Shivaji Statue: ಶಿವಾಜಿ ಪ್ರತಿಮೆಗೆ ಮೂತ್ರ ವಿಸರ್ಜನೆ, ಧಾರ್ಮಿಕ ಘೋಷಣೆ ಕೂಗುತ್ತಾ ವ್ಯಕ್ತಿಯ ಮೆರವಣಿಗೆ
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಸ್ವ ಕ್ಷೇತ್ರವಾದ ಗಜ್ವೇಲ್ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗಜ್ವೇಲ್‌ನ ಛತ್ರಪತಿ ಶಿವಾಜಿ ಪ್ರತಿಮೆ(Shivaji Statue)ಗೆ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಹಿನ್ನೆಲೆಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ಗಜ್ವೇಲ್ ಪಟ್ಟಣದಲ್ಲಿ ಬಂದ್‌ಗೆ ಕರೆ ನೀಡಲಾಗಿದೆ
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಸ್ವ ಕ್ಷೇತ್ರವಾದ ಗಜ್ವೇಲ್ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗಜ್ವೇಲ್‌ನ ಛತ್ರಪತಿ ಶಿವಾಜಿ ಪ್ರತಿಮೆ(Shivaji Statue)ಗೆ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಹಿನ್ನೆಲೆಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ಗಜ್ವೇಲ್ ಪಟ್ಟಣದಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ಆತನನ್ನು ಶಿವಾಜಿ ಮೂರ್ತಿ ಸಮಿತಿಯವರು ಬಂಧಿಸಿ ಭಗತ್ ಯೂತ್ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಳಿಕ ಸಿಐಗೆ ದೂರು ನೀಡಿದ್ದರು. ಆದರೆ, ಪೊಲೀಸ್ ಠಾಣೆಯಿಂದ ಶಿವಾಜಿ ಪ್ರತಿಮೆ ಬಳಿಗೆ ಹಿಂತಿರುಗುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ.
ಘಟನೆಯಲ್ಲಿ ಸಂದೀಪ್ ಎಂಬ ಯುವಕನ ತಲೆಗೆ ಗಂಭೀರ ಗಾಯಗಳಾಗಿವೆ. ಇದರೊಂದಿಗೆ ಹಿಂದೂಗಳೆಲ್ಲ ಮತ್ತೆ ಅಂಬೇಡ್ಕರ್ ಚೌಕಕ್ಕೆ ಆಗಮಿಸಿ ರಾಸ್ತಾರೋಕೋ ಜೊತೆಗೆ ಧರಣಿ ನಡೆಸಿದರು.
ಮತ್ತಷ್ಟು ಓದಿ: ಬೆಳಗಾವಿ: ಕಾಂಗ್ರೆಸ್-ಬಿಜೆಪಿಯಿಂದ ಶಿವಾಜಿ ಪ್ರತಿಮೆ ಉದ್ಘಾಟನೆ, ಪ್ರತಿಮೆಯ ಶುದ್ಧೀಕರಣಕ್ಕೆ ಮುಂದಾದ ಎಂಇಎಸ್
ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರು. ಆದರೆ, ಪರಿಸ್ಥಿತಿ ಹತೋಟಿಗೆ ಬರದ ಕಾರಣ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಹಿಂದೂಗಳು ಇಂದು ಗಜ್ವೇಲ್ ಪಟ್ಟಣ ಬಂದ್‌ಗೆ ಕರೆ ನೀಡಿದ್ದಾರೆ.
ಈ ಘಟನೆಗಳಿಂದ ಕೋಮು ಘರ್ಷಣೆ ನಡೆಯುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ. ತಪ್ಪು ಮಾಡಿದವರನ್ನು 24 ಗಂಟೆಯೊಳಗೆ ಬಂಧಿಸುವುದಾಗಿ ಸಿದ್ದಿಪೇಟೆ ಪೊಲೀಸ್ ಆಯುಕ್ತೆ ಎನ್.ಶ್ವೇತಾ ಭರವಸೆ ನೀಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ