ಛೋಟಾ ರಾಜನ್ ಕೊರೊನಾದಿಂದ ಗುಣಮುಖ, ಏಮ್ಸ್​ನಿಂದ ಡಿಸ್ಚಾರ್ಜ್; ತಿಹಾರ್ ಜೈಲಿಗೆ ವಾಪಸ್

ತಿಹಾರ್ ಜೈಲಿನ ಡಿಜಿ ಸಂದೀಪ್ ಗೊಯೆಲ್, ಈಗ 61 ವರ್ಷ ವಯಸ್ಸಿನ ಛೋಟಾ ರಾಜನ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದನ್ನು ಹಾಗೂ ತಿಹಾರ್ ಜೈಲಿಗೆ ವಾಪಸಾಗಿರುವುದನ್ನು ದೃಢಪಡಿಸಿದ್ದಾರೆ.

ಛೋಟಾ ರಾಜನ್ ಕೊರೊನಾದಿಂದ ಗುಣಮುಖ, ಏಮ್ಸ್​ನಿಂದ ಡಿಸ್ಚಾರ್ಜ್; ತಿಹಾರ್ ಜೈಲಿಗೆ ವಾಪಸ್
ಛೋಟಾ ರಾಜನ್
Follow us
TV9 Web
| Updated By: ganapathi bhat

Updated on:Aug 23, 2021 | 12:35 PM

ದೆಹಲಿ: ಕೊರೊನಾ ಸೋಂಕಿನ ಕಾರಣದಿಂದ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಪಾತಕಿ ಛೋಟಾ ರಾಜನ್ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮತ್ತೆ ತಿಹಾರ್ ಜೈಲಿಗೆ ಮರಳಿದ್ದಾನೆ. ಏಪ್ರಿಲ್ 24ರಂದು ಕೊವಿಡ್-19 ಸೋಂಕು ದೃಢಪಟ್ಟ ನಂತರ ಛೋಟಾ ರಾಜನ್​ನನ್ನು ಏಮ್ಸ್​ಗೆ ದಾಖಲಿಸಲಾಗಿತ್ತು.

ತಿಹಾರ್ ಜೈಲಿನ ಡಿಜಿ ಸಂದೀಪ್ ಗೊಯೆಲ್, ಈಗ 61 ವರ್ಷ ವಯಸ್ಸಿನ ಛೋಟಾ ರಾಜನ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದನ್ನು ಹಾಗೂ ತಿಹಾರ್ ಜೈಲಿಗೆ ವಾಪಸಾಗಿರುವುದನ್ನು ದೃಢಪಡಿಸಿದ್ದಾರೆ. 2015ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಬಂಧಿತನಾದ ಬಳಿಕ ರಾಜನ್, ತಿಹಾರ್ ಜೈಲಿನಲ್ಲಿದ್ದಾನೆ.

ಒಂದು ಕಾಲದಲ್ಲಿ ದಾವುದ್ ಇಬ್ರಾಹಿಂ ಸಹಚರನಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾನೆ ಎಂದು ಮೇ 7ರಂದು ವರದಿಯಾಗಿತ್ತು. ಆದರೆ ಅದು ಸುಳ್ಳುಸುದ್ದಿ ಎಂದು ಏಮ್ಸ್ ತಿಳಿಸಿತ್ತು.  2015ರಲ್ಲಿ ಛೋಟಾ ರಾಜನ್​ನನ್ನು ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಕಾರಾಗೃಹವಾಸ ಅನುಭವಿಸುತ್ತಿದ್ದ ರಾಜನ್​ನನ್ನು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಿಹಾರ್ ಜೈಲಿನ 20,500 ಕೈದಿಗಳ ಪೈಕಿ ಕನಿಷ್ಠ 170 ಕೈದಿಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗಿದೆ. ಅಲ್ಲದೇ ಸುಮಾರು ತಿಹಾರ್ ಜೈಲಿನ ಸುಮಾರು 70 ಅಧಿಕಾರಿಗಳಿಗೂ ಸೋಂಕು ತಗುಲಿದೆ.

ಮಾಜಿ ಭೂಗತ ದೊರೆ ಛೋಟಾ ರಾಜನ್ ವಿರುದ್ಧ 68 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 35 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲಾಗಿತ್ತು. ನಾಲ್ಕು ಪ್ರಕರಣಗಳಲ್ಲಿ  ಛೋಟಾ ರಾಜನ್ ಅಪರಾಧಿ  ಎಂದು ನ್ಯಾಯಾಲಯ ತೀರ್ಪು ನೀಡಿತ್ತು.

ಇದನ್ನೂ ಓದಿ: Chhota Rajan: ಬಂಧಿತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿನಿಂದ ಸಾವು: ಸುಳ್ಳುಸುದ್ದಿ ಎಂದ ಏಮ್ಸ್

Published On - 9:29 pm, Tue, 11 May 21

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ