ಜೀವನಪರ್ಯಂತ ವಿರೋಧ ಪಕ್ಷದಲ್ಲಿ ಕೂರಲು ರೆಡಿಯಾಗಿ; ರಾಹುಲ್ ಗಾಂಧಿ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿ
ಸೆಬಿ ಅಧ್ಯಕ್ಷೆ ಮಾಧಬಿ ಬುಚ್ ಮತ್ತು ಅವರ ಪತಿ ಕುರಿತ ಇತ್ತೀಚಿನ ಹಿಂಡೆನ್‌ಬರ್ಗ್ ವರದಿಯ ಕುರಿತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ, ವಿಷಕಾರಿ ಮನುಷ್ಯ ಎಂದು ಅವರು ಟೀಕಿಸಿದ್ದಾರೆ.
ನವದೆಹಲಿ: ಹೊಸ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯನ್ನು ಅನುಮೋದಿಸಿದ್ದಕ್ಕಾಗಿ ಮತ್ತು ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಧ್ಯಕ್ಷೆ ಮಾಧಬಿ ಬುಚ್ ಅವರ ಮೇಲಿನ ಆರೋಪಗಳನ್ನು ಅನುಮೋದಿಸಿದ ಕಾರಣಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ವಿರುದ್ಧ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಂಗನಾ ರಣಾವತ್ “ರಾಹುಲ್ ಗಾಂಧಿ ರಾಷ್ಟ್ರವನ್ನು ಅಸ್ಥಿರಗೊಳಿಸಲು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಕಹಿ ಮನಸಿನ, ವಿಷಕಾರಿ ಮತ್ತು ವಿನಾಶಕಾರಿ ವ್ಯಕ್ತಿಯಾಗಿದ್ದಾರೆ. ತಾವು ಪ್ರಧಾನಿಯಾಗಲು ಸಾಧ್ಯವಾಗದಿದ್ದರೆ ಈ ರಾಷ್ಟ್ರವನ್ನು ನಾಶಪಡಿಸಬೇಕೆಂಬುದೇ ಅವರ ಅಜೆಂಡಾ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ಲೋಕಸಭೆಯಲ್ಲಿ ವಕ್ಫ್ ಮಸೂದೆ ಚರ್ಚೆ ವೇಳೆ ರಾಹುಲ್ ಗಾಂಧಿ ನಿದ್ರೆ; ಲೇವಡಿ ಮಾಡಿದ ಬಿಜೆಪಿ ನಾಯಕರು
“ಜೀವನ ಪೂರ್ತಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಸಿದ್ಧರಾಗಿರಿ” ಎಂದು ಬಿಜೆಪಿ ನಾಯಕಿ ಕಂಗನಾ ರಣಾವತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಟೀಕೆ ಮಾಡಿದ್ದಾರೆ.
Rahul Gandhi is the most dangerous man, he is bitter, poisonous and destructive, his agenda is that if he can’t be the Prime Minister then he might as well destroy this nation. Hindenberg report targeting our stock market that Rahul Gandhi was endorsing last night has turned out…
— Kangana Ranaut (@KanganaTeam) August 12, 2024
ಭಾನುವಾರದಂದು ರಾಹುಲ್ ಗಾಂಧಿ ಅವರು ಸೆಬಿಯ ಕಾರ್ಯಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಅದರ ಅಧ್ಯಕ್ಷೆ ಮಾಧಬಿ ಬುಚ್ ವಿರುದ್ಧ ಯುಎಸ್ ಶಾರ್ಟ್-ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್ ಇತ್ತೀಚೆಗೆ ಮಾಡಿದ ಆರೋಪಗಳ ನಂತರ ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದರು. ಅದಾನಿ ಮನಿ-ಸೈಫನಿಂಗ್ ಹಗರಣದಲ್ಲಿ ಬಳಸಲಾದ ಕಡಲಾಚೆಯ ನಿಧಿಯಲ್ಲಿ ಬುಚ್ ಮತ್ತು ಅವರ ಪತಿ ಪಾಲುಗಳನ್ನು ಹೊಂದಿದ್ದಾರೆ ಎಂದು ಆರೋಪಗಳು ಕೇಳಿಬಂದಿತ್ತು. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಆಸಕ್ತಿ ವಹಿಸುತ್ತದೆಯೇ ಎಂದು ರಾಹುಲ್ ಗಾಂಧಿ ಕೇಳಿದ್ದರು.
ಹಿಂಡೆನ್‌ಬರ್ಗ್ ಸಂಶೋಧನಾ ವರದಿಯ ಆರೋಪಗಳನ್ನು ಮಾಧಬಿ ಪುರಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ತಿರಸ್ಕರಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ