ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್​ ಹತ್ಯೆ

ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್ ಲಾಕ್ರಾನನ್ನು ವಿರೋಧಿಗಳ ಗುಂಪು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮುಂಡ್ಕಾ ಪ್ರದೇಶದ ಅವರ ಮನೆಯ ಸಮೀಪ ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್​ ಹತ್ಯೆ
ಪೊಲೀಸ್​ Image Credit source: India Today
Follow us
|

Updated on: Nov 10, 2024 | 9:13 AM

ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಗ್ಯಾಂಗ್​ಸ್ಟರ್​ ಅಮಿತ್ ಲಾಕ್ರಾನನ್ನು ವಿರೋಧಿಗಳ ಗುಂಪು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮುಂಡ್ಕಾ ಪ್ರದೇಶದ ಅವರ ಮನೆಯ ಸಮೀಪ ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಗಿ ಗ್ಯಾಂಗ್‌ನ ಸದಸ್ಯ ಅಮಿತ್ ಲಾಕ್ರಾ, ಪ್ರತಿಸ್ಪರ್ಧಿ ಟಿಲ್ಲು ತಾಜ್‌ಪುರಿಯಾ ಗ್ಯಾಂಗ್‌ನಿಂದ ಮೋಟಾರ್‌ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಸುಮಾರು ಆರು ಗುಂಡುಗಳನ್ನು ಹಾರಿಸಿದ್ದಾರೆ ಮತ್ತು ಲಾಕ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳನ್ನು ಗುರುತಿಸಲು ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ಶೂಟೌಟ್​ಗಳ ಪ್ರಮಾಣ ಹೆಚ್ಚಾಗಿದೆ. ಕಳೆದ ಮೂರು ತಿಂಗಳಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ ಒಂಬತ್ತನ್ನು ತಲುಪಿದೆ.

ಸೆಪ್ಟೆಂಬರ್ 13: ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಜಿಮ್ ಮಾಲೀಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಕೈವಾಡವಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಸೆಪ್ಟೆಂಬರ್ 27: ದೆಹಲಿಯ ನಾರಾಯಣದಲ್ಲಿರುವ ಕಾರ್ ಶೋ ರೂಂನಲ್ಲಿ ಗುಂಡಿನ ಚಕಮಕಿ ನಡೆದಿದೆ. ಸೆಪ್ಟೆಂಬರ್ 28: ಸುಲಿಗೆಗೆ ಒತ್ತಾಯಿಸಿ ಗುಂಡು ಹಾರಿಸಿದ ದುಷ್ಕರ್ಮಿಗಳು ನಂಗ್ಲೋಯ್‌ನಲ್ಲಿ ಸಿಹಿತಿಂಡಿ ಅಂಗಡಿಯ ಮೇಲೆ ದಾಳಿ ಮಾಡಿದ್ದಾರೆ.

ಅಕ್ಟೋಬರ್ 26: ದೆಹಲಿಯ ರಾಣಿ ಬಾಗ್‌ನಲ್ಲಿರುವ ಉದ್ಯಮಿಯೊಬ್ಬರ ನಿವಾಸದಲ್ಲಿ ಇದೇ ರೀತಿಯ ಗುಂಡಿನ ದಾಳಿ ನಡೆದಿದೆ. ನವೆಂಬರ್ 4: ನಂಗ್ಲೋಯ್‌ನಲ್ಲಿರುವ ಪ್ಲೈವುಡ್ ಶೋರೂಮ್ ಅನ್ನು ಗೋಗಿ ಗ್ಯಾಂಗ್ ಗುರಿಯಾಗಿರಿಸಿಕೊಂಡಿದೆ. ಶೂಟರ್‌ಗಳು 10 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದರು.

ನವೆಂಬರ್ 4: ಅದೇ ದಿನ ಅಲಿಪುರದ ಪ್ರಾಪರ್ಟಿ ಡೀಲರ್ ಕಚೇರಿಯಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ. ನವೆಂಬರ್ 6: ಎರಡು ಪ್ರತ್ಯೇಕ ಘಟನೆಗಳು ಸಂಭವಿಸಿವೆ, ಪಶ್ಚಿಮ ವಿಹಾರ್‌ನಲ್ಲಿ ಏಳರಿಂದ ಎಂಟು ಸುತ್ತುಗಳ ಗುಂಡಿನ ದಾಳಿ ಮತ್ತು ದ್ವಾರಕಾದಲ್ಲಿ ಮತ್ತೊಂದು ಗುಂಡಿನ ದಾಳಿ ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಯುವಕನ ಬಂಧನ; ವಿಡಿಯೋ ವೈರಲ್​​
ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಯುವಕನ ಬಂಧನ; ವಿಡಿಯೋ ವೈರಲ್​​