Mukhtar Ansari: ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್​​ಸ್ಟರ್ ಮುಖ್ತಾರ್ ಅನ್ಸಾರಿ ದೋಷಿ

ಆಗಸ್ಟ್ 3, 1991 ರಂದು, ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್ ನ್ನು ವಾರಣಾಸಿಯಲ್ಲಿ ಅಜಯ್ ರಾಯ್ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಿಲಾಗಿತ್ತು. ಈ ಪ್ರಕರಣದಲ್ಲಿ ಅಜಯ್ ರಾಯ್ ಅವರು ಮುಖ್ತಾರ್ ಅನ್ಸಾರಿ, ಭೀಮ್ ಸಿಂಗ್ ಮತ್ತು ಮಾಜಿ ಶಾಸಕ ಅಬ್ದುಲ್ ಕಲೀಂ ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಿದ್ದರು

Mukhtar Ansari: ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್​​ಸ್ಟರ್ ಮುಖ್ತಾರ್ ಅನ್ಸಾರಿ ದೋಷಿ
ಮುಖ್ತಾರ್ ಅನ್ಸಾರಿ
Follow us
|

Updated on:Jun 05, 2023 | 1:06 PM

ದೆಹಲಿ: ಉತ್ತರ ಪ್ರದೇಶದ (Uttar Pradesh) ವಾರಣಾಸಿಯ ವಿಶೇಷ ಎಂಪಿ/ಎಂಎಲ್ಎ ನ್ಯಾಯಾಲಯವು 1991ರ ಅವಧೇಶ್ ರಾಯ್ ಹತ್ಯೆ(Awadhesh Rai murder case) ಪ್ರಕರಣದಲ್ಲಿ ಗ್ಯಾಂಗ್​​ಸ್ಟರ್ ,ರಾಜಕಾರಣಿ ಮುಖ್ತಾರ್ ಅನ್ಸಾರಿ (Mukhtar Ansari) ದೋಷಿ ಎಂದು ತೀರ್ಪು ನೀಡಿದೆ. ಸೋಮವಾರ ಮಧ್ಯಾಹ್ನ 2 ಗಂಟೆಗೆ ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ನ್ಯಾಯಾಲಯದ ಆವರಣ ಮತ್ತು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಆಗಸ್ಟ್ 3, 1991 ರಂದು, ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್ ನ್ನು ವಾರಣಾಸಿಯಲ್ಲಿ ಅಜಯ್ ರಾಯ್ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಿಲಾಗಿತ್ತು. ಈ ಪ್ರಕರಣದಲ್ಲಿ ಅಜಯ್ ರಾಯ್ ಅವರು ಮುಖ್ತಾರ್ ಅನ್ಸಾರಿ, ಭೀಮ್ ಸಿಂಗ್ ಮತ್ತು ಮಾಜಿ ಶಾಸಕ ಅಬ್ದುಲ್ ಕಲೀಂನ್ನು ಎಫ್‌ಐಆರ್‌ನಲ್ಲಿ ಹೆಸರಿಸಿದ್ದರು.

ಮೇ 17 ರಂದು, ಘಾಜಿಪುರ ಎಂಪಿ/ಎಂಎಲ್ಎ ನ್ಯಾಯಾಲಯವು ಉತ್ತರ ಪ್ರದೇಶದ ಮೊಹಮ್ಮದಾಬಾದ್ ಪ್ರದೇಶದಲ್ಲಿ ಕೊಲೆ ಯತ್ನದ ಸಂಚಿನ ಪ್ರಕರಣದಲ್ಲಿ ಆರೋಪಿ ಮುಖ್ತಾರ್ ಅನ್ಸಾರಿಯನ್ನು ಖುಲಾಸೆಗೊಳಿಸಿತ್ತು. 2009 ರಲ್ಲಿ, ಮೀರ್ ಹಸನ್ 120ಬಿ ಅಡಿಯಲ್ಲಿ ಅನ್ಸಾರಿ ವಿರುದ್ಧ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿದರು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 307 ರ ಅಡಿಯಲ್ಲಿ ಅನ್ಸಾರಿ ವಿರುದ್ಧ ಗಾಜಿಪುರದ ಮೊಹಮ್ಮದಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಐದು ಬಾರಿ ಶಾಸಕರಾಗಿರುವ ಮುಖ್ತಾರ್ ಅನ್ಸಾರಿ ಈಗಾಗಲೇ ಮತ್ತೊಂದು ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಏಪ್ರಿಲ್‌ನಲ್ಲಿ ಅವರಿಗೆ ಶಿಕ್ಷೆ ವಿಧಿಸಲಾಯಿತು.

ಇದನ್ನೂ ಓದಿ: ಮಕ್ಕಳ ಭಾಗ್ಯ ಕರುಣಿಸುವ ಈ ದತ್ತು ಕೇಂದ್ರದಲ್ಲಿ, ಮಕ್ಕಳನ್ನು ನಡೆಸಿಕೊಳ್ಳುವ ರೀತಿಗೆ ಬೆಚ್ಚಿ ಬಿದ್ದ ಜನ

ಪ್ರಕರಣದ ತನಿಖೆಯನ್ನು ಸಿಬಿ-ಸಿಐಡಿಗೆ ವಹಿಸಲಾಗಿದೆ.ಜೂನ್ 2022 ರಲ್ಲಿ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಸ್ ಡೈರಿ ಕಣ್ಮರೆಯಾಗಿರುವುದು ಕಂಡುಬಂದಿದೆ. ಇಡೀ ಪ್ರಕರಣವನ್ನು ಫೋಟೊಕಾಪಿಗಳ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು. ಫೋಟೊಕಾಪಿಗಳ ದಾಖಲೆಗಳ ಆಧಾರದ ಮೇಲೆ ತೀರ್ಪು ಪ್ರಕಟಿಸಿದ ಮೊದಲ ಪ್ರಕರಣ ಇದಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Mon, 5 June 23

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು