AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಪಾಕಿಸ್ತಾನದಲ್ಲಿ ಮದುವೆಯಾಗಿ; ಐಎಸ್​ಐ ಏಜೆಂಟ್​ ಜೊತೆಗಿನ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಚಾಟ್ ಬಯಲು

ಐಎಸ್​ಐ ಏಜೆಂಟ್ ಜೊತೆ ಭಾರತದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ನಡೆಸಿದ್ದ ವಾಟ್ಸಾಪ್ ಚಾಟ್​ ಇದೀಗ ಬಯಲಾಗಿದೆ. ಜ್ಯೋತಿ ಮಲ್ಹೋತ್ರಾ ಅವರ ಸೋರಿಕೆಯಾದ ವಾಟ್ಸಾಪ್ ಚಾಟ್‌ಗಳು ಅವರ ಪಾಕಿಸ್ತಾನದ ಹೊಗಳಿಕೆ ಮತ್ತು ಅಲ್ಲಿ ಆಕೆ ಮದುವೆಯಾಗುವ ಬಯಕೆಯನ್ನು ಬಹಿರಂಗಪಡಿಸಿವೆ. ಆಕೆಯೊಂದಿಗೆ ಸಂಪರ್ಕದಲ್ಲಿದ್ದ ಐಎಸ್‌ಐ ಆಪರೇಟಿವ್ ಅಲಿ ಹಸನ್‌ ಜೊತೆ ಚಾಟ್ ಮಾಡಿದ್ದ ಆಕೆ ಪಾಕಿಸ್ತಾನದಲ್ಲಿ ನನ್ನನ್ನು ಮದುವೆಯಾಗಿ ಎಂದು ಕೇಳಿದ್ದರು ಎಂದು ವರದಿಯಾಗಿದೆ.

ನನ್ನನ್ನು ಪಾಕಿಸ್ತಾನದಲ್ಲಿ ಮದುವೆಯಾಗಿ; ಐಎಸ್​ಐ ಏಜೆಂಟ್​ ಜೊತೆಗಿನ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಚಾಟ್ ಬಯಲು
Jyoti Malhotra
ಸುಷ್ಮಾ ಚಕ್ರೆ
|

Updated on: May 21, 2025 | 3:30 PM

Share

ನವದೆಹಲಿ, ಮೇ 21: ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಬಂಧಿತರಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ (Jyoti Malhotra) ಪಾಕಿಸ್ತಾನ ಹೈಕಮಿಷನ್ ಅಧಿಕಾರಿ ಡ್ಯಾನಿಶ್ ಅವರನ್ನು ಮದುವೆಯಾಗಿದ್ದಾರೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದರ ನಡುವೆ ಆಕೆಯ ಕೆಲವು ವಾಟ್ಸಾಪ್ ಚಾಟ್‌ಗಳು ಈಗ ಅವರು ಪಾಕಿಸ್ತಾನದಲ್ಲಿ ಮದುವೆಯಾಗಲು ಬಯಸಿದ್ದಾರೆಂದು ಬಹಿರಂಗಪಡಿಸಿವೆ. ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಗಾಗಿ ಕೆಲಸ ಮಾಡುತ್ತಿದ್ದ ಏಜೆಂಟ್ ಅಲಿ ಹಸನ್ ಅವರೊಂದಿಗಿನ ಜ್ಯೋತಿ ಮಲ್ಹೋತ್ರಾ ನಡೆಸಿದ್ದ ವಾಟ್ಸಾಪ್ ಚಾಟ್‌ಗಳು ತನಿಖೆ ವೇಳೆ ಬಯಲಾಗಿವೆ. ಅದರಲ್ಲಿ ಗೂಢಚಾರಿಯಾಗಿದ್ದ ಜ್ಯೋತಿ ​​ಪಾಕಿಸ್ತಾನವನ್ನು ಹೊಗಳಿದ್ದಾರೆ ಮತ್ತು ಅಲ್ಲಿಯೇ ಮದುವೆಯಾಗಲು ಬಯಸಸಿದ್ದರು ಎಂಬುದು ಬಯಲಾಗಿದೆ.

“ನನ್ನನ್ನು ಪಾಕಿಸ್ತಾನದಲ್ಲಿ ಮದುವೆಯಾಗಿ” ಎಂದು ಜ್ಯೋತಿ ಹಸನ್ ಅವರ ಜೊತೆ ಚಾಟ್ ಮಾಡಿದ್ದರು ಎಂದು ವರದಿಯಾಗಿದೆ. ಅದಕ್ಕೆ ಪ್ರತಿಕ್ರಿಯಿಸಿದ್ದ ಹಸನ್, “ಜೋ (ಜ್ಯೋತಿ), ನೀವು ಯಾವಾಗಲೂ ಸಂತೋಷವಾಗಿರಲು ನಾನು ಪ್ರಾರ್ಥಿಸುತ್ತೇನೆ, ನೀವು ನಗುತ್ತಲೇ ಇರಬೇಕು. ನಿಮ್ಮ ಜೀವನದಲ್ಲಿ ಎಂದಿಗೂ ನಿರಾಶೆಗಳನ್ನು ಎದುರಿಸಬಾರದು” ಎಂದು ಹಸನ್ ಆಕೆಗೆ ಹಿಂದಿಯಲ್ಲಿ ಸಂದೇಶ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ವಾಟ್ಸಾಪ್ ಚಾಟ್‌ಗಳು ಇಬ್ಬರ ನಡುವಿನ ಹಲವಾರು ಗುಪ್ತ ಸಂಭಾಷಣೆಗಳನ್ನು ಬಹಿರಂಗಪಡಿಸಿವೆ. ಅವು ಭಾರತದ ರಹಸ್ಯ ಕಾರ್ಯಾಚರಣೆಗಳಿಗೆ ಸಂಬಂಧಿಸಿದವು ಎನ್ನಲಾಗಿದೆ.

ಇದನ್ನೂ ಓದಿ: ಆಪರೇಷನ್ ಸಿಂಧೂರದ ಬಗ್ಗೆ ಮತ್ತೊಮ್ಮೆ ಜೈಶಂಕರ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ಪಾಕಿಸ್ತಾನದಲ್ಲಿ ಅದೇ ಹೆಡ್​ಲೈನ್! 

ಇದನ್ನೂ ಓದಿ
Image
ಸರ್ವಪಕ್ಷ ಸಂಸದರ ನಿಯೋಗಕ್ಕೆ ಅಭಿಷೇಕ್ ಬ್ಯಾನರ್ಜಿಯನ್ನು ಕಳಿಸ್ತೀನಿ: ಮಮತಾ
Image
ಕದನ ವಿರಾಮದಲ್ಲಿ ಅಮೆರಿಕ ಪಾತ್ರವಿಲ್ಲ;ಸಂಸದರಿಗೆ ವಿಕ್ರಮ್ ಮಿಶ್ರಿ ಸ್ಪಷ್ಟನೆ
Image
ಜೈಶಂಕರ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ಪಾಕ್​ನಲ್ಲಿ ಅದೇ ಹೆಡ್​ಲೈನ್!
Image
ಸೋಫಿಯಾ ಕುರಿತ ಹೇಳಿಕೆಗೆ ವಿಜಯ್ ಶಾ ವಿರುದ್ಧ ತನಿಖೆಗೆ ಸುಪ್ರೀಂ ಆದೇಶ

ಹರಿಯಾಣದ ಹಿಸಾರ್‌ನಲ್ಲಿ ವಾಸಿಸುತ್ತಿದ್ದ ಮತ್ತು ‘ಟ್ರಾವೆಲ್ ವಿತ್ ಜೋ’ ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದ ಮಲ್ಹೋತ್ರಾ ಅವರನ್ನು ಕಳೆದ ವಾರ ಬಂಧಿಸಲಾಯಿತು. ಮೂಲಗಳು ಸೂಚಿಸುವಂತೆ, ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಗಾಗಿ ಕೆಲಸ ಮಾಡುತ್ತಿದ್ದ ಅಲಿ ಹಸನ್ ಜೊತೆ ಆಕೆ ನಿರಂತರ ಸಂಪರ್ಕದಲ್ಲಿದ್ದರು.

‘ಆಪರೇಷನ್ ಸಿಂಧೂರ್’ ಸಂದರ್ಭದಲ್ಲಿ ಭಾರತದಲ್ಲಿ ಬ್ಲ್ಯಾಕೌಟ್ ಹೇರಿದ ಬಗ್ಗೆ ಜ್ಯೋತಿ ಮಲ್ಹೋತ್ರಾ ಪಾಕಿಸ್ತಾನಕ್ಕೆ ವಿವರಗಳನ್ನು ಸೋರಿಕೆ ಮಾಡಿದ್ದಾರೆ ಎಂದು ತಿಳಿದ ಕೆಲವೇ ಗಂಟೆಗಳ ನಂತರ ಈ ವಿಷಯ ಹೊರಬಿದ್ದಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿರುವಾಗ ಆಕೆ ಡ್ಯಾನಿಶ್ ಜೊತೆ ಸಂಪರ್ಕದಲ್ಲಿದ್ದರು. ಆದರೆ, ಈ ವರ್ಷದ ಮಾರ್ಚ್‌ನಲ್ಲಿ ಜ್ಯೋತಿ ಅವರು ಡ್ಯಾನಿಶ್ ಜೊತೆಗಿನ ತಮ್ಮ ಚಾಟ್‌ಗಳನ್ನು ಡಿಲೀಟ್ ಮಾಡಿದ್ದಾರೆ ಎಂದು ತನಿಖೆಗಳು ಬಹಿರಂಗಪಡಿಸಿವೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ವೇಳೆ ಗೋಲ್ಡನ್ ಟೆಂಪಲ್​ನಲ್ಲಿ ಬಂದೂಕು ಇಟ್ಟಿರಲಿಲ್ಲ; ಭಾರತೀಯ ಸೇನೆ ಸ್ಪಷ್ಟನೆ

ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಮೇ 17ರಂದು ಜ್ಯೋತಿ ಮಲ್ಹೋತ್ರಾ ಅವರನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ