PM Modi in Japan: ಜಪಾನ್‌ನಲ್ಲಿ ನೆಲೆಸಿರುವ ಭಾರತೀಯರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

G7 summit: ನಾನು G7 ದೇಶಗಳು ಮತ್ತು ಇತರ ಆಹ್ವಾನಿತ ಪಾಲುದಾರರೊಂದಿಗೆ ಜಗತ್ತು ಎದುರಿಸುತ್ತಿರುವ ಸವಾಲುಗಳು ಮತ್ತು ಅವುಗಳನ್ನು ಒಟ್ಟಾಗಿ ಪರಿಹರಿಸುವ ಅಗತ್ಯತೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಎದುರು ನೋಡುತ್ತಿದ್ದೇನೆ  ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

PM Modi in Japan: ಜಪಾನ್‌ನಲ್ಲಿ ನೆಲೆಸಿರುವ ಭಾರತೀಯರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಜಪಾನಿನಲ್ಲಿ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: May 19, 2023 | 8:04 PM

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ಹಿರೋಷಿಮಾದ(Hiroshima) ಶೆರಾಟನ್ ಹೋಟೆಲ್‌ಗೆ ಆಗಮಿಸಿದ್ದು ಜಪಾನ್​​ನಲ್ಲಿ (Japan) ನೆಲೆಸಿರುವ ಭಾರತೀಯರನ್ನು ಭೇಟಿಯಾಗಿದ್ದಾರೆ. ಮೇ 19 ಮತ್ತು 21 ರ ನಡುವೆ ನಡೆಯಲಿರುವ ವಾರ್ಷಿಕ G7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಇಂದು ಸಂಜೆ ಜಪಾನ್‌ಗೆ ಬಂದಿಳಿದಿದ್ದಾರೆ. 1974 ರಲ್ಲಿ ಪೋಖ್ರಾನ್‌ನಲ್ಲಿ ಭಾರತ ಪರಮಾಣು ಪರೀಕ್ಷೆಗಳನ್ನು ನಡೆಸಿದ ನಂತರ ಭಾರತದ ಪ್ರಧಾನಿಯೊಬ್ಬರು ಜಪಾನ್ ನಗರಕ್ಕೆ ಇದು ಮೊದಲ ಭೇಟಿಯಾಗಿದೆ. 1945 ರಲ್ಲಿ ಪರಮಾಣು ಬಾಂಬ್ ದಾಳಿಗೆ ಒಳಗಾದ ಹಿರೋಷಿಮಾಕ್ಕೆ  ಪ್ರಧಾನಿ ಜವಾಹರಲಾಲ್ ನೆಹರು ಅವರು 1957 ರಲ್ಲಿ ಭೇಟಿ ನೀಡಿದ್ದರು. ಮೇ 19 ಮತ್ತು 21 ರ ನಡುವೆ ನಡೆಯಲಿರುವ ವಾರ್ಷಿಕ ಜಿ 7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೋದಿ ಜಪಾನ್​​​ಗೆ ಬಂದಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರ ಹಿರೋಷಿಮಾದ ಶೆರಾಟನ್ ಹೋಟೆಲ್‌ಗೆ ಆಗಮಿಸಿದ ಭಾರತೀಯರನ್ರಾನು ಭೇಟಿ ಮಾಡಿದರು.

ಜಪಾನ್‌ಗೆ ಆಗಮಿಸುವ ಮುನ್ನ ನಿಕ್ಕಿ ಏಷ್ಯಾಗೆ ನೀಡಿದ ಸಂದರ್ಶನದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು,  ಹಿರೋಷಿಮಾದಲ್ಲಿ ನಡೆಯುವ ಜಿ7 ಶೃಂಗಸಭೆಯಲ್ಲಿ ‘ಜಾಗತಿಕ ದಕ್ಷಿಣ ರಾಷ್ಟ್ರಗಳ ಧ್ವನಿಗಳು ಮತ್ತು ಕಾಳಜಿಗಳ ಬಗ್ಗೆ ಮಾತನಾಡುವುದಾಗಿ ಹೇಳಿದ್ದರು.

ಈ ವರ್ಷ ಭಾರತವು G20 ಅಧ್ಯಕ್ಷ ಸ್ಥಾನವನ್ನು ಹೊಂದಿರುವುದರಿಂದ ಈ G7 ಶೃಂಗಸಭೆಯಲ್ಲಿ ನನ್ನ ಉಪಸ್ಥಿತಿಯು ವಿಶೇಷವಾಗಿ ಅರ್ಥಪೂರ್ಣವಾಗಿದೆ. ನಾನು G7 ದೇಶಗಳು ಮತ್ತು ಇತರ ಆಹ್ವಾನಿತ ಪಾಲುದಾರರೊಂದಿಗೆ ಜಗತ್ತು ಎದುರಿಸುತ್ತಿರುವ ಸವಾಲುಗಳು ಮತ್ತು ಅವುಗಳನ್ನು ಒಟ್ಟಾಗಿ ಪರಿಹರಿಸುವ ಅಗತ್ಯತೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಎದುರು ನೋಡುತ್ತಿದ್ದೇನೆ  ಎಂದು ಪ್ರಧಾನಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಚೀನಾದೊಂದಿಗಿನ ಸಹಜ ಬಾಂಧವ್ಯಕ್ಕೆ ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿ ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಇದನ್ನೂ ಓದಿಜಿ7 ಶೃಂಗಸಭೆಯಲ್ಲಿ ಜಾಗತಿಕ ದಕ್ಷಿಣ ರಾಷ್ಟ್ರಗಳ ಕಾಳಜಿ ಬಗ್ಗೆ ಮಾತನಾಡುವೆ: ನರೇಂದ್ರ ಮೋದಿ

ವಿವಾದಿತ ಹಿಮಾಲಯ ಗಡಿಯಲ್ಲಿ ಉಭಯ ರಾಷ್ಟ್ರಗಳ ಸೈನಿಕರು ಘರ್ಷಣೆ ನಡೆಸಿ 24 ಜನರನ್ನು ಕೊಂದಿದ್ದರಿಂದ 2020 ರಿಂದ ಭಾರತ ಮತ್ತು ಚೀನಾ ನಡುವಿನ ಸಂಬಂಧಗಳು ಹದಗೆಟ್ಟಿವೆ. ಭಾರತ-ಚೀನಾ ಸಂಬಂಧಗಳು ಪರಸ್ಪರ ಗೌರವ, ಪರಸ್ಪರ ಸೂಕ್ಷ್ಮತೆ ಮತ್ತು ಪರಸ್ಪರ ಹಿತಾಸಕ್ತಿಗಳ ಆಧಾರದ ಮೇಲೆ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಜಪಾನಿನ ಸುದ್ದಿ ಸಂಸ್ಥೆ ನಿಕ್ಕಿ ಏಷ್ಯಾಕ್ಕೆ ನೀಡಿದ ಸಂದರ್ಶನದಲ್ಲಿ ಮೋದಿ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್