Sign In

By signing in or creating an account, you agree with Associated Broadcasting Company's Terms & Conditions and Privacy Policy.

Gang Rape: ಗೆಳೆಯರನ್ನು ಛೂ ಬಿಟ್ಟು 11 ವರ್ಷದ ಗೆಳತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿಸಿದ ಯುವತಿ

Mumbai News: ಮೂವರು ಗಂಡಸರು ಸರದಿಯಂತೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದಾರೆ. ಬಾಲಕಿಯ ಸ್ನೇಹಿತೆ ಅಲ್ಲೇ ನಿಂತು ಈ ಲೈಂಗಿಕ ದೌರ್ಜನ್ಯವನ್ನು ವೀಕ್ಷಿಸಿದ್ದಾಳೆ. ಬುಧವಾರ ಮುಂಜಾನೆ ಆ ಬಾಲಕಿಯನ್ನು ಆಕೆಯ ಮನೆಯ ಬಳಿ ಬಿಟ್ಟು ಹೋಗಿದ್ದಾರೆ.

Gang Rape: ಗೆಳೆಯರನ್ನು ಛೂ ಬಿಟ್ಟು 11 ವರ್ಷದ ಗೆಳತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿಸಿದ ಯುವತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 19, 2022 | 10:34 AM

ಮುಂಬೈ: 21 ವರ್ಷದ ಯುವತಿಯೊಬ್ಬಳು ತನ್ನ 11 ವರ್ಷದ ಗೆಳತಿಯ ಮೇಲೆ ಅತ್ಯಾಚಾರ (Rape) ನಡೆಸಲು ಮೂವರು ಪುರುಷರನ್ನು ಕರೆದುಕೊಂಡು ಬಂದಿದ್ದು, ಆಕೆಯ ಸಂಚಿನಿಂದಾಗಿ ಆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆಸಲಾಗಿದೆ. ಬುಧವಾರ ಮುಂಜಾನೆ ಮುಂಬೈನ (Mumbai) ವಿರಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಮೂವರು ಆರೋಪಿಗಳು ಸೇರಿದಂತೆ 21 ವರ್ಷದ ಮಹಿಳೆಯನ್ನು 6 ಗಂಟೆಗಳಲ್ಲಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಸಂಜೆ 7 ಗಂಟೆಗೆ 11 ವರ್ಷದ ಬಾಲಕಿ ತನ್ನ ಮೊಬೈಲ್ ಫೋನ್ ರಿಪೇರಿ ಮಾಡಲು ತನ್ನ ಮನೆಯ ಸಮೀಪವಿರುವ ಅಂಗಡಿಗೆ ಹೋದಾಗ ಈ ಘಟನೆ ಸಂಭವಿಸಿದೆ. ಅಲ್ಲಿ ಆಕೆ ತನ್ನ 21 ವರ್ಷದ ಗೆಳತಿಯನ್ನು ಭೇಟಿಯಾದಳು. ಆಗ ಆಕೆ ಆ ಬಾಲಕಿಯನ್ನು ವಾಕಿಂಗ್​​ಗೆಂದು ಕರೆದುಕೊಂಡು ಹೋದಳು. ಆಗ ಅಲ್ಲಿಗೆ ಮೂವರು ಪುರುಷರನ್ನು ಬರಲು ಹೇಳಿದ ಆ ಯುವತಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲು ಸೂಚಿಸಿದ್ದಾಳೆ.

ಇದನ್ನೂ ಓದಿ: ಅತ್ಯಾಚಾರ ಅಪರಾಧಕ್ಕೆ ಮರಣದಂಡನೆ ಶಿಕ್ಷೆಯಿಂದಾಗಿಯೇ​​ ಸಂತ್ರಸ್ತರ ಹತ್ಯೆಗಳು ಹೆಚ್ಚಾಗಿದ್ದು: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್

ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅಲ್ಲಿಗೆ ತನ್ನ ಮೂವರು ಸ್ನೇಹಿತರನ್ನು ಕರೆಸಿಕೊಂಡಿದ್ದಾಳೆ. ಅವರು ಮಧ್ಯರಾತ್ರಿಯ ನಂತರ ಆ ಸ್ಥಳಕ್ಕೆ ತಲುಪಿದ್ದಾರೆ. ಮುಂಬರುವ ಗಣೇಶ ಹಬ್ಬಕ್ಕಾಗಿ ಸ್ಥಾಪಿಸಲಾದ ಪೆಂಡಾಲ್‌ನ ಹಿಂದಿನ ಸ್ಥಳಕ್ಕೆ ಹುಡುಗಿಯನ್ನು ಕರೆದೊಯ್ದು ಅಲ್ಲಿ ಒಬ್ಬರಾದ ನಂತರ ಒಬ್ಬರು ಅತ್ಯಾಚಾರ ನಡೆಸಿದ್ದಾರೆ.

ಈ ವಿಷಯವನ್ನು ಯಾರಿಗೂ ಹೇಳದಂತೆ ಅವರು ಆ ಬಾಲಕಿಗೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಅಲ್ಲಿದ್ದ ಪುರುಷರಲ್ಲಿ ಒಬ್ಬರೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದಾರೆ. ಅದಕ್ಕೆ ಆಕೆ ಒಪ್ಪದಿದ್ದಾಗ ಮೂವರು ಗಂಡಸರು ಸರದಿಯಂತೆ ಆಕೆಯ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದಾರೆ. ಬಾಲಕಿಯ ಸ್ನೇಹಿತೆ ಅಲ್ಲೇ ನಿಂತು ಈ ಲೈಂಗಿಕ ದೌರ್ಜನ್ಯವನ್ನು ವೀಕ್ಷಿಸಿದ್ದಾಳೆ. ಬುಧವಾರ ಮುಂಜಾನೆ ಆ ಬಾಲಕಿಯನ್ನು ಆಕೆಯ ಮನೆಯ ಬಳಿ ಬಿಟ್ಟು ಹೋಗಿದ್ದಾರೆ.

ಇದನ್ನೂ ಓದಿ: Rape Case: 10 ರೂ. ಆಮಿಷವೊಡ್ಡಿ ಬಾಲಕಿ ಮೇಲೆ 76 ವರ್ಷದ ವೃದ್ಧನಿಂದ ನಿರಂತರ ಅತ್ಯಾಚಾರ

ಬಾಲಕಿ ಮನೆಗೆ ಬಂದು ನಡೆದ ಘಟನೆಯನ್ನು ವಿವರಿಸಿದಾಗ, ಆಕೆಯ ತಾಯಿ ವಿರಾರ್ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ಆರೋಪಿಯನ್ನು ಹಿಡಿಯಲು ತಂಡಗಳನ್ನು ರಚಿಸಿದ್ದಾರೆ. ಪೊಲೀಸರು ಆರೋಪಿ ಯುವತಿಯ ಜಾಡು ಹಿಡಿದಿದ್ದಾರೆ. ಅತ್ಯಾಚಾರ ನಡೆಸಿದ ಆರೋಪಿಗಳಲ್ಲಿ ಒಬ್ಬರು ಕಾಲೇಜು ವಿದ್ಯಾರ್ಥಿಯಾಗಿದ್ದರೆ, ಮತ್ತೊಬ್ಬ ತರಕಾರಿ ವ್ಯಾಪಾರಿ, ಇನ್ನೊಬ್ಬಾತ ಡ್ರಗ್ ಡೀಲರ್ ಆಗಿದ್ದ. ಮೂವರನ್ನೂ 6 ಗಂಟೆಗಳೊಳಗೆ ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್