ಗುಜರಾತ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, 28 ಮಂದಿ ಆಸ್ಪತ್ರೆಗೆ ದಾಖಲು
ರಾಸಾಯನಿಕ ಕಾರ್ಖಾನೆ(Chemical Factory) ಯಲ್ಲಿ ಅನಿಲ ಸೋರಿಕೆ ಉಂಟಾಗಿ 28 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ. ಗುಜರಾತ್‌ನ ಭರೂಚ್ ಜಿಲ್ಲೆಯ ಜಂಬೂಸರ್ ಬಳಿಯ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಸೋರಿಕೆಯಾದ ವಿಷಕಾರಿ ಅನಿಲವನ್ನು ಉಸಿರಾಡಿದ 28 ಮಂದಿ ಅಸ್ವಸ್ಥರಾಗಿದ್ದರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಸರೋದ್ ಗ್ರಾಮದ ಪಿಐ ಇಂಡಸ್ಟ್ರೀಸ್‌ನಲ್ಲಿನ ಟ್ಯಾಂಕ್‌ನಲ್ಲಿ ಸಂಭವಿಸಿದ ಬೆಂಕಿಯಿಂದಾಗಿ ಸೋರಿಕೆಯಾದ ಬ್ರೋಮಿನ್ ಅನಿಲವನ್ನು ಉಸಿರಾಡಿದ ನಂತರ ಸಂತ್ರಸ್ತ ಜನರು ಉಸಿರಾಟದ ತೊಂದರೆ ಅನುಭವಿಸಿದ್ದಾರೆ ಎಂದು ಭರೂಚ್ ನಿವಾಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್‌ಆರ್ ಧಾಂಧಲ್ ಹೇಳಿದ್ದಾರೆ.
ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅನಿಲ ಸೋರಿಕೆಯಾದ ವರದಿಯಾದಾಗ ಕಾರ್ಖಾನೆಯಲ್ಲಿ ಸುಮಾರು 2,000 ಕಾರ್ಮಿಕರು ಇದ್ದರು. ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವೇದಾಚ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ವೈಶಾಲಿ ಅಹಿರ್ ತಿಳಿಸಿದ್ದಾರೆ.
ಮತ್ತಷ್ಟು ಓದಿ: ಬೀದರ್: ಕೆಮಿಕಲ್ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಓರ್ವ ಸಾವು, ಮೂವರು ಚಿಂತಾಜನಕ
ಟ್ಯಾಂಕ್ ಬಳಿ ಇದ್ದ ಕಾರ್ಮಿಕರು ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋರಿಕೆಯನ್ನು ನಿಯಂತ್ರಿಸಲಾಗಿದೆ ಎಂದು ಅವರು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ