ತರಕಾರಿ ಮಾರುಕಟ್ಟೆಯಲ್ಲಿ ಭಾರತದ UPI ವ್ಯವಸ್ಥೆ ಮೂಲಕ ಹಣ ಪಾವತಿಸಿದ ಜರ್ಮನಿ ಸಚಿವ

India's UPI system: ಭಾರತದಲ್ಲಿನ ಜರ್ಮನ್ ರಾಯಭಾರಿ ಕಚೇರಿಯೂ ದೇಶದ ಯುಪಿಐ ವ್ಯವಸ್ಥೆಯನ್ನು ಶ್ಲಾಘಿಸಿದೆ. ಜರ್ಮನಿಯ ಡಿಜಿಟಲ್​ ಮತ್ತು ಸಾರಿಗೆ ಇಲಾಖೆ ಸಚಿವ ವೋಲ್ಕರ್ ವಿಸ್ಸಿಂಗ್​ ಯುಪಿಐ ಬಳಸಿ ತರಕಾರಿ ಮಾರಾಟಗಾರರಿಗೆ ಪಾವತಿ ಮಾಡಿದ್ದಾರೆ. ಭಾರತದ ಡಿಜಿಟಲ್​​ ಪಾವತಿ ಮಾದರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ತರಕಾರಿ ಮಾರುಕಟ್ಟೆಯಲ್ಲಿ ಭಾರತದ UPI ವ್ಯವಸ್ಥೆ ಮೂಲಕ ಹಣ ಪಾವತಿಸಿದ ಜರ್ಮನಿ ಸಚಿವ
ಭಾರತೀಯ ಯುಪಿಐ ಮಾದರಿ ಮೂಲಕ ಹಣ ಪಾವತಿ ಮಾಡಿದ ಜರ್ಮನಿ ಸಚಿವ
Follow us
ಗಂಗಾಧರ​ ಬ. ಸಾಬೋಜಿ
|

Updated on:Aug 20, 2023 | 9:31 PM

ಭಾರತದಲ್ಲಿನ ಜರ್ಮನ್ ರಾಯಭಾರ ಕಚೇರಿ ದೇಶದ ಡಿಜಿಟಲ್ ಮೂಲಸೌಕರ್ಯ ವ್ಯವಸ್ಥೆಯನ್ನು ಶ್ಲಾಘಿಸಿದೆ. ಇದು ದೇಶದ ಯಶಸ್ವಿ ಕಥೆಗಳಲ್ಲಿ ಒಂದು ಎಂದು ಬಣ್ಣಿಸಿದೆ. ಜರ್ಮನಿಯ ಡಿಜಿಟಲ್​ ಮತ್ತು ಸಾರಿಗೆ ಇಲಾಖೆ ಸಚಿವ ವೋಲ್ಕರ್ ವಿಸ್ಸಿಂಗ್ (Volker Wissing) ಅವರು ಭಾರತದಲ್ಲಿ ಹಣ ವಹಿವಾಟುಗಳನ್ನು ಮಾಡಲು ಯುಪಿಐ ಅನ್ನು ಬಳಸಿದರು. ಯುಪಿಐ ಹಣ ವರ್ಗಾವಣೆ ಅನುಭವದಿಂದ ಅವರು ಆಕರ್ಷಿತರಾಗಿದ್ದು, ಭಾರತದ ಡಿಜಿಟಲ್​ ಪಾವತಿ ಮಾದರಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಭಾರತದಲ್ಲಿನ ಜರ್ಮನ್ ರಾಯಭಾರ ಕಚೇರಿಯು ಸಚಿವ ವೋಲ್ಕರ್ ವಿಸ್ಸಿಂಗ್ ಯುಪಿಐ ಬಳಸುತ್ತಿರುವ ವಿಡಿಯೋ ಮತ್ತು ಕೆಲವು ಫೋಟೋಗಳನ್ನು ಟ್ವೀಟ್​ ಮೂಲಕ ಹಂಚಿಕೊಂಡಿದೆ.

‘ಭಾರತದ ಯಶಸ್ಸಿನ ಕಥೆಗಳಲ್ಲಿ ಡಿಜಿಟಲ್ ಮೂಲಸೌಕರ್ಯವೂ ಒಂದು. ಯುಪಿಐ ಪ್ರತಿಯೊಬ್ಬರಿಗೂ ಸೆಕೆಂಡುಗಳಲ್ಲಿ ವಹಿವಾಟು ನಡೆಸಲು ಅನುವು ಮಾಡಿಕೊಡುತ್ತಿದೆ. ಲಕ್ಷಾಂತರ ಭಾರತೀಯರು ಇದನ್ನು ಬಳಸುತ್ತಾರೆ. ಡಿಜಿಟಲ್​ ಮತ್ತು ಸಾರಿಗೆ ಇಲಾಖೆ ಸಚಿವ ವೋಲ್ಕರ್ ವಿಸ್ಸಿಂಗ್ ಯುಪಿಐ ಅನ್ನು ಬಳಕೆ ಮಾಡಿದ್ದು, ಯುಪಿಐ ಪಾವತಿಗಳ ಸ್ವಅನುಭವ ಪಡೆದ ಅವರು ಇದರಿಂದ ಆಕರ್ಷಿತರಾಗಿದ್ದಾರೆ’ ಎಂದು ಭಾರತದಲ್ಲಿನ ಜರ್ಮನ್ ರಾಯಭಾರ ಕಚೇರಿ ತನ್ನ ಟ್ವೀಟರ್​ನಲ್ಲಿ ಬರೆದುಕೊಂಡಿದೆ.

ಭಾರತದಲ್ಲಿನ ಜರ್ಮನ್ ರಾಯಭಾರ ಕಚೇರಿಯ ಟ್ವೀಟ್​​

ಆಗಸ್ಟ್ 19 ರಂದು ಬೆಂಗಳೂರಿನಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಸಚಿವ ವೋಲ್ಕರ್ ವಿಸ್ಸಿಂಗ್ ಭಾಗವಹಿಸಿದ್ದರು. ಏತನ್ಮಧ್ಯೆ, ಜಿ 20 ಡಿಜಿಟಲ್ ಮಂತ್ರಿಗಳ ಸಭೆ ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ ಎಂದು ಜರ್ಮನ್ ರಾಯಭಾರ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಚಂದ್ರಯಾನ-3: ಆಗಸ್ಟ್ 23ರಂದು ಚಂದ್ರನ ಮೇಲೆ ಇಳಿಯಲಿದೆ ವಿಕ್ರಮ್ ಲ್ಯಾಂಡರ್

ಸಚಿವ ವಿಸ್ಸಿಂಗ್ ಮತ್ತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ನಮ್ಮ ಡಿಜಿಟಲ್ ಸಂವಾದದ ಮೂಲಕ ಐಟಿ ಮತ್ತು ವಿಶೇಷವಾಗಿ ಎಐನಲ್ಲಿ ಭಾರತ ಮತ್ತು ಜರ್ಮನ್ ಸಹಕಾರವನ್ನು ಭದ್ರಗೊಳಿಸುವ ಬಗ್ಗೆ ಪ್ರಾಯೋಗಿಕ ಚರ್ಚೆ ಮಾಡಲಾಗಿದೆ.

ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಭಾರತದಲ್ಲಿ ಆವಿಷ್ಕರಿಸಲಾದ ಮೊಬೈಲ್ ಆಧಾರಿತ ವೇಗದ ಪಾವತಿ ವ್ಯವಸ್ಥೆಯಾಗಿದೆ. ಇದು ಗ್ರಾಹಕರಿಗೆ ದಿನದ 24 ಗಂಟೆಯೂ ತ್ವರಿತ ಪಾವತಿಗಳನ್ನು ಮಾಡಲು ಅನುವು ಮಾಡಿಕೊಡುತ್ತದೆ. ಇಲ್ಲಿಯವರೆಗೆ, ಶ್ರೀಲಂಕಾ, ಫ್ರಾನ್ಸ್, ಯುಎಇ ಮತ್ತು ಸಿಂಗಾಪುರ್​​ ಸೇರಿದಂತೆ ಇತರೆ ದೇಶಗಳು ಪಾವತಿ ಪರಿಹಾರಗಳಲ್ಲಿ ಭಾರತದೊಂದಿಗೆ ಪಾಲುದಾರಿಕೆ ಹೊಂದಿವೆ.

ಇದನ್ನೂ ಓದಿ: ಯಾರನ್ನೋ ಮೆಚ್ಚಿಸಲು ರಾಜನ್​ರಿಂದ ಗಾಳಿಯಲ್ಲಿ ಗುದ್ದುವ ಕೆಲಸ: ಮಾಜಿ ಆರ್​​ಬಿಐ ಗವರ್ನರ್​ಗೆ ಕೇಂದ್ರ ಸಚಿವ ಎ ವೈಷ್ಣವ್ ತರಾಟೆ

ಭಾರತ ಮತ್ತು ಸಿಂಗಾಪುರ ತಮ್ಮ ಪಾವತಿ ವ್ಯವಸ್ಥೆಗಳನ್ನು ಸಂಪರ್ಕಿಸಲು 2023 ರ ಫೆಬ್ರವರಿಯಲ್ಲಿ ಅಭೂತಪೂರ್ವ ಒಪ್ಪಂದಕ್ಕೆ ಸಹಿ ಹಾಕಿತ್ತು. ಭಾರತದ ಏಕೀಕೃತ ಪಾವತಿ ಇಂಟರ್ಫೇಸ್ ಪಾವತಿ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಫ್ರಾನ್ಸ್ ಪ್ರಮುಖ ಹೆಜ್ಜೆ ಇಟ್ಟಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:24 pm, Sun, 20 August 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್