AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Procession Violence: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, 13 ಮಂದಿ ಬಂಧನ

ವಡೋದರಾದ ಸೂಕ್ಷ್ಮ ಪ್ರದೇಶದಲ್ಲಿ ಗಣೇಶನ ಮೂರ್ತಿ ಹಾದು ಹೋಗುತ್ತಿದ್ದಾಗ ಎರಡು ಸಮುದಾಯಗಳ ಸದಸ್ಯರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, 13 ಮಂದಿಯನ್ನು ಬಂಧಿಸಲಾಗಿದೆ.

Ganesh Procession Violence: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, 13 ಮಂದಿ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 30, 2022 | 4:04 PM

Share

ಗುಜರಾತ್‌: ಗುಜರಾತ್‌ನ ವಡೋದರಾದಲ್ಲಿ ಸೋಮವಾರ ರಾತ್ರಿ ಗಣೇಶನ ಮೂರ್ತಿಯನ್ನು ಹೊತ್ತ ಮೆರವಣಿಗೆಯು ಸೂಕ್ಷ್ಮ ಪ್ರದೇಶದಲ್ಲಿ ಸಾಗುತ್ತಿದ್ದಾಗ ಎರಡು ಸಮುದಾಯಗಳ ಸದಸ್ಯರು ಪರಸ್ಪರ ಘರ್ಷಣೆ ಮತ್ತು ಕಲ್ಲುಗಳನ್ನು ಎಸೆದಿದ್ದಾರೆ ಇದೀಗ ಅಲ್ಲಿ ಉದ್ವಿಗ್ನತೆ ಉಂಟಾಗಿದೆ. ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮೂರ್ತಿಯನ್ನು ಶಾಂತಿಯುತವಾಗಿ ಕೊಂಡೊಯ್ಯಲಾಯಿತು.

ಗಲಭೆ ಮತ್ತು ಕಾನೂನುಬಾಹಿರ ಸಭೆ ಆರೋಪದ ಮೇಲೆ ಎರಡೂ ಕಡೆಯ ಸದಸ್ಯರ ವಿರುದ್ಧ ವಡೋದರಾ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 13 ಜನರನ್ನು ಬಂಧಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಕಲ್ಲು ತೂರಾಟದಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಎಫ್‌ಐಆರ್ 143 (ಕಾನೂನುಬಾಹಿರ ಸಭೆ), 147 (ಗಲಭೆ), 336 (ಮಾನವ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ದುಡುಕಿನ ಕೃತ್ಯ), 295 (ಆರಾಧನಾ ಸ್ಥಳವನ್ನು ಅಪವಿತ್ರಗೊಳಿಸುವುದು) ಸೇರಿದಂತೆ ವಿವಿಧ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ.

ರಾತ್ರಿ 11.15ರ ಸುಮಾರಿಗೆ ಕೋಮು ಸೂಕ್ಷ್ಮ ಮಾಂಡವಿ ಪ್ರದೇಶದ ಪಾಣಿಗೇಟ್ ದರ್ವಾಜಾ ಮೂಲಕ ಗಣೇಶ ಮೆರವಣಿಗೆ ಸಾಗುತ್ತಿದ್ದಾಗ ಚಿಕ್ಕ ವಿಷಯಕ್ಕೆ ಎರಡು ಗುಂಪುಗಳ ನಡುವೇ ವಾಗ್ವಾದ ನಡೆದು ಎರಡು ಸಮುದಾಯಗಳ ಸದಸ್ಯರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ನಗರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡು ಸಮುದಾಯಗಳ ಜನರು ಪರಸ್ಪರ ಜಗಳವಾಡಲು ಪ್ರಾರಂಭಿಸಿದರು. ಎರಡೂ ಗುಂಪಿನ ಸದಸ್ಯರು ಪರಸ್ಪರ ಕಲ್ಲು ತೂರಾಟ ನಡೆಸುವುದರೊಂದಿಗೆ ವಿಷಯ ವಿಕೋಪಕ್ಕೆ ಹೋಗಿತ್ತು. ಈ ಘಟನೆಯಿಂದ ಮಸೀದಿಯೊಂದರ ಮುಖ್ಯ ದ್ವಾರದ ಗಾಜಿಗೆ ಹಾನಿಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಪೊಲೀಸ್ ಉಪಸ್ಥಿತಿಯನ್ನು ಹೆಚ್ಚಿಸಲಾಗಿದೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಗಸ್ತು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಶಾಂತಿಯುತವಾಗಿದೆ ಮತ್ತು ಘಟನೆಯ ಬಗ್ಗೆ ಅಪರಾಧ ವಿಭಾಗದ ತನಿಖೆ ನಡೆಸುತ್ತಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಚಿರಾಗ್ ಕೊರಾಡಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಯಾವುದೇ ರೀತಿಯ ವದಂತಿಗಳಿಗೆ ಗಮನ ಕೊಡಬೇಡಿ ಎಂದು ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ