G7 Summit: ಹಿರೋಷಿಮಾದಲ್ಲಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯನ್ನು ಭೇಟಿಯಾದ ಪ್ರಧಾನಿ ಮೋದಿ

|

Updated on: May 20, 2023 | 5:13 PM

ಹಿರೋಷಿಮಾದಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದರು ಎಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.

G7 Summit: ಹಿರೋಷಿಮಾದಲ್ಲಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯನ್ನು ಭೇಟಿಯಾದ ಪ್ರಧಾನಿ ಮೋದಿ
ವೊಲೊಡಿಮಿರ್ ಝೆಲೆನ್ಸ್ಕಿ ಜತೆ ಮೋದಿ
Follow us on

ಜಪಾನ್‌ನ ಹಿರೋಷಿಮಾದಲ್ಲಿ (Hiroshima)ನಡೆಯುತ್ತಿರುವ ಜಿ7 ಶೃಂಗಸಭೆಯ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಅವರನ್ನು ಭೇಟಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. 2022ರಲ್ಲಿ ಉಕ್ರೇನ್‌ನಲ್ಲಿ ಸಂಘರ್ಷ ಆರಂಭವಾದ ನಂತರ ಉಭಯ ನಾಯಕರು ಭೇಟಿಯಾಗುತ್ತಿರುವುದು ಇದೇ ಮೊದಲು. ಹಿರೋಷಿಮಾದಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದರು ಎಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.

ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜಪಾನ್‌ನ ಹಿರೋಷಿಮಾಗೆ ಆಗಮಿಸಿದರು. ಈ ವಾರ ಅವರು ಭಾಗವಹಿಸುತ್ತಿರುವ ಎರಡನೇ ಬಹುಪಕ್ಷೀಯ ಶೃಂಗಸಭೆ ಇದಾಗಿದೆ. ಉಕ್ರೇನ್ ಅಧ್ಯಕ್ಷರು ಶುಕ್ರವಾರ ಅರಬ್ ಲೀಗ್ ಅನ್ನು ಉದ್ದೇಶಿಸಿ ಮಾತನಾಡಿದ್ದರು.

ಮೋದಿಯವರನ್ನು ಭೇಟಿಯಾದ ಝೆಲೆನ್ಸ್ಕಿ ತಮ್ಮ ಸಾಂಪ್ರದಾಯಿಕ ಆಲಿವ್ ಹಸಿರು ಬಣ್ಣದ ಉಡುಪು ಧರಿಸಿದ್ದರು.ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ ಜೊತೆಯಲ್ಲಿ ಇಬ್ಬರೂ ನಾಯಕರು ಸಭೆಯಲ್ಲಿ ಭಾಗಿಯಾಗಿರುವ ಫೋಟೊವನ್ನು ಭಾರತದ ಪ್ರಧಾನಮಂತ್ರಿಯವರ ಕಚೇರಿ ಹಂಚಿಕೊಂಡಿದೆ.

“ಮಾನವೀಯ ಮೌಲ್ಯಗಳ ಸಮಸ್ಯೆ” ಎಂದು ಬಣ್ಣಿಸಲಾದ ಉಕ್ರೇನ್ ಯುದ್ಧಕ್ಕೆ ಪರಿಹಾರವನ್ನು ಕಂಡುಹಿಡಿಯಲು ಭಾರತವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರಿಗೆ  ಭರವಸೆ ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:50 pm, Sat, 20 May 23