AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganga Vilas: 5 ರಾಜ್ಯ, 50 ಪ್ರವಾಸಿ ತಾಣ, 51 ದಿನ; ವಿಶ್ವದ ಅತಿ ಉದ್ದನೆಯ ನದಿ ವಿಹಾರ ಗಂಗಾ ವಿಲಾಸ್ ಬಗ್ಗೆ ನಿಮಗೆಷ್ಟು ಗೊತ್ತು?

World's Longest River Cruise: 50 ಪ್ರವಾಸಿ ತಾಣಗಳನ್ನು ಒಳಗೊಂಡಿರುವ ವಿಶ್ವದ ಅತಿ ಉದ್ದದ ನದಿ ವಿಹಾರವಾದ ಗಂಗಾ ವಿಲಾಸ್ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಸಂಗತಿ ಇಲ್ಲಿದೆ.

Ganga Vilas: 5 ರಾಜ್ಯ, 50 ಪ್ರವಾಸಿ ತಾಣ, 51 ದಿನ; ವಿಶ್ವದ ಅತಿ ಉದ್ದನೆಯ ನದಿ ವಿಹಾರ ಗಂಗಾ ವಿಲಾಸ್ ಬಗ್ಗೆ ನಿಮಗೆಷ್ಟು ಗೊತ್ತು?
ವಿಶ್ವದ ಅತಿ ಉದ್ದ ಹಡಗುImage Credit source: ANI
TV9 Web
| Edited By: |

Updated on: Jan 10, 2023 | 11:00 AM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಜನವರಿ 13ರಂದು ವಾರಾಣಸಿಯಲ್ಲಿ (Varanasi) ವಿಶ್ವದ ಅತಿ ಉದ್ದದ ನದಿ ವಿಹಾರವಾದ ಗಂಗಾ ವಿಲಾಸ್ (Ganga Vilas) ಅನ್ನು ಉದ್ಘಾಟಿಸಲಿದ್ದಾರೆ. “ಕಾಶಿಯಿಂದ ಸಾರನಾಥದವರೆಗೆ, ಮಜುಲಿಯಿಂದ ಮಯೋಂಗ್‌ವರೆಗೆ, ಸುಂದರ್‌ಬನ್ಸ್‌ನಿಂದ ಕಾಜಿರಂಗದವರೆಗೆ ಈ ಕ್ರೂಸ್ ಸಂಚರಿಸಲಿದೆ ಎಂದು ಕೇಂದ್ರ ಬಂದರುಗಳು, ಹಡಗು ಮತ್ತು ಜಲಮಾರ್ಗಗಳು ಮತ್ತು ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ. ಈ ಗಂಗಾ ವಿಲಾಸ್ ವಿಹಾರಕ್ಕೆ ಸುಮಾರು 13 ಲಕ್ಷ ರೂ. ವೆಚ್ಚವಾಗುತ್ತದೆ.

50 ಪ್ರವಾಸಿ ತಾಣಗಳನ್ನು ಒಳಗೊಂಡಿರುವ ವಿಶ್ವದ ಅತಿ ಉದ್ದದ ನದಿ ವಿಹಾರವಾದ ಗಂಗಾ ವಿಲಾಸ್ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಸಂಗತಿ ಇಲ್ಲಿದೆ:

1. ಈ ಐಷಾರಾಮಿ ಕ್ರೂಸ್ ಭಾರತ ಮತ್ತು ಬಾಂಗ್ಲಾದೇಶದ 5 ರಾಜ್ಯಗಳಲ್ಲಿ 27 ನದಿಗಳಲ್ಲಿ 3,200 ಕಿ.ಮೀ.ಗೂ ಹೆಚ್ಚು ದೂರವನ್ನು ಕ್ರಮಿಸುತ್ತದೆ.

2. ಗಂಗಾ ವಿಲಾಸ್‌ನ ಮೊದಲ ಪ್ರಯಾಣದಲ್ಲಿ ಸ್ವಿಜರ್ಲೆಂಡ್‌ನಿಂದ 32 ಪ್ರವಾಸಿಗರು ವಾರಾಣಸಿಯಿಂದ ದಿಬ್ರುಗಢ್​ಗೆ ಪ್ರಯಾಣಿಸಲಿದ್ದಾರೆ.

ಇದನ್ನೂ ಓದಿ: Chinese Threat: ಚೀನಾದ ಬೇಹುಗಾರಿಕೆ ಹಡಗು ಬರುವುದಕ್ಕೆ ಒಂದು ದಿನ ಮೊದಲು ಶ್ರೀಲಂಕಾಕ್ಕೆ ಮಿಲಿಟರಿ ವಿಮಾನ ಕಳಿಸಿದ ಭಾರತ

3. ವಿಶ್ವ ಪರಂಪರೆಯ ತಾಣಗಳು, ರಾಷ್ಟ್ರೀಯ ಉದ್ಯಾನವನಗಳು, ನದಿ ಘಟ್ಟಗಳು, ಬಿಹಾರದ ಪಾಟ್ನಾ, ಜಾರ್ಖಂಡ್‌ನ ಸಾಹಿಬ್‌ಗಂಜ್, ಪಶ್ಚಿಮ ಬಂಗಾಳದ ಕೊಲ್ಕತ್ತಾ, ಬಾಂಗ್ಲಾದೇಶದ ಢಾಕಾ, ಅಸ್ಸಾಂನ ಗುವಾಹಟಿಯಂತಹ ಪ್ರಮುಖ ನಗರಗಳು ಸೇರಿದಂತೆ 50 ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಮೂಲಕ 51 ದಿನಗಳ ವಿಹಾರವನ್ನು ಆಯೋಜಿಸಲಾಗಿದೆ.

4. ಗಂಗಾ ವಿಲಾಸ್ ಹಡಗು 62 ಮೀಟರ್ ಉದ್ದ, 12 ಮೀಟರ್ ಅಗಲ ಮತ್ತು 1.4 ಮೀಟರ್ ಡ್ರಾಫ್ಟ್ನೊಂದಿಗೆ ಆರಾಮವಾಗಿ ಸಾಗುತ್ತದೆ. ಇದು ಮೂರು ಡೆಕ್‌ಗಳನ್ನು ಹೊಂದಿದೆ. 36 ಪ್ರವಾಸಿಗರ ಸಾಮರ್ಥ್ಯವಿರುವ 18 ಸೂಟ್‌ಗಳನ್ನು ಹೊಂದಿದೆ. ಪ್ರವಾಸಿಗರಿಗೆ ಸ್ಮರಣೀಯ ಮತ್ತು ಐಷಾರಾಮಿ ಅನುಭವವನ್ನು ಒದಗಿಸಲು ಎಲ್ಲಾ ಸೌಕರ್ಯಗಳನ್ನು ನೀಡಲಾಗಿದೆ.

5. ಐತಿಹಾಸಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯ ಸ್ಥಳಗಳಲ್ಲಿ ಸ್ಟಾಪ್ ಓವರ್‌ಗಳೊಂದಿಗೆ ಭಾರತದ ಶ್ರೀಮಂತ ಪರಂಪರೆಯನ್ನು ಪ್ರದರ್ಶಿಸಲು ವಾರಾಣಸಿಯ ಗಂಗಾ ಆರತಿಯನ್ನು ಪ್ರದರ್ಶಿಸಲಾಗುವುದು.

6. ಈ ಗಂಗಾ ವಿಲಾಸ್ ವಿಹಾರ ಬೌದ್ಧ ಧರ್ಮದ ಅತ್ಯಂತ ಗೌರವದ ಸ್ಥಳವಾದ ಸಾರನಾಥದಲ್ಲಿ ನಿಲ್ಲುತ್ತದೆ.

7. ಇದು ತಾಂತ್ರಿಕ ಕರಕುಶಲತೆಗೆ ಹೆಸರುವಾಸಿಯಾದ ಮಯೋಂಗ್ ಮತ್ತು ಅಸ್ಸಾಂನ ಅತಿದೊಡ್ಡ ನದಿ ದ್ವೀಪ ಮತ್ತು ವೈಷ್ಣವ ಸಂಸ್ಕೃತಿಯ ಕೇಂದ್ರವಾದ ಮಜುಲಿಯನ್ನು ಸಹ ಒಳಗೊಂಡಿದೆ.

ಇದನ್ನೂ ಓದಿ: 100ಕ್ಕೂ ಹೆಚ್ಚು ನಾವಿಕರನ್ನು ಹೊತ್ತೊಯ್ಯುತ್ತಿದ್ದ ಹಡಗು ಥಾಯ್ಲೆಂಡ್ ಕೊಲ್ಲಿಯಲ್ಲಿ ಮುಳುಗಡೆ

8. ಪ್ರವಾಸಿಗರು ಬಿಹಾರ ಸ್ಕೂಲ್ ಆಫ್ ಯೋಗ ಮತ್ತು ವಿಕ್ರಮಶಿಲಾ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡುತ್ತಾರೆ. ಇದು ಆಧ್ಯಾತ್ಮಿಕತೆ ಮತ್ತು ಜ್ಞಾನದಲ್ಲಿ ಶ್ರೀಮಂತ ಭಾರತೀಯ ಪರಂಪರೆಯಲ್ಲಿ ಮುಳುಗಲು ಅನುವು ಮಾಡಿಕೊಡುತ್ತದೆ.

9. ರಾಯಲ್ ಬೆಂಗಾಲ್ ಟೈಗರ್ಸ್‌ಗೆ ಹೆಸರುವಾಸಿಯಾದ ಬಂಗಾಳ ಕೊಲ್ಲಿ ಡೆಲ್ಟಾದಲ್ಲಿರುವ ಸುಂದರ್‌ಬನ್ಸ್‌ನ ಜೀವವೈವಿಧ್ಯ ಶ್ರೀಮಂತ ವಿಶ್ವ ಪರಂಪರೆಯ ತಾಣಗಳು ಮತ್ತು ಒಂದು ಕೊಂಬಿನ ಘೇಂಡಾಮೃಗಕ್ಕೆ ಹೆಸರುವಾಸಿಯಾದ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಮೂಲಕವೂ ಈ ವಿಹಾರ ಸಾಗುತ್ತದೆ.

10. ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಮತ್ತು ಅಸ್ಸಾಂ ಮೂಲಕ ವಿಹಾರ ಸಾಗಲಿದೆ. ಇದು ಬಾಂಗ್ಲಾದೇಶದಲ್ಲಿ 50 ಸ್ಥಳಗಳಲ್ಲಿ ನಿಲ್ಲುತ್ತದೆ. ಪ್ರವಾಸಿಗರು ನಿಲುಗಡೆ ಸಮಯದಲ್ಲಿ ಸ್ಥಳೀಯ ಸಾಂಸ್ಕೃತಿಕ ಮತ್ತು ಪಾರಂಪರಿಕ ತಾಣಗಳಿಗೆ ಭೇಟಿ ನೀಡುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ