AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಮಹಾರಾಷ್ಟ್ರದಲ್ಲಿ ಮತ್ತೆ ಶೇ.50ರ ನಿಯಮ ಜಾರಿ, ರಾತ್ರಿ ಗುಂಪುಗೂಡುವುದು ನಿಷೇಧ

ಜಿಮ್​, ಹೋಟೆಲ್​, ಬಾರ್​, ಸ್ಪಾ, ಸಿನಿಮಾ ಥಿಯೇಟರ್​​ಗಳಲ್ಲಿ ಶೇ. 50 ಜನರಿಗೆ ಮಾತ್ರ ಅವಕಾಶ. ಕ್ರೀಡೆಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲೂ ಕೂಡ ಶೇ.50ರಷ್ಟು ಜನ ಮಾತ್ರ ಪಾಲ್ಗೊಳ್ಳಬಹುದು ಎಂದು ಶುಕ್ರವಾರ ಬಿಡುಗಡೆ ಮಾಡಲಾದ ಮಾರ್ಗಸೂಚಿಯಲ್ಲಿ ಮಹಾ ಸರ್ಕಾರ ಆದೇಶ ನೀಡಿದೆ.

ಕೊವಿಡ್​ 19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಮಹಾರಾಷ್ಟ್ರದಲ್ಲಿ ಮತ್ತೆ ಶೇ.50ರ ನಿಯಮ ಜಾರಿ, ರಾತ್ರಿ ಗುಂಪುಗೂಡುವುದು ನಿಷೇಧ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Dec 25, 2021 | 12:11 PM

ಮುಂಬೈ: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ (Omicron Variant)​ ಸೋಂಕಿತರ ಸಂಖ್ಯೆ ಏರುತ್ತಿದ್ದಂತೆ, ನಿಯಂತ್ರಣಕ್ಕಾಗಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇಶದಲ್ಲಿ ನೋಡನೋಡುತ್ತಿದ್ದಂತೆ ಒಮಿಕ್ರಾನ್​ ಸೋಂಕಿತರ ಸಂಖ್ಯೆ 400 ದಾಟಿದ್ದು,  ದೆಹಲಿ ಮತ್ತು ಮುಂಬೈನಲ್ಲಿಯೇ ಹೆಚ್ಚಿನ ಪ್ರಕರಣಗಳು ಕಾಣಿಸಿಕೊಂಡಿವೆ. ಇದೀಗ ಒಮಿಕ್ರಾನ್​ ತಡೆಗೆ ಮಹಾರಾಷ್ಟ್ರ ಸರ್ಕಾರ ಕೆಲವು ನಿಯಮಗಳನ್ನು ಜಾರಿಗೊಳಿಸಿದ್ದು, ಇನ್ನು ಮುಂದೆ ಸಂಜೆ 9ಗಂಟೆಯಿಂದ ಬೆಳಗ್ಗೆ 6ಗಂಟೆವರೆಗೆ, 5 ಅಥವಾ ಅದಕ್ಕಿಂತ ಹೆಚ್ಚಿನ ಜನರು ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವಂತಿಲ್ಲ. ಹೊಸ ವರ್ಷ ಆಚರಣೆಗೆ ಇನ್ನು ಒಂದು ವಾರಗಳಷ್ಟೆ ಬಾಕಿ ಇರುವಾಗ ಮಹಾರಾಷ್ಟ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇನ್ನು ಮುಂದೆ ಒಳಾಂಗಣ ಮದುವೆಗಳಲ್ಲಿ 100 ಮಂದಿ ಮಾತ್ರ ಪಾಲ್ಗೊಳ್ಳಬಹುದು. ಹೊರಾಂಗಣದಲ್ಲಿ ನಡೆಯುವ ಮದುವೆಯಲ್ಲಿ ಗರಿಷ್ಠ 250 ಜನರು ಮಾತ್ರ ಭಾಗವಹಿಸಬಹುದು.  

ಜಿಮ್​, ಹೋಟೆಲ್​, ಬಾರ್​, ಸ್ಪಾ, ಸಿನಿಮಾ ಥಿಯೇಟರ್​​ಗಳಲ್ಲಿ ಶೇ. 50 ಜನರಿಗೆ ಮಾತ್ರ ಅವಕಾಶ. ಕ್ರೀಡೆಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲೂ ಕೂಡ ಶೇ.50ರಷ್ಟು ಜನ ಮಾತ್ರ ಪಾಲ್ಗೊಳ್ಳಬಹುದು ಎಂದು ಶುಕ್ರವಾರ ಬಿಡುಗಡೆ ಮಾಡಲಾದ ಮಾರ್ಗಸೂಚಿಯಲ್ಲಿ ಮಹಾ ಸರ್ಕಾರ ಆದೇಶ ನೀಡಿದೆ. ಮುಂಬೈನಲ್ಲಿ ಕೊರೊನಾ ಸೋಂಕುನ ಸಂಖ್ಯೆ ಹೆಚ್ಚಳವಾಗಿದೆ. ನಿನ್ನೆ ಮಹಾರಾಷ್ಟ್ರದಲ್ಲಿ 1410 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 683 ಕೊವಿಡ್​ 19 ಪ್ರಕರಣಗಳು ಮುಂಬೈದಲ್ಲೇ ಪತ್ತೆಯಾಗಿವೆ. ಇದು ಅಕ್ಟೋಬರ್​ ತಿಂಗಳ ನಂತರ ಪತ್ತೆಯಾದ ಅತಿಹೆಚ್ಚಿನ ಸಂಖ್ಯೆ.  ಹಾಗೇ, ಮಹಾರಾಷ್ಟ್ರದಲ್ಲಿ ಒಟ್ಟು ಒಮಿಕ್ರಾನ್​ ಸೋಂಕಿತರ ಸಂಖ್ಯೆ ಶುಕ್ರವಾರಕ್ಕೆ 108 ತಲುಪಿದೆ. ಶುಕ್ರವಾರ ಒಂದೇ ದಿನ 20 ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ. 108 ಜನರಲ್ಲಿ 54 ಮಂದಿ ಈಗಾಗಲೇ ಗುಣಮುಖರಾಗಿ ಡಿಸ್​ಚಾರ್ಜ್​ ಆಗಿದ್ದಾರೆ. ಹಾಗೇ, 108 ಪ್ರಕರಣಗಳಲ್ಲಿ ಮುಂಬೈನಲ್ಲಿ 46 ಒಮಿಕ್ರಾನ್​ ಸೋಂಕಿತರಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿವೆ. ಹೀಗೆ ಕೊವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಮತ್ತೆ ಬಿಗಿ ಕ್ರಮಗಳಿಗೆ ಮುಂದಾಗಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಡಿಸೆಂಬರ್ 26, 27ಕ್ಕೆ ಕರೆಂಟ್ ಇರಲ್ಲ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್