AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಮೊದಲ CDS ಆಗಿ ಜನರಲ್ ಬಿಪಿನ್ ರಾವತ್ ನೇಮಕ

ದೆಹಲಿ: ಜನರಲ್ ಬಿಪಿನ್ ರಾವತ್. ಕಳೆದ ಮೂರು ವರ್ಷಗಳಿಂದ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ಇಂದು ನಿವೃತ್ತಿಯಾಗಬೇಕಿದ್ದ ಖಡಕ್ ಆಫೀಸರ್. ಆದರೆ ನಿವೃತ್ತಿಗೂ ಒಂದು ದಿನ ಮುಂಚಿತವಾಗಿ ಬಿಪಿನ್​ ರಾವತ್​ಗೆ ಅದೃಷ್ಟ ಖುಲಾಯಿಸಿದೆ. ಹೊಸ ಜವಾಬ್ದಾರಿ ಸಿಕ್ಕಿದೆ. ಮತ್ತೊಮ್ಮೆ ದೇಶ ಸೇವೆ ಮಾಡೋ ಅವಕಾಶ ದಕ್ಕಿದೆ. ದೇಶದ ಮೊದಲ CDS ಆಗಿ ರಾವತ್ ನೇಮಕ: ದೇಶದ ಮೂರು ಸಶಸ್ತ್ರ ಪಡೆಗಳಾದ ಭೂಸೇನೆ, ನೌಕಾಸೇನೆ ಹಾಗೂ ವಾಯುಸೇನೆಗೆ ಒಬ್ಬರೇ ಮುಖ್ಯಸ್ಥರನ್ನು ನೇಮಿಸುವ ಬಹುದಿನಗಳ ಯೋಜನೆ ಕೊನೆಗೂ ಪೂರ್ಣಗೊಂಡಿದೆ. ನಿರೀಕ್ಷೆಯಂತೆ […]

ದೇಶದ ಮೊದಲ CDS ಆಗಿ ಜನರಲ್ ಬಿಪಿನ್ ರಾವತ್ ನೇಮಕ
ಸಾಧು ಶ್ರೀನಾಥ್​
|

Updated on: Dec 31, 2019 | 5:23 PM

Share

ದೆಹಲಿ: ಜನರಲ್ ಬಿಪಿನ್ ರಾವತ್. ಕಳೆದ ಮೂರು ವರ್ಷಗಳಿಂದ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ಇಂದು ನಿವೃತ್ತಿಯಾಗಬೇಕಿದ್ದ ಖಡಕ್ ಆಫೀಸರ್. ಆದರೆ ನಿವೃತ್ತಿಗೂ ಒಂದು ದಿನ ಮುಂಚಿತವಾಗಿ ಬಿಪಿನ್​ ರಾವತ್​ಗೆ ಅದೃಷ್ಟ ಖುಲಾಯಿಸಿದೆ. ಹೊಸ ಜವಾಬ್ದಾರಿ ಸಿಕ್ಕಿದೆ. ಮತ್ತೊಮ್ಮೆ ದೇಶ ಸೇವೆ ಮಾಡೋ ಅವಕಾಶ ದಕ್ಕಿದೆ.

ದೇಶದ ಮೊದಲ CDS ಆಗಿ ರಾವತ್ ನೇಮಕ: ದೇಶದ ಮೂರು ಸಶಸ್ತ್ರ ಪಡೆಗಳಾದ ಭೂಸೇನೆ, ನೌಕಾಸೇನೆ ಹಾಗೂ ವಾಯುಸೇನೆಗೆ ಒಬ್ಬರೇ ಮುಖ್ಯಸ್ಥರನ್ನು ನೇಮಿಸುವ ಬಹುದಿನಗಳ ಯೋಜನೆ ಕೊನೆಗೂ ಪೂರ್ಣಗೊಂಡಿದೆ. ನಿರೀಕ್ಷೆಯಂತೆ ಭೂಸೇನಾ ಮುಖ್ಯಸ್ಥರಾಗಿರುವ ಜನರಲ್ ಬಿಪಿನ್‌ ರಾವತ್‌ ಅವರನ್ನ ದೇಶದ ಮೊದಲ ಸೇನಾ ಸಿಬ್ಬಂದಿ ಮುಖ್ಯಸ್ಥ ಅಥವಾ ಚೀಫ್‌ ಆಫ್‌ ಡಿಫೆನ್ಸ್‌ ಸ್ಟಾಫ್​ರನ್ನಾಗಿ ನೇಮಕ ಮಾಡಲಾಗಿದೆ.

ಸಿಡಿಎಸ್​ ಆಗಿರೋ ಬಿಪಿನ್ ರಾವತ್, ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ಜೊತೆ ನೇರ ಸಂಪರ್ಕ ಹೊಂದಲಿದ್ದಾರೆ. ಜೊತೆಗೆ ಮೂರೂ ಪಡೆಗಳ ಮುಖ್ಯಸ್ಥರು ಚೀಫ್​ ಆಫ್​ ಡಿಫೆನ್ಸ್​ ಸ್ಟಾಫ್​ಗೆ ರಿಪೋರ್ಟ್ ಮಾಡಲಿದ್ದಾರೆ.

ಅಂದ್ಹಾಗೆ ಒಬ್ಬರೇ ಪರಮೋಚ್ಚ ಮಿಲಿಟರಿ ಅಧಿಕಾರಿ ಇರಬೇಕೆಂಬ ಕೂಗು ದಶಕಗಳಿಂದಲೂ ಇದೆ. 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಸೇನೆಯ ಹಲವು ಲೋಪದೋಷಗಳು ಕಣ್ಣಿಗೆ ಕಟ್ಟುವಂತಿದ್ದವು. ಅದನ್ನ ಪರಿಶೀಲಿಸಲು ರಚನೆಯಾಗಿದ್ದ ಸಮಿತಿಯು ಮೂರೂ ಪಡೆಗಳ ಮಧ್ಯೆ ಸಮನ್ವಯತೆ ಸಾಧಿಸುವ ಒಬ್ಬ ಮಿಲಿಟರಿ ಸಲಹೆಗಾರನ ಅಗತ್ಯ ಇದೆ ಅಂತ ಶಿಫಾರಸು ಮಾಡಿತ್ತು. ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಕೂಡ ಸಿಡಿಎಸ್ ಹುದ್ದೆ ಸ್ಥಾಪಿಸುವ ಬಗ್ಗೆ ಪ್ರಸ್ತಾಪಿಸಿದ್ದರು.

ಸಿಡಿಎಸ್​ ಜವಾಬ್ದಾರಿ ಏನು? ದೇಶದ ರಕ್ಷಣೆಗೆ ಸಂಬಂಧಿಸಿದಂತೆ ಸೇನೆಯ ಮೂರೂ ಪಡೆಗಳ ಪರವಾಗಿ ಸರ್ಕಾರಕ್ಕೆ ಸಲಹೆ ನೀಡುವ ಮುಖ್ಯ ಪಾತ್ರವನ್ನ ಸಿಡಿಎಸ್‌ ನಿರ್ವಹಿಸಲಿದೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸಮಗ್ರ ವ್ಯವಹಾರ ಮತ್ತು ಮೂರೂ ಪಡೆಗಳ ನಡುವೆ ಸಮನ್ವಯತೆ ಸಾಧಿಸುವುದು ಸಿಡಿಎಸ್‌ ಜವಾಬ್ದಾರಿಯಾಗಿರಲಿದೆ.

ಸಿಡಿಎಸ್ ಹುದ್ದೆಯು ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಯ ಮುಖ್ಯಸ್ಥರ ಶ್ರೇಣಿಯಲ್ಲೇ ಇರುತ್ತದೆ. ಆದರೆ ‘ಸಮಾನರ ನಡುವೆ ಮೊದಲಿಗ’ ಆಗಿರುತ್ತದೆ ಸಿಡಿಎಸ್​ ಹುದ್ದೆ. ಅಲ್ಲದೆ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಸೇನಾ ವ್ಯವಹಾರಗಳ ವಿಭಾಗದ ಮುಖ್ಯಸ್ಥರಾಗಿಯೂ ಕೆಲಸ ಮಾಡಬೇಕಾಗುತ್ತೆ. ಸಲಕರಣೆಗಳು ಹಾಗೂ ಶಸ್ತ್ರಾಸ್ತ್ರಗಳ ಖರೀದಿ, ಸಿಬ್ಬಂದಿ ತರಬೇತಿ ಮತ್ತು ಸಿಬ್ಬಂದಿ ನಿಯೋಜನೆ ವಿಚಾರದಲ್ಲಿ ಮೂರೂ ಪಡೆಗಳ ನಡುವೆ ಸಮನ್ವಯ ತರುವ ಹೊಣೆ ಸಿಡಿಎಸ್‌ ಮೇಲೆ ಇರಲಿದೆ.

ಒಟ್ನಲ್ಲಿ, ಹೊಸದಾಗಿ ರಚನೆಯಾಗಿರುವ ಚೀಫ್ ಆಫ್ ಡಿಫೆನ್ಸ್ ಹುದ್ದೆಗೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನ ನೇಮಕ ಮಾಡಲಾಗಿದ್ದು, ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನರಾವನೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ