Bipin Rawat Death: ಸೇನಾ ಹೆಲಿಕಾಪ್ಟರ್ ಪತನ ದುರಂತ; ಸಿಡಿಎಸ್ ಬಿಪಿನ್ ರಾವತ್​ ದುರ್ಮರಣ

ಸಿಡಿಎಸ್​ ಬಿಪಿನ್​ ರಾವತ್​ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್​ಗೆ ಹೋಗಿದ್ದರು. ಅಲ್ಲಿಂದ ವೆಲ್ಲಿಂಗ್ಟನ್​ಗೆ ಹೋಗುತ್ತಿದ್ದಾಗ ದುರಂತ ಸಂಭವಿಸಿತ್ತು.

Bipin Rawat Death: ಸೇನಾ ಹೆಲಿಕಾಪ್ಟರ್ ಪತನ ದುರಂತ; ಸಿಡಿಎಸ್ ಬಿಪಿನ್ ರಾವತ್​ ದುರ್ಮರಣ
ಬಿಪಿನ್​ ರಾವತ್​
Follow us
TV9 Web
| Updated By: Lakshmi Hegde

Updated on:Dec 08, 2021 | 6:32 PM

ತಮಿಳುನಾಡಿನ ಕುನೂರ್​​ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಸೇನಾ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್​ ರಾವತ್ (Bipin Rawat) ಮೃತಪಟ್ಟಿದ್ದಾರೆ.  ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವಿನ ಹೋರಾಟದಲ್ಲಿ ಇದ್ದ ಬಿಪಿನ್​ ರಾವತ್ ಮರಣವನ್ನು ಭಾರತೀಯ ವಾಯುಸೇನೆ ದೃಢಪಡಿಸಿದೆ. ಟ್ವೀಟ್ ಮಾಡಿರುವ ಇಂಡಿಯನ್ ಏರ್​ಫೋರ್ಸ್​, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಹೆಲಿಕಾಪ್ಟರ್​​ನಲ್ಲಿದ್ದ ಇತರ 11  ಮಂದಿ ಇಂದಿನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಎಂದು ಹೇಳಿದೆ. 

ಸಿಡಿಎಸ್​ ಬಿಪಿನ್​ ರಾವತ್​ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್​ಗೆ ಹೋಗಿದ್ದರು. ಅಂದರೆ ದೆಹಲಿಯಿಂದ ಕೊಯಂಬತ್ತೂರಿನ ಸೂಲೂರ್​ಗೆ ಬಂದು, ಅಲ್ಲಿಂದ ಮಧ್ಯಾಹ್ನ 12.20ಕ್ಕೆ ವೆಲ್ಲಿಂಗ್ಟನ್​ಗೆ ಸೇನಾ ಹೆಲಿಕಾಪ್ಟರ್​ನಲ್ಲಿ ಪ್ರಯಾಣ ಮಾಡುತ್ತಿದ್ದರು. ಆದರೆ ಈ ಚಾಪರ್ ಕೂನೂರು ಬಳಿ ಪತನವಾಗಿತ್ತು. ಇದರಲ್ಲಿದ್ದ 14 ಮಂದಿ ದುರ್ಮರಣಕ್ಕೀಡಾಗಿದ್ದಾರೆ.  ಬಿಪಿನ್​ ರಾವತ್ ಪತ್ನಿ ಮೃತಪಟ್ಟಿದ್ದು ಆಗಲೇ ಅಧಿಕೃತವಾಗಿತ್ತು. ಆದರೆ ಬಿಪಿನ್​ ರಾವತ್ ಗೆ ಇನ್ನೂ ಚಿಕಿತ್ಸೆ ನಡೆಯುತ್ತಿದೆ ಎನ್ನಲಾಗಿತ್ತು. ಇದೀಗ ವಾಯುಸೇನೆ ಅವರ ಸಾವನ್ನು ದೃಢಪಡಿಸಿದೆ. ಬಿಪಿನ್​ ರಾವತ್​ ಮೃತದೇಹವನ್ನು ನಾಳೆ ದೆಹಲಿಗೆ ತರಲಾಗುವುದು ಎಂದು ಹೇಳಲಾಗಿದೆ.

ಯಾರು ಈ ಬಿಪಿನ್ ರಾವತ್​? ಬಿಪಿನ್ ರಾವತ್​ ಪೂರ್ತಿ ಹೆಸರು ಬಿಪಿನ್​ ಲಕ್ಷ್ಮಣ್​ ಸಿಂಗ್​ ರಾವತ್​. ಇವರಿಗೆ 63 ವರ್ಷ ವಯಸ್ಸಾಗಿತ್ತು. ಮೂಲತಃ ಉತ್ತರಾಖಂಡ್​​ನವಾರಗಿದ್ದು, 2019ರಲ್ಲಿ ಈ ಸಿಡಿಎಸ್​ ಹುದ್ದೆಗೆ ಏರಿದ್ದರು. 2015ರಲ್ಲಿ ನಾಗಾಲ್ಯಾಂಡ್​ ಬಳಿ ನಡೆದಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬಿಪಿನ್ ರಾವತ್ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದರು. ಇಂದು ಬಿಪಿನ್​ ರಾವತ್ ಸಾವಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸೇರಿ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: CDS Bipin Rawat ಸಿಡಿಎಸ್ ಬಿಪಿನ್ ರಾವತ್ ವೃತ್ತಿಜೀವನ: ಸರ್ಜಿಕಲ್ ಸ್ಟ್ರೈಕ್ ಕಾರ್ಯಗತಗೊಳಿಸಿದ್ದ ಗುಡ್ಡಗಾಡು ಸಂಘರ್ಷ ಪರಿಣಿತ

Published On - 6:09 pm, Wed, 8 December 21

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು