ಕೊವಿಡ್ ಲಸಿಕೆಯ 2ನೇ ಡೋಸ್- ಬೂಸ್ಟರ್ ಡೋಸ್​ ನಡುವಿನ ಅಂತರ 6 ತಿಂಗಳಿಗೆ ತಗ್ಗುವ ಸಾಧ್ಯತೆ

ಎರಡನೇ ಕೋವಿಡ್ ಲಸಿಕೆ ಮತ್ತು ಬೂಸ್ಟರ್ ಡೋಸ್ ನಡುವಿನ ಪ್ರಸ್ತುತ ಅಂತರವು ಒಂಬತ್ತು ತಿಂಗಳುಗಳಿವೆ. ಈ ಅಂತರವನ್ನು 6 ತಿಂಗಳಿಗೆ ಇಳಿಸುವ ಸಾಧ್ಯತೆ ಹೆಚ್ಚಾಗಿದೆ.

ಕೊವಿಡ್ ಲಸಿಕೆಯ 2ನೇ ಡೋಸ್- ಬೂಸ್ಟರ್ ಡೋಸ್​ ನಡುವಿನ ಅಂತರ 6 ತಿಂಗಳಿಗೆ ತಗ್ಗುವ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Apr 27, 2022 | 8:52 PM

ನವದೆಹಲಿ: ಕೇಂದ್ರ ಸರ್ಕಾರವು ಶೀಘ್ರದಲ್ಲೇ ಎರಡನೇ ಕೋವಿಡ್ ಲಸಿಕೆ (Covid Vaccine) ಮತ್ತು ಬೂಸ್ಟರ್ ಡೋಸ್ (Booster Dose) ನಡುವಿನ ಅಂತರವನ್ನು ಆರು ತಿಂಗಳಿಗೆ ಕಡಿಮೆ ಮಾಡುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈಗಾಗಲೇ ಭಾರತದಲ್ಲಿ ಕೊವಿಡ್ ಕೇಸುಗಳು ಹೆಚ್ಚುತ್ತಿರುವುದರಿಂದ ಬೂಸ್ಟರ್ ಡೋಸ್​ಗಳನ್ನು ನೀಡಲಾಗುತ್ತದೆ. ಎರಡನೇ ಕೋವಿಡ್ ಲಸಿಕೆ ಮತ್ತು ಬೂಸ್ಟರ್ ಡೋಸ್ ನಡುವಿನ ಪ್ರಸ್ತುತ ಅಂತರವು ಒಂಬತ್ತು ತಿಂಗಳುಗಳಿವೆ. ಈ ಅಂತರವನ್ನು 6 ತಿಂಗಳಿಗೆ ಇಳಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‌ಟಿಎಜಿಐ) ಏಪ್ರಿಲ್ 29ರಂದು ಸಭೆಯನ್ನು ನಡೆಸುವ ನಿರೀಕ್ಷೆಯಿದೆ. ಕೊವಿಡ್ ಲಸಿಕೆಯ 2ನೇ ಡೋಸ್ (Covid Vaccine 2nd Dose) ಮತ್ತು ಬೂಸ್ಟರ್ ಡೋಸ್​ ನಡುವಿನ ಅಂತರವನ್ನು ಕಡಿಮೆ ಮಾಡಲು ಶಿಫಾರಸು ಮಾಡಲಾಗುತ್ತದೆ ಎಂದು ಪಿಟಿಐ ವರದಿ ತಿಳಿಸಿದೆ.

ಭಾರತದಲ್ಲಿ ಕೊವಿಡ್ ಸಾಂಕ್ರಾಮಿಕದ ಸವಾಲು ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲ. ಕಳೆದ ಎರಡು ವಾರಗಳಲ್ಲಿ ಕೊರೋನಾವೈರಸ್ ಪ್ರಕರಣಗಳ ಹೆಚ್ಚಳವು ಎಚ್ಚರಿಕೆಯ ಅಗತ್ಯವನ್ನು ವ್ಯಕ್ತಪಡಿಸುತ್ತದೆ ಎಂದು ಹಿಂದಿನ ದಿನದಲ್ಲಿ, ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಮಂಗಳವಾರದ ವೇಳೆಗೆ 18-59 ವರ್ಷ ವಯಸ್ಸಿನವರಿಗೆ ನೀಡಲಾದ ಒಟ್ಟು ಬೂಸ್ಟರ್‌ಗಳ ಸಂಖ್ಯೆ 5,17,547 ಆಗಿದೆ. ಅಲ್ಲದೆ, 47,36,567 ಆರೋಗ್ಯ ಕಾರ್ಯಕರ್ತರು, 74,47,184 ಮುಂಚೂಣಿ ಕಾರ್ಯಕರ್ತರು ಮತ್ತು 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 1,45,45,595 ವ್ಯಕ್ತಿಗಳು ಬೂಸ್ಟರ್ ಶಾಟ್ ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರವು ಏಪ್ರಿಲ್ 10ರಂದು ಖಾಸಗಿ ಲಸಿಕೆ ಕೇಂದ್ರಗಳಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ಲಸಿಕೆ ನೀಡಲು ಅವಧಿಯನ್ನು ವಿಸ್ತರಿಸಿತ್ತು. ಅಂತಾರಾಷ್ಟ್ರೀಯವಾಗಿ ನಡೆಸಿದ ಅಧ್ಯಯನಗಳ ವೈಜ್ಞಾನಿಕ ಪುರಾವೆಗಳು ಮತ್ತು ಸಂಶೋಧನೆಗಳನ್ನು ಗಣನೆಗೆ ತೆಗೆದುಕೊಂಡು, ಕೋವಿಡ್ -19 ಲಸಿಕೆಯ ಎರಡನೇ ಡೋಸ್ ಮತ್ತು ಮುನ್ನೆಚ್ಚರಿಕೆ ಡೋಸ್ ನಡುವಿನ ಅಂತರವು ಪ್ರಸ್ತುತ 9 ತಿಂಗಳಿಂದ 6 ತಿಂಗಳವರೆಗೆ ಇಳಿಕೆಯಾಗಲಿದೆ. ಶುಕ್ರವಾರ ಸಭೆ ಸೇರಲಿರುವ ಎನ್‌ಟಿಎಜಿಐ ಶಿಫಾರಸುಗಳ ಆಧಾರದ ಮೇಲೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಕೊವಿಡ್ ಎರಡನೇ ಡೋಸ್ ಪಡೆದ ನಂತರ 9 ತಿಂಗಳುಗಳನ್ನು ಪೂರೈಸಿದ 18 ವರ್ಷಕ್ಕಿಂತ ಮೇಲ್ಪಟ್ಟ ಜನರು ಬೂಸ್ಟರ್​ ಡೋಸ್‌ಗೆ ಅರ್ಹರಾಗಿರುತ್ತಾರೆ. ಭಾರತವು ಏಪ್ರಿಲ್ 10ರಂದು ಖಾಸಗಿ ಲಸಿಕೆ ಕೇಂದ್ರಗಳಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ COVID-19 ಲಸಿಕೆಗಳ ಬೂಸ್ಟರ್ ಡೋಸ್‌ಗಳನ್ನು ನೀಡಲು ಪ್ರಾರಂಭಿಸಿತು.

ಇದನ್ನೂ ಓದಿ: ಸಿಎಂಗಳ ಜೊತೆ ನರೇಂದ್ರ ಮೋದಿ ಸಭೆ; ಕರ್ನಾಟಕದಲ್ಲಿ ಕೊವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ ಬೊಮ್ಮಾಯಿ

ಕೊವಿಡ್​ 19 ಲಸಿಕೆ 2ನೇ ಡೋಸ್​ ಪಡೆದು 9 ತಿಂಗಳು ಕಳೆದವರೆಲ್ಲ 3ನೇ ಡೋಸ್​ಗೆ ಸಿದ್ಧರಾಗಿ; ಈ ವಿಚಾರಗಳು ನಿಮ್ಮ ಗಮನದಲ್ಲಿರಲಿ

Published On - 8:51 pm, Wed, 27 April 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್