Shivaji Statue: ಶಿವಾಜಿ ಪ್ರತಿಮೆಗೆ ಮೂತ್ರ ವಿಸರ್ಜನೆ, ಧಾರ್ಮಿಕ ಘೋಷಣೆ ಕೂಗುತ್ತಾ ವ್ಯಕ್ತಿಯ ಮೆರವಣಿಗೆ

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಸ್ವ ಕ್ಷೇತ್ರವಾದ ಗಜ್ವೇಲ್​ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗಜ್ವೇಲ್‌ನ ಛತ್ರಪತಿ ಶಿವಾಜಿ ಪ್ರತಿಮೆ(Shivaji Statue)ಗೆ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಹಿನ್ನೆಲೆಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ಗಜ್ವೇಲ್ ಪಟ್ಟಣದಲ್ಲಿ ಬಂದ್‌ಗೆ ಕರೆ ನೀಡಲಾಗಿದೆ

Shivaji Statue: ಶಿವಾಜಿ ಪ್ರತಿಮೆಗೆ ಮೂತ್ರ ವಿಸರ್ಜನೆ, ಧಾರ್ಮಿಕ ಘೋಷಣೆ ಕೂಗುತ್ತಾ ವ್ಯಕ್ತಿಯ ಮೆರವಣಿಗೆ
ಶಿವಾಜಿ ಪ್ರತಿಮೆಗೆ ಮೂತ್ರ ವಿಸರ್ಜಿಸಿದ ವ್ಯಕ್ತಿ
Image Credit source: NDTV

Updated on: Jul 04, 2023 | 2:17 PM

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಸ್ವ ಕ್ಷೇತ್ರವಾದ ಗಜ್ವೇಲ್​ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗಜ್ವೇಲ್‌ನ ಛತ್ರಪತಿ ಶಿವಾಜಿ ಪ್ರತಿಮೆ(Shivaji Statue)ಗೆ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಹಿನ್ನೆಲೆಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ಗಜ್ವೇಲ್ ಪಟ್ಟಣದಲ್ಲಿ ಬಂದ್‌ಗೆ ಕರೆ ನೀಡಲಾಗಿದೆ.  ಆತನನ್ನು ಶಿವಾಜಿ ಮೂರ್ತಿ ಸಮಿತಿಯವರು ಬಂಧಿಸಿ ಭಗತ್ ಯೂತ್ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಳಿಕ ಸಿಐಗೆ ದೂರು ನೀಡಿದ್ದರು. ಆದರೆ, ಪೊಲೀಸ್ ಠಾಣೆಯಿಂದ ಶಿವಾಜಿ ಪ್ರತಿಮೆ ಬಳಿಗೆ ಹಿಂತಿರುಗುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ.

ಘಟನೆಯಲ್ಲಿ ಸಂದೀಪ್ ಎಂಬ ಯುವಕನ ತಲೆಗೆ ಗಂಭೀರ ಗಾಯಗಳಾಗಿವೆ. ಇದರೊಂದಿಗೆ ಹಿಂದೂಗಳೆಲ್ಲ ಮತ್ತೆ ಅಂಬೇಡ್ಕರ್ ಚೌಕಕ್ಕೆ ಆಗಮಿಸಿ ರಾಸ್ತಾರೋಕೋ ಜೊತೆಗೆ ಧರಣಿ ನಡೆಸಿದರು.

ಮತ್ತಷ್ಟು ಓದಿ: ಬೆಳಗಾವಿ: ಕಾಂಗ್ರೆಸ್​-ಬಿಜೆಪಿಯಿಂದ ಶಿವಾಜಿ ಪ್ರತಿಮೆ ಉದ್ಘಾಟನೆ, ಪ್ರತಿಮೆಯ ಶುದ್ಧೀಕರಣಕ್ಕೆ ಮುಂದಾದ ಎಂಇಎಸ್

ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರು. ಆದರೆ, ಪರಿಸ್ಥಿತಿ ಹತೋಟಿಗೆ ಬರದ ಕಾರಣ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಹಿಂದೂಗಳು ಇಂದು ಗಜ್ವೇಲ್ ಪಟ್ಟಣ ಬಂದ್‌ಗೆ ಕರೆ ನೀಡಿದ್ದಾರೆ.

ಈ ಘಟನೆಗಳಿಂದ ಕೋಮು ಘರ್ಷಣೆ ನಡೆಯುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ. ತಪ್ಪು ಮಾಡಿದವರನ್ನು 24 ಗಂಟೆಯೊಳಗೆ ಬಂಧಿಸುವುದಾಗಿ ಸಿದ್ದಿಪೇಟೆ ಪೊಲೀಸ್ ಆಯುಕ್ತೆ ಎನ್.ಶ್ವೇತಾ ಭರವಸೆ ನೀಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us