6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ

|

Updated on: Nov 30, 2019 | 7:41 AM

ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಶೇಕಡಾ 4.5ರಷ್ಟಿದೆ ಅಂತ ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಮಟ್ಟ ಶೇ.5ಕ್ಕೆ ಕುಸಿದಿತ್ತು. ಇದೀಗ ಮತ್ತೂ ಕೆಳಮಟ್ಟಕ್ಕೆ ಕುಸಿದಿದ್ದು, 6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಜಿಡಿಪಿ ಬೆಳವಣಿಗೆ ದರ ಇಳಿದೆ. ಲಂಕಾಗೆ ₹3 ಸಾವಿರ ಕೋಟಿ ಘೋಷಣೆ: ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ 50 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ಒಟ್ಟು 3 ಸಾವಿರ ಕೋಟಿ ರೂಪಾಯಿ ನೆರವನ್ನು ಶ್ರೀಲಂಕಾಕ್ಕೆ ಘೋಷಿಸಿದ್ದಾರೆ. […]

6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ಜಿಡಿಪಿ
Follow us on

ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಶೇಕಡಾ 4.5ರಷ್ಟಿದೆ ಅಂತ ಕೇಂದ್ರ ಸರ್ಕಾರ ಪ್ರಕಟಿಸಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಮಟ್ಟ ಶೇ.5ಕ್ಕೆ ಕುಸಿದಿತ್ತು. ಇದೀಗ ಮತ್ತೂ ಕೆಳಮಟ್ಟಕ್ಕೆ ಕುಸಿದಿದ್ದು, 6 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಮಟ್ಟಕ್ಕೆ ಜಿಡಿಪಿ ಬೆಳವಣಿಗೆ ದರ ಇಳಿದೆ.

ಲಂಕಾಗೆ ₹3 ಸಾವಿರ ಕೋಟಿ ಘೋಷಣೆ:
ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ 50 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ಒಟ್ಟು 3 ಸಾವಿರ ಕೋಟಿ ರೂಪಾಯಿ ನೆರವನ್ನು ಶ್ರೀಲಂಕಾಕ್ಕೆ ಘೋಷಿಸಿದ್ದಾರೆ. ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆ ನಡೆಸಿ ಈ ಹಣ ಘೋಷಿಸಿದ್ದಾರೆ.

ಫಾಸ್ಟ್‌ಟ್ಯಾಗ್ ಅಳವಡಿಕೆಗೆ ಡಿ.15 ತನಕ ಟೈಮ್‌:
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಲ್ಕ ಪಾವತಿಗಾಗಿ ಫಾಸ್ಟ್ ಟ್ಯಾಗ್‌ ಕಡ್ಡಾಯಗೊಳಿಸಿ ವಿಧಿಸಿದ್ದ ಗಡುವುನ್ನ ಡಿಸೆಂಬರ್ 15ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಫಾಸ್ಟ್‌ ಟ್ಯಾಗ್ ಅಳವಡಿಸುವಂತೆ ಡಿಸೆಂಬರ್‌ 1ರ ತನಕ ಗಡುವು ನೀಡಲಾಗಿತ್ತು. ಇದೀಗ ಈ ಗಡುವುನ್ನ ಕೇಂದ್ರ ಸರ್ಕಾರ ವಿಸ್ತರಿಸಿದೆ.

ಪರಿಸರ ಸ್ನೇಹಿ ರೈಲ್ವೆ ನಿಲ್ದಾಣ:
ಪರಿಸರ ಸ್ನೇಹಿ ವಸ್ತುಗಳಲ್ಲಿ ಟೀ ಮತ್ತು ಆಹಾರ ಪದಾರ್ಥಗಳು ವಿತರಿಸಲು 25ಕ್ಕೂ ಅಧಿಕ ರೈಲ್ವೆ ನಿಲ್ದಾಣಗಳನ್ನು ಗುರುತಿಸಲಾಗಿದೆ ಎಂದು ಭಾರತೀಯ ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದರಲ್ಲಿನ ಎಲ್ಲಾ ನಿಲ್ದಾಣಗಳು ಉತ್ತರ ಭಾರತಕ್ಕೆ ಸೇರಿವೆ. ದಕ್ಷಿಣ ಭಾರತದ ನಿಲ್ದಾಣಗಳು ಯಾವುದೂ ಇಲ್ಲ.