದರು. ಈ ಸಮಯದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಮತ್ತು ಅಮೆರಿಕದ ಅಧ್ಯಕ್ಷ ಜೋ ಅವರು ಜತೆಯಾಗಿ ಸೇಲ್ಫಿ ತೆಗೆದುಕೊಂಡಿರುವುದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಾಂಗ್ಲಾದೇಶ ಮತ್ತು ಅಮೆರಿಕದ ಉತ್ತಮ ಸಂಬಂಧಕ್ಕೆ ಭಾರತ ಕಾರಣ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಭಾರತ್ ಮಂಟಪದ ಅಂತಾರಾಷ್ಟ್ರೀಯ ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿ ಪತ್ರಕರ್ತರಿಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ
ಇನ್ನು ಬಾಂಗ್ಲಾದೇಶ ಪತ್ರಕರ್ತರೊಬ್ಬರು ಹೇಳಿರುವ ಪ್ರಕಾರ ಪ್ರಧಾನಿ ಶೇಖ್ ಹಸೀನಾ ಹಲವು ಬಾರಿ ಅಮೆರಿಕಕ್ಕೆ ಭೇಟಿ ನೀಡಿದ್ದರು, ಆದರೂ ಜೋ ಬೈಡನ್ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ, ಆದರೆ ಭಾರತದ ಈ ಸಭೆಯಲ್ಲಿ ಭೇಟಿ ಮಾಡಿರುವುದು, ಇದು ಮತ್ತಷ್ಟು ಮಹತ್ವ ಪಡೆದಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:28 pm, Mon, 11 September 23