ಜಪಾನ್‌ನ ಹಿರೋಷಿಮಾದಲ್ಲಿ (Hiroshima) ನಡೆದ ಜಿ7 ಶೃಂಗಸಭೆಯ (G7 Summit) ‘ಬಹು ಬಿಕ್ಕಟ್ಟನ್ನು ಪರಿಹರಿಸಲು ಒಟ್ಟಾಗಿ ಕೆಲಸ ಮಾಡುವುದು’ ಎಂಬ ವಿಷಯದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ 10 ಅಂಶಗಳ ಕ್ರಿಯಾ ಯೋಜನೆಯನ್ನು ಹಂಚಿಕೊಂಡಿದ್ದಾರೆ. ನಮ್ಮ ಗ್ರಹದ ಸುಧಾರಣೆ ಮತ್ತು ಆರೋಗ್ಯ ರಕ್ಷಣೆ ಮತ್ತು ಆಹಾರ ಭದ್ರತೆಯಂತಹ ಕ್ಷೇತ್ರಗಳಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಕಡಿಮೆ ಮಾಡುವ ದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡುವ ಮಹತ್ವವನ್ನು ಪ್ರಧಾನಿ ಮೋದಿ ವಿವರಿಸಿದರು.
Speaking at the Quad Leaders’ Meeting in Hiroshima. https://t.co/ZKTSzXOPM5
— Narendra Modi (@narendramodi) May 20, 2023
ಪ್ರಧಾನಿ ಮೋದಿ ಶನಿವಾರ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಇಂಡೋನೇಷ್ಯಾ ಪ್ರೆಜ್ ಜೋಕೊ ವಿಡೋಡೊ, ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಮತ್ತು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ಹ್ ಅವರೊಂದಿಗೆ ಮಾತುಕತೆ ನಡೆಸಿದರು.
ಪ್ರಧಾನಿ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರನ್ನು ಭೇಟಿಯಾಗಿದ್ದು ಅವರೊಂದಿಗೆ ಉತ್ತಮವಾದ ಸಂವಾದ ನಡೆಸಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: 2024ರಲ್ಲಿ ಕ್ವಾಡ್ ಶೃಂಗಸಭೆಗೆ ಆತಿಥ್ಯ ವಹಿಸಲು ಭಾರತ ಸಂತೋಷ ಪಡುತ್ತದೆ: ಮೋದಿ
ಪ್ರಧಾನಿ ಮೋದಿ ಅವರು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರನ್ನೂ ಭೇಟಿಯಾಗಿದ್ದಾರೆ. ಇದಕ್ಕೂ ಮುನ್ನ ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು. ಹಿರೋಷಿಮಾದಲ್ಲಿನ ಈ ಪ್ರತಿಮೆಯು ಶಾಂತಿ ಮತ್ತು ಸೌಹಾರ್ದತೆಯ ಗಾಂಧೀಜಿಯ ಆದರ್ಶಗಳೆಂಬ ಅತ್ಯಂತ ಮಹತ್ವದ ಸಂದೇಶವನ್ನು ನೀಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
1974 ರಲ್ಲಿ ನಡೆದ ಪೋಖ್ರಾನ್ ಪರಮಾಣು ಪರೀಕ್ಷೆಯ ನಂತರ ಹಿರೋಷಿಮಾಗೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿ ಮೋದಿ ಆಗಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:02 pm, Sat, 20 May 23