AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಮತ್ತೆ ಬಾಂಬ್ ಸದ್ದು, ಮನೆಯ ಮೇಲೆ ದುಷ್ಕರ್ಮಿಗಳಿಂದ ನಾಡ ಬಾಂಬ್ ದಾಳಿ, ಇಬ್ಬರಿಗೆ ಗಂಭೀರ ಗಾಯ

ಕೇರಳದಲ್ಲಿ ಮತ್ತೆ ಬಾಂಬ್ ಸದ್ದು ಕೇಳಿಸಿದೆ, ತಿರುವನಂತಪುರಂ ಬಳಿಯ ಪೆರುಮಾತುರದಲ್ಲಿ ಸೋಮವಾರ ರಾತ್ರಿ ದುಷ್ಕರ್ಮಿಗಳು ಮನೆಗಳ ಮೇಲೆ ನಾಡ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ವಾಹನದ ಬಳಿ ಬಾಂಬ್ ಸ್ಫೋಟಗೊಂಡಿದ್ದರಿಂದ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ.

ಕೇರಳದಲ್ಲಿ ಮತ್ತೆ ಬಾಂಬ್ ಸದ್ದು, ಮನೆಯ ಮೇಲೆ ದುಷ್ಕರ್ಮಿಗಳಿಂದ ನಾಡ ಬಾಂಬ್ ದಾಳಿ, ಇಬ್ಬರಿಗೆ ಗಂಭೀರ ಗಾಯ
ಪೊಲೀಸ್Image Credit source: India Today
ನಯನಾ ರಾಜೀವ್
|

Updated on:Oct 31, 2023 | 12:53 PM

Share

ಕೇರಳದಲ್ಲಿ ಮತ್ತೆ ಬಾಂಬ್ ಸದ್ದು ಕೇಳಿಸಿದೆ, ತಿರುವನಂತಪುರಂ ಬಳಿಯ ಪೆರುಮಾತುರದಲ್ಲಿ ಸೋಮವಾರ ರಾತ್ರಿ ದುಷ್ಕರ್ಮಿಗಳು ಮನೆಗಳ ಮೇಲೆ ನಾಡ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ವಾಹನದ ಬಳಿ ಬಾಂಬ್ ಸ್ಫೋಟಗೊಂಡಿದ್ದರಿಂದ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ.

ಈ ಸಂಬಂಧ ಅಟ್ಟಿಂಗಲ್ ನಿವಾಸಿಗಳಾದ ಸಫೀರ್, ಆಕಾಶ್ ಮತ್ತು ಅಬ್ದುಲ್ ರಹಿಮಾನ್ ಅವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಇಬ್ಬರು ಸ್ಥಳೀಯರು ಕಾರಿನಲ್ಲಿ ಮದ್ಯ ಸೇವಿಸುತ್ತಿರುವುದನ್ನು ನೋಡಿ ಗ್ಯಾಂಗ್ ಒಂದು ಕೋಪಗೊಂಡಿತ್ತು ಮತ್ತು ದಾಂಧಲೆ ನಡೆಸಿತು.

ಸಮೀಪದ ಮನೆಗಳಲ್ಲಿ ಆಶ್ರಯ ಪಡೆದ ಯುವಕರನ್ನು ತಂಡವು ಬೆನ್ನಟ್ಟಿತ್ತು, ಆಗ ದುಷ್ಕರ್ಮಿಗಳು ನಾಡ ಬಾಂಬ್​ ಅನ್ನು ಅಲ್ಲಿದ್ದ ಮನೆಗಳ ಮೇಲೆ ಎಸೆದು ಭಯದ ವಾತಾವರಣ ಸೃಷ್ಟಿಸಿದರು.

ಪ್ರಕರಣ ದಾಖಲಿಸಿಕೊಂಡು ಆರೋಪಿಗಳೊಬ್ಬರ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೇರಳ: ಕಳಮಶ್ಶೇರಿ ಸ್ಫೋಟ; ಆರೋಪಿ ಡೊಮಿನಿಕ್ ಮನೆಯಲ್ಲೇ ತಯಾರಿಸಿದ್ದ ಬಾಂಬ್

ಮತ್ತೊಂದು ಘಟನೆ ಕೇರಳದ ಎರ್ನಾಕುಲಂನಲ್ಲಿ ಕ್ರೈಸ್ತ ಸಮುದಾಯದವರು ಕಳಮಶ್ಶೇರಿ ಎಂಬಲ್ಲಿ ಪ್ರಾರ್ಥನಾ ಸಭೆ ನಡೆಸುತ್ತಿದ್ದ ಜಾಗದಲ್ಲಿ ಸರಣಿ ಬಾಂಬ್ ಸ್ಪೋಟ ಸಂಭವಿಸಿತ್ತು. ಮೂವರು ಮೃತಪಟ್ಟಿದ್ದರು.

ಕೊಚ್ಚಿಯಿಂದ ಈಶಾನ್ಯಕ್ಕೆ ಸುಮಾರು 10 ಕಿ.ಮೀ ದೂರದಲ್ಲಿರುವ ಕಳಮಶ್ಶೇರಿಯ ಯಹೋವನ ಪಂಥದ ಕಾರ್ಯಕ್ರಮದ ವೇಳೆ ಸ್ಫೋಟ ಸಂಭವಿಸಿದೆ.

ಘಟನೆ ನಡೆದ ಕೆಲವು ಗಂಟೆಗಳ ಬಳಿಕ, ಯಹೋವನ ಪಂಥದ ಸದಸ್ಯನೆಂದು ಹೇಳಿಕೊಂಡ 48 ವರ್ಷದ ಡಾಮಿನಿಕ್ ಮಾರ್ಟಿನ್ ಎಂಬಾತ್ ತಾನೇ ಸ್ಫೋಟಕ್ಕೆ ಕಾರಣ ಎಂದು ಪೊಲೀಸರಿಗೆ ಶರಣಾಗಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:53 pm, Tue, 31 October 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?