Garbha Sanskar: ಸುಸಂಸ್ಕೃತ, ದೇಶಭಕ್ತ ಶಿಶುಗಳ ಜನನಕ್ಕಾಗಿ ಗರ್ಭ ಸಂಸ್ಕಾರ ಅಭಿಯಾನ, ಗರ್ಭಿಣಿಯರಿಗೆ ಭಗವದ್ಗೀತೆ, ರಾಮಾಯಣ ಪಾಠ

ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಸಂಯೋಜಿತ ಸಂಸ್ಥೆಯು ಇಂದಿನಿಂದ ಗರ್ಭ ಸಂಸ್ಕಾರ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಅಭಿಯಾನದ ಅಡಿಯಲ್ಲಿ ಗರ್ಭಿಣಿಯರಿಗೆ ರಾಮಾಯಣ, ಭಗವದ್ಗೀತೆ ಬೋಧಿಸಿ, ಗರ್ಭದಿಂದಲೇ ಶಿಶುಗಳಿಗೆ ಸಂಸ್ಕಾರವನ್ನು ಕಲಿಸುವ ಒಂದು ಪ್ರಯತ್ನ ಇದಾಗಿದೆ

Garbha Sanskar: ಸುಸಂಸ್ಕೃತ, ದೇಶಭಕ್ತ ಶಿಶುಗಳ ಜನನಕ್ಕಾಗಿ ಗರ್ಭ ಸಂಸ್ಕಾರ ಅಭಿಯಾನ, ಗರ್ಭಿಣಿಯರಿಗೆ ಭಗವದ್ಗೀತೆ, ರಾಮಾಯಣ ಪಾಠ
ಗರ್ಭಿಣಿImage Credit source: Hindustan Times
Follow us
ನಯನಾ ರಾಜೀವ್
|

Updated on: Jun 11, 2023 | 10:48 AM

ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಸಂಯೋಜಿತ ಸಂಸ್ಥೆಯು ಇಂದಿನಿಂದ ಗರ್ಭ ಸಂಸ್ಕಾರ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಅಭಿಯಾನದ ಅಡಿಯಲ್ಲಿ ಗರ್ಭಿಣಿಯರಿಗೆ ರಾಮಾಯಣ, ಭಗವದ್ಗೀತೆ ಬೋಧಿಸಿ, ಗರ್ಭದಿಂದಲೇ ಶಿಶುಗಳಿಗೆ ಸಂಸ್ಕಾರವನ್ನು ಕಲಿಸುವ ಒಂದು ಪ್ರಯತ್ನ ಇದಾಗಿದೆ. ಭಗವದ್ಗೀತೆ ಮತ್ತು ರಾಮಾಯಣದಂತಹ ಧಾರ್ಮಿಕ ಗ್ರಂಥಗಳನ್ನು ಓದಲು, ಸಂಸ್ಕೃತ ಮಂತ್ರಗಳನ್ನು ಪಠಿಸಲು ಮತ್ತು ಯೋಗಾಭ್ಯಾಸ ಮಾಡಲು ಪ್ರೋತ್ಸಾಹಿಸಲಾಗುತ್ತದೆ, ಇದರಿಂದ ಸುಸಂಸ್ಕೃತ ಮತ್ತು ದೇಶಭಕ್ತ ಶಿಶುಗಳು ಹುಟ್ಟುತ್ತವೆ ಎಂದು ಹೇಳಿದೆ. ಗರ್ಭಾವಸ್ಥೆಯಿಂದ ಹೆರಿಗೆಯವರೆಗೆ ಶಿಶುಗಳು ಗರ್ಭದಲ್ಲಿ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಕಲಿಯುವುದನ್ನು ಖಚಿತಪಡಿಸಿಕೊಳ್ಳಲು, ಎರಡು ವರ್ಷವನ್ನು ತಲುಪುವವರೆಗೆ ಈ ಪ್ರಕ್ರಿಯೆಯು ಮುಂದುವರಿಯುತ್ತದೆ ಎಂದು ಸಂವರ್ಧಿನಿ ನ್ಯಾಸ್ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ.

ಯೋಗಾಭ್ಯಾಸವು ಸಹಜ ಹೆರಿಗೆಯಾಗಲು ಗರ್ಭಿಣಿಯರಿಗೆ ಸಹಾಯವಾಗುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ. ಇಂಥ ಅಭ್ಯಾಸಗಳು ಶಿಶುಗಳ ಮೆದುಳಿನ ಮೇಲೆ ಆಳವಾದ ಧನಾತ್ಮಕ ಪರಿಣಾಮ ಬೀರುತ್ತವೆ. ನಾಲ್ಕು ತಿಂಗಳ ಗರ್ಭದಲ್ಲಿರುವ ಮಗು ಕೇಳಲು ಪ್ರಾರಂಭಿಸುತ್ತದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.

ಮತ್ತಷ್ಟು ಓದಿ: Al Pacino: 83 ವರ್ಷ ವಯಸ್ಸಿನ ನಟನಿಗೆ 29ರ ಪ್ರೇಯಸಿ; ಗರ್ಭಿಣಿ ಆದ ಬಳಿಕ ತಂದೆ ಯಾರೆಂದು ತಿಳಿಯಲು ಪರೀಕ್ಷೆ: ಕಾದಿತ್ತು ಅಚ್ಚರಿ

ಇದಕ್ಕಾಗಿ, ದೇಶದಲ್ಲಿ ಐದು ಪ್ರದೇಶಗಳಾಗಿ ವಿಂಗಡಿಸಿದ್ದೇವೆ ಮತ್ತು ಪ್ರತಿಯೊಂದೂ 10 ವೈದ್ಯರ ತಂಡವನ್ನು ಹೊಂದಿದ್ದು, ಅವರು ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತಾರೆ. ಈ ಪ್ರತಿಯೊಬ್ಬ ವೈದ್ಯರು ತಮ್ಮ ತಮ್ಮ ಪ್ರದೇಶಗಳಲ್ಲಿ 20 ಮಂದಿ ಗರ್ಭಿಣಿಯರಿಗೆ ಮಾರ್ಗದರ್ಶನ ನೀಡುವ ಮೂಲಕ ಕಾರ್ಯಕ್ರಮ ಪ್ರಾರಂಭಿಸುತ್ತಾರೆ ಎಂದು ಸಂವರ್ಧಿನಿ ನ್ಯಾಸ್ ಕಾರ್ಯಕಾರಿ ಪಿಟಿಐಗೆ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ