ಡಿಜಿಟಲೀಕರಣವು ಭಾರತದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ವಾರಾಣಸಿಯಲ್ಲಿ ನಡೆಯುತ್ತಿರುವ ಮೂರು ದಿನಗಳ ಜಿ-20 ಸಭೆಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರತಿನಿಧಿಗಳನ್ನು ಸ್ವಾಗತಿಸಿದರು.ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾತನಾಡುತ್ತಾ-ಕಾಶಿಯು ಶತಮಾನಗಳಿಂದ ಜ್ಞಾನ, ಚರ್ಚೆ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಿದೆ. ಕಾಶಿಯು ಭಾರತದ ವೈವಿಧ್ಯಮಯ ಪರಂಪರೆಯ ಸಾರವನ್ನು ಹೊಂದಿದೆ ಎಂದರು.
ಜಿ 20 ಅಭಿವೃದ್ಧಿ ಕಾರ್ಯಸೂಚಿಯು ಕಾಶಿಯನ್ನೂ ತಲುಪಿದೆ ಎಂದು ನನಗೆ ಸಂತೋಷವಾಗಿದೆ. ಆರ್ಥಿಕ ಹಿಂಜರಿತ, ಸಾಲದ ಬಿಕ್ಕಟ್ಟು, ಹವಾಮಾನ ಬದಲಾವಣೆಯ ಪರಿಣಾಮಗಳು, ಮಾಲಿನ್ಯ ಮತ್ತು ಜೀವವೈವಿಧ್ಯದ ನಷ್ಟ, ಹೆಚ್ಚುತ್ತಿರುವ ಬಡತನ ಮತ್ತು ಅಸಮಾನತೆ, ಆಹಾರ ಮತ್ತು ಇಂಧನ ಅಭದ್ರತೆ, ಜಾಗತಿಕ ಪೂರೈಕೆ-ಸರಪಳಿ ಅಡೆತಡೆಗಳು ಸೇರಿದಂತೆ ಜೀವನೋಪಾಯದ ಬಿಕ್ಕಟ್ಟುಗಳು ಮತ್ತು ಭೌಗೋಳಿಕ ರಾಜಕೀಯ ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳನ್ನು ಸಭೆ ಒಳಗೊಂಡಿದೆ.
ಅಗತ್ಯವಿರುವವರಿಗೆ ಹಣ ಲಭ್ಯವಾಗುವಂತೆ ಮಾಡಲು, ಅರ್ಹತಾ ಮಾನದಂಡ ಗಳನ್ನು ವಿಸ್ತರಿಸಲು ಬಹುಪಕ್ಷೀಯ ಹಣಕಾಸು ಸಂಸ್ಥೆಗಳನ್ನು ಸುಧಾರಿಸಬೇಕು ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಭಾರತದ ಮಹಿಳಾ ಶಕ್ತಿಯ ಬಗ್ಗೆ ಪ್ರಸ್ತಾಪಿಸಿದರು ಮತ್ತು ಭಾರತದಲ್ಲಿ, ನಾವು ಮಹಿಳಾ ಸಬಲೀಕರಣಕ್ಕೆ ಸೀಮಿತವಾಗಿಲ್ಲ, ಮಹಿಳೆಯರು ಅಭಿವೃದ್ಧಿಯನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ