Garib Kalyan Sammelan: ಶಿಮ್ಲಾದಲ್ಲಿ ಮೇ 31ರಂದು ಗರೀಬ್ ಕಲ್ಯಾಣ ಸಮ್ಮೇಳನ; ಪ್ರಧಾನಿ ನರೇಂದ್ರ ಮೋದಿ ಭಾಗಿ
ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಶಿಮ್ಲಾದಲ್ಲಿ 'ಗರೀಬ್ ಕಲ್ಯಾಣ್ ಸಮ್ಮೇಳನ'ದಲ್ಲಿ ಭಾಗವಹಿಸಲಿದ್ದು, ತಮ್ಮ ಸರ್ಕಾರ 8 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್ಡಿಎ ಸರ್ಕಾರ 8 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮೇ 31ರಂದು ಶಿಮ್ಲಾದಲ್ಲಿ ‘ಗರೀಬ್ ಕಲ್ಯಾಣ ಸಮ್ಮೇಳನ’ದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ಶಿಮ್ಲಾದಲ್ಲಿ ‘ಗರೀಬ್ ಕಲ್ಯಾಣ್ ಸಮ್ಮೇಳನ’ದಲ್ಲಿ (Garib Kalyan Sammelan) ಭಾಗವಹಿಸಲಿದ್ದು, ತಮ್ಮ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ.
ಈ ಸಾರ್ವಜನಿಕ ಕಾರ್ಯಕ್ರಮವನ್ನು ದೇಶದಾದ್ಯಂತ ರಾಜ್ಯ ರಾಜಧಾನಿಗಳು, ಜಿಲ್ಲಾ ಕೇಂದ್ರಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. ಈ ಗರೀಬ್ ಕಲ್ಯಾಣ ಸಮ್ಮೇಳನವು ದೇಶಾದ್ಯಂತ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳು ನೇರವಾಗಿ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಪರಿಕಲ್ಪನೆಯನ್ನು ರೂಪಿಸುತ್ತದೆ ಮತ್ತು ಸರ್ಕಾರವು ನಡೆಸುತ್ತಿರುವ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಪ್ರತಿಕ್ರಿಯೆಯನ್ನು ಪಡೆಯುವ ಪ್ರಯತ್ನದಲ್ಲಿದೆ.
ಇದನ್ನೂ ಓದಿ: PM Cares: ಕೊವಿಡ್ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಹಲವು ಸೌಲಭ್ಯ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ
ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯ ಸಚಿವರು, ಸಂಸದರು, ವಿಧಾನಸಭೆಯ ಸದಸ್ಯರು ಮತ್ತು ಇತರ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳು ದೇಶಾದ್ಯಂತ ತಮ್ಮ ತಮ್ಮ ಸ್ಥಳಗಳಲ್ಲಿ ಸಾರ್ವಜನಿಕರೊಂದಿಗೆ ನೇರವಾಗಿ ಸಂವಾದ ನಡೆಸುವ ಮೂಲಕ ‘ಗರೀಬ್ ಕಲ್ಯಾಣ್ ಸಮ್ಮೇಳನ’ ಬೆಳಗ್ಗೆ 9:45ಕ್ಕೆ ಪ್ರಾರಂಭವಾಗಲಿದೆ. ನಾಳೆ ಬೆಳಗ್ಗೆ ಸುಮಾರು 11 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮ್ಮೇಳನದ ಸಮಯದಲ್ಲಿ ಪ್ರಧಾನಮಂತ್ರಿ ಮೋದಿ ಭಾರತ ಸರ್ಕಾರದ 9 ಇಲಾಖೆಗಳ ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:04 pm, Mon, 30 May 22