AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಜನಸಾಮಾನ್ಯರಿಗೆ ಕೊಂಚ ರಿಲೀಫ್; ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 10 ರೂಪಾಯಿ ಇಳಿಕೆ

LPG Gas Cylinder Rate: ಅಡುಗೆ ಅನಿಲ (LPG) ಬಳಕೆದಾರರಿಗೂ ಸಂತಸದ ವಿಚಾರ ನೀಡಿರುವ IOCL ಅಡುಗೆ ಅನಿಲ ಸಿಲಿಂಡರ್ ದರವನ್ನು 10 ರೂಪಾಯಿ ಇಳಿಕೆ ಮಾಡಿದೆ. ಈ ಮೂಲಕ ಪ್ರತೀ ಸಿಲಿಂಡರ್ ದರ ದೆಹಲಿಯಲ್ಲಿ ₹ 809 ಆಗಿದೆ.

LPG Cylinder Price: ಜನಸಾಮಾನ್ಯರಿಗೆ ಕೊಂಚ ರಿಲೀಫ್; ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 10 ರೂಪಾಯಿ ಇಳಿಕೆ
ಎಲ್​ಪಿಜಿ
TV9 Web
| Updated By: ganapathi bhat|

Updated on:Apr 05, 2022 | 12:59 PM

Share

ದೆಹಲಿ: ಅಡುಗೆ ಗ್ಯಾಸ್ ಸಿಲಿಂಡರ್ ದರದಲ್ಲಿ 10 ರೂಪಾಯಿ ಇಳಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಿಯಮಿತ (IOCL) ಇಂದು (ಮಾರ್ಚ್ 31) ಘೋಷಿಸಿದೆ. ಏಪ್ರಿಲ್ 1ರ ಬಳಿಕ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ. ನವೆಂಬರ್ 2020ರಿಂದ ಕಚ್ಚಾ ತೈಲ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆಯಾಗುತ್ತಿತ್ತು. ಭಾರತವು ಕಚ್ಚಾ ತೈಲಗಳ ಆಮದನ್ನು ಅವಲಂಬಿಸಿಕೊಂಡಿತ್ತು. ಹಾಗೂ ತೈಲ ಬೆಲೆ ಅಥವಾ ಅಡುಗೆ ಅನಿಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರಿಳಿತವನ್ನು ಅವಲಂಬಿಸಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾದ ಬೆಲೆ ಏರಿಕೆ ದೇಶಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೂ ಪರಿಣಾಮ ಬೀರಿತ್ತು.

ಆದರೆ, ಕೊವಿಡ್-19 ಹಾಗೂ ಯುರೋಪ್ ಮತ್ತು ಏಷ್ಯಾದ ಹಲವು ದೇಶಗಳಲ್ಲಿ ಕೊರೊನಾ ಲಸಿಕೆಯ ಅಡ್ಡಪರಿಣಾಮಗಳು ಹೆಚ್ಚಾದಾಗ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಮಾರ್ಚ್ ದ್ವಿತೀಯಾರ್ಧದಲ್ಲಿ ಇಳಿಕೆಯಾಯಿತು ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ತೈಲ ಕಂಪೆನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಕೆ ಮಾಡಿತ್ತು. ಪೆಟ್ರೋಲ್ ದರವನ್ನು ದೆಹಲಿ ಮಾರುಕಟ್ಟೆಯಲ್ಲಿ 61 ಪೈಸೆ ಮತ್ತು ಡೀಸೆಲ್ ದರವನ್ನು 60 ಪೈಸೆ ಇಳಿಸಿತ್ತು. ಈ ಅವಧಿಯಲ್ಲಿ ದೇಶದ ಇತರ ನಗರಗಳಲ್ಲಿ ಕೂಡ ಇಂಧನ ದರ ಕೊಂಚ ಇಳಿಕೆ ಕಂಡಿತ್ತು. ಇದರಿಂದ ವಾಹನ ಸವಾರರಿಗೆ, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಆರ್ಥಿಕ ಸಂಕಷ್ಟದ ಬಿಗಿ ಹಿಡಿತದಿಂದ ಸ್ವಲ್ಪ ಸಡಿಲವಾದಂತಾಗಿತ್ತು.

ಇದೀಗ, ಅಡುಗೆ ಅನಿಲ (LPG) ಬಳಕೆದಾರರಿಗೂ ಸಂತಸದ ವಿಚಾರ ನೀಡಿರುವ IOCL ಅಡುಗೆ ಅನಿಲ ಸಿಲಿಂಡರ್ ದರವನ್ನು 10 ರೂಪಾಯಿ ಇಳಿಕೆ ಮಾಡಿದೆ. ಈ ಮೂಲಕ ಪ್ರತೀ ಸಿಲಿಂಡರ್ ದರ ದೆಹಲಿಯಲ್ಲಿ ₹ 809 ಆಗಿದೆ. ದೇಶದ ಇತರ ಮಾರುಕಟ್ಟೆಯಲ್ಲಿ ಕೂಡ ಪ್ರತಿ ಸಿಲಿಂಡರ್ ಮೇಲೆ ₹ 10 ಇಳಿಕೆ ಕಂಡುಬರಲಿದೆ. ನೂತನ ದರ ನಾಳೆಯಿಂದ ಜಾರಿಯಾಗಲಿದೆ.

ಇದನ್ನೂ ಓದಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇನ್ನು 10 ವರ್ಷ ಆದರೂ ಇಳಿಯುವ ಸಾಧ್ಯತೆ ಇಲ್ಲ! ಯಾಕೆ ಗೊತ್ತಾ?

ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಮಮತಾ ಬ್ಯಾನರ್ಜಿ ಪಾದಯಾತ್ರೆ; ಮೋದಿ ವಿರುದ್ಧ ವಾಗ್ದಾಳಿ

Published On - 10:11 pm, Wed, 31 March 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ