AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆ ಹಿನ್ನೆಲೆ ದೆಹಲಿಯಲ್ಲಿ ಸೆ.8ರಿಂದ 10ರವರೆಗೆ ಸ್ವಿಗ್ಗಿ, ಅಮೆಜಾನ್​ ಸೇರಿದಂತೆ ಆನ್​ಲೈನ್ ಡೆಲಿವರಿಗೆ ನಿಷೇಧ

ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8 ರಿಂದ 10ರವರೆಗೆ ಆನ್​ಲೈನ್ ಆಹಾರ ವಿತರಣೆಯನ್ನು ನಿಷೇಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಅವಧಿಯಲ್ಲಿ, ದೆಹಲಿ ಜನ ಆನ್‌ಲೈನ್‌ನಲ್ಲಿ ಆಹಾರವನ್ನು ಆರ್ಡರ್ ಮಾಡಲು ಸಾಧ್ಯವಾಗುವುದಿಲ್ಲ.

ಜಿ20 ಶೃಂಗಸಭೆ ಹಿನ್ನೆಲೆ ದೆಹಲಿಯಲ್ಲಿ ಸೆ.8ರಿಂದ 10ರವರೆಗೆ ಸ್ವಿಗ್ಗಿ, ಅಮೆಜಾನ್​ ಸೇರಿದಂತೆ ಆನ್​ಲೈನ್ ಡೆಲಿವರಿಗೆ ನಿಷೇಧ
ಸ್ವಿಗ್ಗಿImage Credit source: NDTV
ನಯನಾ ರಾಜೀವ್
| Edited By: |

Updated on:Sep 05, 2023 | 10:48 AM

Share

ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8 ರಿಂದ 10ರವರೆಗೆ ಆನ್​ಲೈನ್ ಆಹಾರ ವಿತರಣೆಯನ್ನು ನಿಷೇಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಅವಧಿಯಲ್ಲಿ, ದೆಹಲಿ ಜನ ಆನ್‌ಲೈನ್‌ನಲ್ಲಿ ಆಹಾರವನ್ನು ಆರ್ಡರ್ ಮಾಡಲು ಸಾಧ್ಯವಾಗುವುದಿಲ್ಲ. ಸ್ವಿಗ್ಗಿ, ಅಮೆಜಾನ್​ ಸೇರಿದಂತೆ ಇತರೆ ಆನ್​ಲೈನ್ ವಿತರಣೆಯನ್ನು ತಡೆಹಿಡಿಯಲಾಗಿದೆ. ಇದರಿಂದಾಗಿ ಆನ್‌ಲೈನ್ ಆಹಾರ ಸೇವೆಗಳು ಲಭ್ಯವಿರುವುದಿಲ್ಲ. ಯಾವುದೇ ಆನ್‌ಲೈನ್ ವಿತರಣೆಯನ್ನು ಅನುಮತಿಸಲಾಗುವುದಿಲ್ಲ ಎಂದು ವಿಶೇಷ ಪೊಲೀಸ್ ಆಯುಕ್ತ ಎಸ್‌ಎಸ್ ಯಾದವ್ ಹೇಳಿದ್ದಾರೆ.

ಅದು ಆಹಾರವಾಗಲಿ ಅಥವಾ ಇತರ ಸರಕುಗಳ ವಿತರಣೆಯಾಗಲಿ, ಅದರ ಮೇಲೆ ನಿಷೇಧವಿರುತ್ತದೆ. ಸೆಪ್ಟೆಂಬರ್ 7 ರ ಮಧ್ಯರಾತ್ರಿಯಿಂದ ಸೆಪ್ಟೆಂಬರ್ 10 ರ ಮಧ್ಯರಾತ್ರಿಯವರೆಗೆ ದೆಹಲಿಯಲ್ಲಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಗುರುಗ್ರಾಮ್ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಸಂಚಾರ ನಿರ್ಬಂಧಗಳು ಮುಖ್ಯವಾಗಿ ಧೌಲಾ ಕುವಾನ್ ಮಾರ್ಗದ ಮೇಲೆ ಪರಿಣಾಮ ಬೀರುತ್ತವೆ. ಸೆಪ್ಟೆಂಬರ್ 8 ರಂದು ಮನೆಯಿಂದ ಕೆಲಸ ನೀತಿಯನ್ನು ಜಾರಿಗೆ ತರಲು ಗುರುಗ್ರಾಮದ ಕಂಪನಿಗಳಿಗೆ ಪೊಲೀಸರು ಸಲಹೆ ನೀಡಿದ್ದಾರೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ: ದೆಹಲಿಯ ಈ ಪ್ರಸಿದ್ಧ ಹೋಟೆಲ್​ಗಳಲ್ಲಿ ಉಳಿಯಲಿದ್ದಾರೆ ಜೋ ಬೈಡನ್ ಸೇರಿದಂತೆ ಇತರೆ ವಿಶ್ವ ನಾಯಕರು

ದೆಹಲಿ ಸರ್ಕಾರವು ರಾಷ್ಟ್ರ ರಾಜಧಾನಿಯಲ್ಲಿ ಸೆಪ್ಟೆಂಬರ್ 8 ರಿಂದ 10 ರವರೆಗೆ ಸಾರ್ವಜನಿಕ ರಜೆ ಘೋಷಿಸಿದೆ. ಸೆಪ್ಟೆಂಬರ್ 8, 9 ಮತ್ತು 10 ರಂದು ತಮ್ಮ ನೌಕರರು ಮತ್ತು ಕಾರ್ಮಿಕರಿಗೆ ವೇತನದೊಂದಿಗೆ ರಜೆ ನೀಡುವಂತೆ ಸರ್ಕಾರವು ನಗರದ ಅಂಗಡಿಗಳು, ವ್ಯಾಪಾರಗಳು ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಸೂಚಿಸಿದೆ.

ಶೃಂಗಸಭೆಯ ಸಮಯದಲ್ಲಿ ದೆಹಲಿಯು ಹೈ ಅಲರ್ಟ್ ಆಗಿರುತ್ತದೆ. ದೆಹಲಿಯು ವಿಶ್ವ ನಾಯಕರಿಗೆ ಆತಿಥ್ಯ ನೀಡುತ್ತಿದೆ, ಆದ್ದರಿಂದ ನಗರದಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಈ ಸಮಯದಲ್ಲಿ, ಔಷಧಗಳನ್ನು ಹೊರತುಪಡಿಸಿ ಎಲ್ಲಾ ಆನ್‌ಲೈನ್ ಆಹಾರ ವಿತರಣಾ ಸೇವೆಗಳನ್ನು ನವದೆಹಲಿ ಜಿಲ್ಲೆಯಲ್ಲಿ ನಿಷೇಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:59 am, Tue, 5 September 23

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ