G7 Summit: ನಾಳೆ ಹಿರೋಷಿಮಾಕ್ಕೆ ಮೋದಿ, ನೆಹರು ನಂತರ ಭೇಟೆ ನೀಡುತ್ತಿರುವ ಮೊದಲ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಮೇ 19 ರಿಂದ 21 ರವರೆಗೆ ಜಪಾನ್‌ನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಿ-7 ಶೃಂಗಸಭೆಗಾಗಿ ಹಿರೋಷಿಮಾಕ್ಕೆ ಭೇಟಿ ನೀಡಲು ಸಿದ್ಧರಾಗಿದ್ದಾರೆ.

G7 Summit: ನಾಳೆ ಹಿರೋಷಿಮಾಕ್ಕೆ ಮೋದಿ, ನೆಹರು ನಂತರ ಭೇಟೆ ನೀಡುತ್ತಿರುವ ಮೊದಲ ಪ್ರಧಾನಿ
ನರೇಂದ್ರ ಮೋದಿ
Follow us
|

Updated on:May 18, 2023 | 10:08 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 19 ರಿಂದ 21 ರವರೆಗೆ ಜಪಾನ್‌ನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಿ-7 ಶೃಂಗಸಭೆಗಾಗಿ (G-7 Summit) ಹಿರೋಷಿಮಾಕ್ಕೆ ಭೇಟಿ ನೀಡಲು ಸಿದ್ಧರಾಗಿದ್ದಾರೆ. 1974 ರಲ್ಲಿ ನಡೆಸಿದ ಪೋಖ್ರಾನ್ ಪರಮಾಣು ಪರೀಕ್ಷೆಯ ನಂತರ ಭಾರತದ ಪ್ರಧಾನಿಯೊಬ್ಬರು ಹಿರೋಷಿಮಾಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. 1945 ರಲ್ಲಿ ಪರಮಾಣು ಬಾಂಬ್‌ನಿಂದ ನಾಶವಾದ ಹಿರೋಷಿಮಾ ನಗರಕ್ಕೆ ಭೇಟಿ ನೀಡಿದ ಕೊನೆಯ ಭಾರತೀಯ ಪ್ರಧಾನಿ ಜವಾಹರಲಾಲ್ ನೆಹರು. ಇದೀಗ ಅವರ ನಂತರ ಅಲ್ಲಿಗೆ ಭೇಟಿ ನೀಡುತ್ತಿರುವ ಪ್ರಧಾನಿಯಾಗಿದ್ದಾರೆ ಮೋದಿ.

ಶಾಂತಿ, ಸ್ಥಿರತೆ ಮತ್ತು ಸುಸ್ಥಿರ ಸಮೃದ್ಧಿ, ಆಹಾರ, ರಸಗೊಬ್ಬರ ಮತ್ತು ಇಂಧನ ಭದ್ರತೆ, ಆರೋಗ್ಯ, ಲಿಂಗ ಸಮಾನತೆ, ಹವಾಮಾನ ಬದಲಾವಣೆ, ಪರಿಸರ, ಮೂಲಸೌಕರ್ಯ ಮತ್ತು ಅಭಿವೃದ್ಧಿ ಸಹಕಾರದಂತಹ ವಿಷಯಗಳ ಕುರಿತು ಪಾಲುದಾರ ರಾಷ್ಟ್ರಗಳೊಂದಿಗೆ ಜಿ-7 ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರಧಾನಿ ಮೋದಿ ಅವರು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಪ್ರಧಾನಿ ಅವರು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ. ಅವರು ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸಲು ನಿರ್ಧರಿಸಿದ್ದಾರೆ. ನಾವು ಹಿರೋಷಿಮಾದಲ್ಲಿ ಕ್ವಾಡ್ ನಾಯಕರ ಸಭೆಯನ್ನು ಯೋಜಿಸುತ್ತಿದ್ದೇವೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಪ್ರಧಾನಿ ಮೋದಿ ಅವರ ಜಪಾನ್ ಭೇಟಿಯ ಕುರಿತು ವಿವರಿಸಿದ್ದಾರೆ.

ಪ್ರಧಾನಿ ಮೋದಿ ಅವರು ಜಿ-7 ಶೃಂಗಸಭೆಯ ಸಂದರ್ಭ ಹಲವಾರು ನಾಯಕರ ಜೊತೆಗೆ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರು.

ಇದನ್ನೂ ಓದಿ: ಮುಳುಗಿದ ಚೀನೀ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ರಕ್ಷಿಸಲು ಭಾರತೀಯ ನೌಕಾಪಡೆ ವಿಮಾನ ನಿಯೋಜನೆ; ಎರಡು ಶವ ಪತ್ತೆ

G-7 ಶೃಂಗಸಭೆಯ ನಂತರ ಮೇ 22 ರಂದು ಪಪುವಾ ನ್ಯೂಗಿನಿಯಾದ ಪೋರ್ಟ್ ಮೊರೆಸ್ಬಿಗೆ ಪ್ರಯಾಣಿಸುವ ಪ್ರಧಾನಿ ಮೋದಿ, ಅಲ್ಲಿನ ಪ್ರಧಾನಿ ಜೇಮ್ಸ್ ಮರಾಪೆ ಜತೆ ಮಾತುಕತೆ ನಡೆಸಲಿದ್ದಾರೆ. ಜಂಟಿಯಾಗಿ ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರಕ್ಕೆ ಸಂಬಂಧಿಸಿದ (ಎಫ್‌ಪಿಐಸಿ III ಶೃಂಗಸಭೆ) ಮೂರನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರಕ್ಕೆ ಸಂಬಂಧಿಸಿ 2014 ರಲ್ಲಿ ಮೊದಲು ಪ್ರಾರಂಭಿಸಲಾದ ಎಫ್‌ಪಿಐಸಿಯಲ್ಲಿ ಭಾರತ, ಕುಕ್ ದ್ವೀಪಗಳು, ಫೆಡರೇಟೆಡ್ ಸ್ಟೇಟ್ಸ್ ಆಫ್ ಮೈಕ್ರೋನೇಷಿಯಾ, ಫಿಜಿ, ಕಿರಿಬಾಟಿ, ನೌರು, ನಿಯು, ಪಲಾವ್, ಪಾಪುವ ನ್ಯೂ ಗಿನಿಯಾ, ರಿಪಬ್ಲಿಕ್ ಆಫ್ ಮಾರ್ಷಲ್ ಐಲ್ಯಾಂಡ್ಸ್, ಸಮೋವಾ, ಸೊಲೊಮನ್ ದ್ವೀಪಗಳು, ಟೊಂಗಾ, ಟುವಾಲು ಮತ್ತು ವನವಾಟು ಸದಸ್ಯ ರಾಷ್ಟ್ರಗಳಾಗಿವೆ.

ಇದು ಪಪುವಾ ನ್ಯೂಗಿನಿಯಾಗೆ ಭಾರತದ ಪ್ರಧಾನಿಯ ಮೊದಲ ಭೇಟಿಯೂ ಆಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Thu, 18 May 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ